‘ಅಭಿನಯ ಸರಸ್ವತಿ ಬಿ.ಸರೋಜಾದೇವಿ’ ಹೆಸರಲ್ಲಿ ಹೊಸ ಪ್ರಶಸ್ತಿ ಸ್ಥಾಪಿಸಿದ ಸರಕಾರ

ಬೆಂಗಳೂರು, ಸೆ.17: ಕನ್ನಡ ಚಲನಚಿತ್ರ ನಟಿ, ಪದ್ಮಶ್ರೀ ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಬಿ.ಸರೋಜಾದೇವಿ ಅವರು ಪಂಚಭಾಷೆ ತಾರೆಯಾಗಿದ್ದು, ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ, 2025ನೇ ಸಾಲಿನಿಂದ ಅವರ ಹೆಸರಿನಲ್ಲಿ ‘ಅಭಿನಯ ಸರಸ್ವತಿ ಬಿ.ಸರೋಜಾದೇವಿ ಪ್ರಶಸ್ತಿʼ ಸ್ಥಾಪಿಸಿ ಸರಕಾರ ಆದೇಶಿಸಿದೆ.
ಕನ್ನಡ ಚಿತ್ರರಂಗದಲ್ಲಿ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರಿಗೆ ‘ಅಭಿನಯ ಸರಸ್ವತಿ ಬಿ.ಸರೋಜಾದೇವಿ ಪ್ರಶಸ್ತಿ’ ನೀಡಲಾಗುವುದು. ಪ್ರಶಸ್ತಿಯು 1 ಲಕ್ಷ ರೂ.ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ಒಳಗೊಂಡಿರುತ್ತದೆ ಪ್ರಕಟನೆ ತಿಳಿಸಿದೆ.
Next Story





