Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಾಂತಾರ ಸಿನೆಮಾಕ್ಕೆ ಮೈಸೂರು ಸ್ಯಾಂಡಲ್...

ಕಾಂತಾರ ಸಿನೆಮಾಕ್ಕೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಭಾಗೀದಾರ:ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ26 Sept 2025 11:11 AM IST
share
ಕಾಂತಾರ ಸಿನೆಮಾಕ್ಕೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಭಾಗೀದಾರ:ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ, ರಿಷಭ್ ಶೆಟ್ಟಿ ನಟನೆಯ ಕಾಂತಾರ- ಚಾಪ್ಟರ್-1 ಸಿನೆಮಾಕ್ಕೆ ಸರಕಾರಿ ಸ್ವಾಮ್ಯದ ಮತ್ತು ಮೈಸೂರು ಸ್ಯಾಂಡಲ್ ಸೋಪ್ ಖ್ಯಾತಿಯ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆಎಸ್ ಡಿಎಲ್) ಸುಗಂಧ ಭಾಗಿದಾರ (ಫ್ರ್ಯಾಗ್ರನ್ಸ್ ಪಾರ್ಟನರ್) ಆಗಿ, ಸಹ-ಪ್ರಾಯೋಜಕತ್ವ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಶುಕ್ತವಾರ ಮಾಹಿತಿ ನೀಡಿರುವ ಅವರು, ಕನ್ನಡ ಚಿತ್ರರಂಗವು ಸ್ಯಾಂಡಲ್ ವುಡ್ ಎಂದೇ ಹೆಸರಾಗಿದೆ. ಹಾಗೆಯೇ ಕೆಎಸ್ಡಿಎಲ್ ಸಂಸ್ಥೆಯು ಸ್ಯಾಂಡಲ್ ಸೋಪ್ ಮತ್ತು ಗಂಧದ ಎಣ್ಣೆಗೆ ಹೆಸರಾಗಿದೆ. ಈಗ ಸಂಸ್ಥೆ ಮತ್ತು ಸ್ಯಾಂಡಲ್ ವುಡ್ ಚಿತ್ರತಂಡದ ನಡುವೆ ಒಪ್ಪಂದ ಆಗಿದೆ. ಚಿತ್ರತಂಡವು ತನ್ನ ಪ್ರತೀ ಪ್ರದರ್ಶನದಲ್ಲೂ ಕೆಎಸ್ ಡಿಎಲ್ ಉತ್ಪನ್ನಗಳಿಗೆ ಪ್ರಚಾರ ನೀಡಲಿದೆ ಎಂದಿದ್ದಾರೆ.

ಕನ್ನಡ, ತೆಲುಗು, ಹಿಂದಿ, ತಮಿಳು, ಮಲೆಯಾಳಂ, ಇಂಗ್ಲಿಷ್ ಅಲ್ಲದೆ ಸ್ಪ್ಯಾನಿಷ್ ಹೀಗೆ ಏಳು ಭಾಷೆಗಳಲ್ಲಿ ಕಾಂತಾರ ತೆರೆ ಕಾಣಲಿದೆ. ಭಾರತದ 7,000 ಹಾಗೂ 30 ರಾಷ್ಟ್ರಗಳ 6,500ಕ್ಕೂ ಹೆಚ್ಚು ಚಿತ್ರ ಪರದೆಗಳಲ್ಲಿ ಪ್ರದರ್ಶನಗೊಳ್ಳಲಿದೆ. ಇಂತಹ ಚಿತ್ರತಂಡದ ಜತೆ ಕೆಎಸ್ ಡಿಎಲ್ ಕೈಜೋಡಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಕೆಎಸ್ ಡಿಎಲ್ ಕಳೆದ 110 ವರ್ಷಗಳಿಂದಲೂ ಕರ್ನಾಟಕದ ಪರಂಪರೆ ಮತ್ತು ಅಸ್ಮಿತೆಯನ್ನು ಪ್ರತಿನಿಧಿಸುತ್ತಿರುವ ಬ್ರ್ಯಾಂಡ್ ಆಗಿದೆ ಎಂದು ಅವರು ಹೇಳಿದ್ದಾರೆ.

ಎರಡು ವರ್ಷಗಳಿಂದ ಈಚೆಗೆ ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ವಿಸ್ತರಣೆಗೆ ಒಲವು ಹೊಂದಿದೆ. ಜೊತೆಗೆ ರಫ್ತು ವಹಿವಾಟಿಗೆ ಒತ್ತು ನೀಡಿದ್ದು, ಪ್ಯಾಕೇಜಿಂಗ್, ಬ್ರ್ಯಾಂಡಿಂಗ್, ಪ್ರಚಾರ ಮತ್ತು ಅತ್ಯುತ್ಕೃಷ್ಟತೆಗೆ ಗಮನಹರಿಸಿದೆ. ಇದರ ಭಾಗವಾಗಿ ಖ್ಯಾತ ನಟಿ ತಮನ್ನಾ ಭಾಟಿಯಾರನ್ನು ಎರಡು ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯಾಗಿ ನೇಮಿಸಿಕೊಳ್ಳಲಾಗಿದೆ. ಇದರಿಂದ ಅಖಿಲ ಭಾರತ ಮಟ್ಟದಲ್ಲಿ ಹೊಸ ತಲೆಮಾರಿನ ಗ್ರಾಹಕರನ್ನು ತಲುಪಲು ಸಾಧ್ಯವಾಗಿದೆ. ಈಗ ಕಾಂತಾರ ತಂಡದ ಜತೆ ಸಂಸ್ಥೆಯು ಕೈಜೋಡಿಸುತ್ತಿದ್ದು, ತನ್ನ ಉತ್ಪನ್ನಗಳ ಮಾರಾಟವನ್ನು ಮತ್ತಷ್ಟು ವ್ಯಾಪಕಗೊಳಿಸುವ ಉದ್ದೇಶ ಈಡೇರಲಿದೆ ಎಂದು ಅವರು ನುಡಿದಿದ್ದಾರೆ.

ಕೆಎಸ್ ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಮಾತನಾಡಿ, ಶತಮಾನಕ್ಕೂ ಹೆಚ್ಚಿನ ಇತಿಹಾಸ ಹೊಂದಿರುವ ಸಂಸ್ಥೆಯ ಮೈಸೂರು ಸ್ಯಾಂಡಲ್ ಸೋಪ್ ಒಂದು ವಿಶ್ವಾಸಾರ್ಹ ಬ್ರ್ಯಾಂಡ್ ಆಗಿದ್ದು, ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೊಂದಿದೆ. ಜನಪ್ರಿಯ ಮಾಧ್ಯಮವಾಗಿರುವ ಸಿನೆಮಾ ಮೂಲಕ ನಾವು ಜನರನ್ನು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ತಲುಪಲು ಸಾಧ್ಯವಾಗಲಿದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X