Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮದ್ದೂರು ಗಲಭೆ ಪ್ರಕರಣ |ತಪ್ಪೆಸೆಗಿದವರ...

ಮದ್ದೂರು ಗಲಭೆ ಪ್ರಕರಣ |ತಪ್ಪೆಸೆಗಿದವರ ವಿರುದ್ಧ ಜಾತಿಧರ್ಮ ಪರಿಗಣಿಸದೇ ಕ್ರಮ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ9 Sept 2025 3:58 PM IST
share
ಮದ್ದೂರು ಗಲಭೆ ಪ್ರಕರಣ |ತಪ್ಪೆಸೆಗಿದವರ ವಿರುದ್ಧ ಜಾತಿಧರ್ಮ ಪರಿಗಣಿಸದೇ ಕ್ರಮ: ಸಿದ್ದರಾಮಯ್ಯ

ಬೆಂಗಳೂರು: ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಯಾವುದೇ ಜಾತಿ ಧರ್ಮಗಳನ್ನು ಪರಿಗಣಿಸದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಮದ್ದೂರು ಗಲಭೆಗೆ ಸಂಬಂಧಿಸಿ ಬಿಜೆಪಿಯವರು ಮದ್ದೂರಿಗೆ ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ಧೇಶವಾಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟ ಚಲೋ ಎಂಬ ಕಾರ್ಯಕ್ರಮ ಮಾಡಿದರು. ಆರೆಸ್ಸೆಸ್ ನವರು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದವರು ಇದರಲ್ಲಿ ಪಾಲ್ಗೊಂಡು, ಶಾಂತಿ ಕದಡುವ ಕೆಲಸವನ್ನು ಮಾಡುತ್ತಾರೆಂಬ ಕಾರಣಕ್ಕೆ ಪೊಲೀಸರು ಚಾಮುಂಡಿ ಬೆಟ್ಟ ಚಲೋ ಗೆ ಅನುಮತಿ ನೀಡಲಿಲ್ಲ. ಮದ್ದೂರಿನಲ್ಲಿ ಬಂದ್ ಮಾಡಲು ಕರೆ ನೀಡಿದ್ದರು ಎಂದರು.

ಮಣಿಪುರ ಹಿಂಸಾಚಾರದ ಬಗ್ಗೆ ಬಿಜೆಪಿ ಧ್ವನಿ ಎತ್ತುವುದಿಲ್ಲ

ಬಿಜೆಪಿಯವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಾಗಿ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ರಾಜ್ಯ ಸರಕಾರದ್ದಾಗಿರುತ್ತದೆ. ಕೇಂದ್ರದಲ್ಲಿ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ಬಿಜೆಪಿಯವರು ಎಲ್ಲಿದ್ದರು.? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಯಾವುದೇ ಬಿಜೆಪಿಯವರು ಧ್ವನಿ ಎತ್ತಲಿಲ್ಲವೇಕೆ ಎಂದು ಮರುಪ್ರಶ್ನಿಸಿದರು. ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ ಎಂದರು.

ಎಂಎಲ್ ಸಿ ಗಳಿಗೂ ಕ್ಷೇತ್ರ ಅಭಿವೃದ್ಧಿಗೆ ಅನುದಾನ ನೀಡುವ ಆಶ್ವಾಸನೆ

ಇಂದು ಆಡಳಿತ ಪಕ್ಷದ ವಿಧಾನ ಪರಿಷತ್ತಿನ ಸದಸ್ಯರೊಂದಿಗೆ ಸಭೆ ನಡೆಸಲಾಗಿದೆ. ಈ ಹಿಂದೆ ಜಿಲ್ಲಾ ಶಾಸಕರೊಂದಿಗೆ ಸಭೆ ನಡೆಸಿದಂತೆ, ಬುಧವಾರ ಬೆಂಗಳೂರು ನಗರದ ಶಾಸಕರೊಂದಿಗೆ ಸಭೆ ನಡೆಸಲಾಗುವುದು. ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಯವ್ಯಯದಲ್ಲಿ 8,000 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಶಾಸಕರಿಗೆ ನೀಡಿದಂತೆ ಎಂಎಲ್ ಸಿ ಗಳಿಗೂ, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದು, ಮೀಸಲಿರಿಸಿರುವ 8,000 ಕೋಟಿ ರೂ.ಗಳಲ್ಲಿ ಎಂಎಲ್ ಸಿ ಗಳಿಗೂ ಅನುದಾನ ನೀಡಲು ಪರಿಶೀಲಿಸುವುದಾಗಿ ಆಶ್ವಾಸನೆ ನೀಡಲಾಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X