Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಧರ್ಮಾತೀತವಾಗಿ ರಾಜ್ಯವನ್ನು ಕಟ್ಟಿದ...

ಧರ್ಮಾತೀತವಾಗಿ ರಾಜ್ಯವನ್ನು ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ31 Aug 2025 7:11 PM IST
share
ಧರ್ಮಾತೀತವಾಗಿ ರಾಜ್ಯವನ್ನು ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿ.ಕೆ.ಶಿವಕುಮಾರ್

ಬೆಂಗಳೂರು, ಅ. 31: ‘ಮನುಷ್ಯ ಧರ್ಮವನ್ನು ಮೂಲವಾಗಿಟ್ಟುಕೊಂಡು ಮೈಸೂರು ಅರಸರು ಹಾಗೂ ಅವರ ವಂಶಸ್ಥರು ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಜಾತ್ಯತೀತ, ಧರ್ಮಾತೀತವಾಗಿ ಕರ್ನಾಟಕ ರಾಜ್ಯವನ್ನು ಕಟ್ಟಿದ ಇತಿಹಾಸ ಅರಸು ಸಮುದಾಯಕ್ಕಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರವಿವಾರ ಇಲ್ಲಿನ ಅರಮನೆ ಮೈದಾನದಲ್ಲಿ ನಡೆದ ಅರಸು ಅಸೋಸಿಯೇಷನ್‍ನ ಸುವರ್ಣ ಮಹೋತ್ಸವದಲ್ಲಿ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಅರಸು ಸಮುದಾಯವು ಗಾತ್ರದಲ್ಲಿ ಚಿಕ್ಕದಿರಬಹುದು. ಆದರೆ, ಈ ರಾಜ್ಯಕ್ಕೆ ಅವರು ನೀಡಿರುವ ಕೊಡುಗೆ ಬಹು ದೊಡ್ಡದು. ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪರಾಜಮ್ಮಣ್ಣಿ, ಜಯಚಾಮರಾಜೇಂದ್ರ ಒಡೆಯರ್ ಹೀಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.

ಕನ್ನಂಬಾಡಿ ಕಟ್ಟೆ, ವಾಣಿವಿಲಾಸ ಸಾಗರ ಅಣೆಕಟ್ಟು, ಜೆ.ಸಿ. ಎಂಜಿನಿಯರ್ ಕಾಲೇಜು, ವಿಕ್ಟೋರಿಯಾ ಆಸ್ಪತ್ರೆ ಹೀಗೆ ಹಲವಾರು ಜನೋಪಕಾರಿ ಕೆಲಸಗಳಿಗೆ ಅಡಿಪಾಯ ಹಾಕಿಕೊಟ್ಟವರು ಮೈಸೂರು ಅರಸರು. ವಿದ್ಯುತ್ ಉತ್ಪಾದನೆ ಸೇರಿದಂತೆ ರಾಜ್ಯದ ಪ್ರಮುಖ ಸಂಸ್ಥೆಗಳ ಸ್ಥಾಪನೆಗೆ ಅಡಿಪಾಯ ಹಾಕಿಕೊಟ್ಟವರು ಮೈಸೂರಿನ ಒಡೆಯರು. ಇವರು ನೆಟ್ಟಿರುವ ಮರದ ಫಲವನ್ನು ನಾವೆಲ್ಲರೂ ತಿನ್ನುತ್ತಿದ್ದೇವೆ ಎಂದು ಅವರು ನುಡಿದರು.

ಮೀಸಲಾತಿ-ನಿವೇಶನದ ಬಗ್ಗೆ ಚರ್ಚೆ: ‘ಅರಸು ಸಮುದಾಯಕ್ಕೆ ಮೀಸಲಾತಿ ಸೇರಿದಂತೆ ಇತರೇ ಅನುಕೂಲಗಳನ್ನು ಕಲ್ಪಿಸಿಕೊಡಬೇಕೆಂದು ಮನವಿ ಸಲ್ಲಿಸಿದ್ದಾರೆ. ಇದರ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು. ಸಂಘಕ್ಕೆ ನಿವೇಶನ ನೀಡುವ ಬಗ್ಗೆ ರಾಜ ವಂಶಸ್ಥರ ಜೊತೆಯಲ್ಲಿ ಚರ್ಚೆ ಮಾಡಿ ನಿಮ್ಮ ಬೇಡಿಕೆ ಈಡೇರಿಸುವ ಬಗ್ಗೆ ಕೆಲಸ ಮಾಡಲಾಗುವುದು’ ಎಂದು ಅವರು ಭರವಸೆ ನೀಡಿದರು.

ಮೈಸೂರು ಮಹಾರಾಜರು ಯಾವ ಧರ್ಮದಲ್ಲಿ ನಡೆಯಬೇಕು, ಯಾವ ಧರ್ಮವನ್ನ ಉಳಿಸಿಕೊಳ್ಳಬೇಕು ಎಂದು ಯಾವತ್ತೂ ಮಾತನಾಡಲಿಲ್ಲ. ಏಕೆಂದರೆ ಧರ್ಮ ಯಾವುದಾದರೂ ಇರಲಿ, ತತ್ವ, ನಾಮ ನೂರಾರೂ ಇದ್ದರೂ ದೈವವೊಂದೇ. ಪೂಜೆ ಹಲವಾದರೂ ಭಕ್ತಿಯೊಂದೇ, ದೇವನೊಬ್ಬ ನಾಮ ಹಲವು ಎಂದು ಅವರು ಹೇಳಿದರು.

ನಾವುಗಳು ಹುಟ್ಟುವಾಗ ಇದೇ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟಲಿಲ್ಲ. ಅರಸು ಸಮುದಾಯಕ್ಕೆ ನಾವೆಲ್ಲರೂ ಋಣಿಗಳಾಗಿರಬೇಕು. ಸರಕಾರದ ಪರವಾಗಿ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾನು ನನ್ನ ಕ್ಷೇತ್ರದಲ್ಲಿ ಹಲವಾರು ಅರಸು ಕುಟುಂಬದವರನ್ನು ಹತ್ತಿರದಿಂದ ನೋಡಿದ್ದೇನೆ. ಬಹಳ ಸ್ವಾಭಿಮಾನದಿಂದ ಬದುಕು ನಡೆಸುತ್ತಿರುವ ಸಮುದಾಯ. ನೀವು ಸರಕಾರದ ಜೊತೆ ನಿಂತು, ಬೆಂಬಲವಾಗಿರಬೇಕು ಎಂದು ಅವರು ಮನವಿ ಮಾಡಿದರು.

‘ದೇವರಾಜ ಅರಸು ‘ಉಳುವವನೇ ಭೂಮಿಯ ಒಡೆಯ’ ಎಂಬ ಕಾನೂನು ಜಾರಿಗೆ ತಂದು ಲಕ್ಷಾಂತರ ಭೂರಹಿತ ಬಡವರ ಪರವಾಗಿ ನಿಂತರು. ಈ ತೀರ್ಮಾನ ಇತಿಹಾಸದಲ್ಲಿ ಶಾಶ್ವತವಾಗಿ ಉಳಿದುಕೊಂಡಿದೆ. ಒಬ್ಬ ಮನುಷ್ಯ ಯಾವಾಗ ಸಾಹುಕಾರನಾಗುತ್ತಾನೆ, ಯಾವಾಗ ಬಡವನಾಗುತ್ತಾನೆಂಬುದು ತಿಳಿಯಿವುದಿಲ್ಲ. ಅದಲು-ಬದಲು ಪ್ರಕ್ರಿಯೆ ಅನಿರೀಕ್ಷಿತ ಎಂದರು.

ಅರಸು ಅವರಿಗೆ ಜಾತಿ ಇರಲಿಲ್ಲ. ಆದರೆ ನಾಯಕತ್ವದ ಗುಣವಿತ್ತು. ಆ ಗುಣ ಅವರನ್ನು ದೊಡ್ಡ ಮಟ್ಟಕ್ಕೆ ಬೆಳೆಸಿತು. ಹಿಂದುಳಿದ ಹಾಗೂ ಮೇಲ್ವರ್ಗದ ಎಲ್ಲ ರಾಜಕಾರಣಿಗಳನ್ನು ಬೆಳೆಸಿ ಭದ್ರ ಅಡಿಪಾಯ ಕೊಟ್ಟವರು ದೇವರಾಜ ಅರಸು. ಹಣ, ಐಶ್ವರ್ಯ ಎಷ್ಟೇ ಇದ್ದರೂ ಸರಳತೆಯನ್ನು ಕಾಪಾಡಿಕೊಂಡವರು ಅರಸು ಸಮುದಾಯದವರು. ಸಂಪತ್ತಿಗೆ ಬೆಲೆ ಕಟ್ಟಬಹುದು. ಆದರೆ ಸರಳತೆಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಇನ್ನೊಬ್ಬರಿಗೆ ಅನ್ಯಾಯವಾಗದ ರೀತಿಯಲ್ಲಿ ನಾವು ಬದುಕಬೇಕು. ಅದೇ ನಿಜವಾದ ಸರಳ ಧರ್ಮ ಎಂದರು.

.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X