ಮುರುಗೇಶ್ ನಿರಾಣಿ ಪುತ್ರನ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಅನುಮತಿ

ಸಾಂದರ್ಭಿಕ ಚಿತ್ರ | PC : PTI
ನವದೆಹಲಿ : ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಪುತ್ರ ವಿಜಯ್ ನಿರಾಣಿ ಮತ್ತು ಇತರರ ವಿರುದ್ಧ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಅವಕಾಶ ನೀಡಿದೆ.
ಮುಧೋಳದ ನಿರಾಣಿ ಶುಗರ್ಸ್ನ ಡಿಸ್ಟಿಲರಿ ಘಟಕದ ಎಫ್ಲ್ಯುಯೆಂಟ್ ಟ್ರೀಟ್ಮೆಂಟ್ ಪ್ಲಾಂಟ್ನ (ಇಟಿಪಿ) ಬಾಯ್ಲರ್ ಸ್ಫೋಟಗೊಂಡು ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಸುಪ್ರೀಂ ಆದೇಶ ಹೊರಡಿಸಿದೆ.
ಏನಿದು ಪ್ರಕರಣ? :
ನಿರಾಣಿ ಶುಗರ್ಸ್ ಲಿಮಿಟೆಡ್ ಕಂಪನಿಯ ನಿರ್ದೇಶಕರಾಗಿರುವ ವಿಜಯ್ ನಿರಾಣಿ, ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ನ ಡಿಸ್ಟಿಲರಿ ಫ್ಯಾಕ್ಟರಿಯಲ್ಲಿ ತ್ಯಾಜ್ಯ ನಿರ್ವಹಣಾ ಘಟಕವೊಂದನ್ನು (ಇಟಿಪಿ) ಸ್ಥಾಪಿಸಿದ್ದರು. ಆ ಘಟಕಕ್ಕೆ ಅನುಮತಿ ಪಡೆದಿರಲಿಲ್ಲ. ಆ ಘಟಕದಲ್ಲಿ 2018ರ ಡಿಸೆಂಬರ್ 16ರಂದು ಬಾಯ್ಲರ್ ಸ್ಫೋಟಗೊಂಡಿದ್ದು. ಆ ದುರ್ಘಟನೆಯಲ್ಲಿ ಆರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದರು.
Next Story





