Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೈಸೂರು ದಸರಾ | ರಾಜೀವ್ ಗಾಂಧಿ ವಿವಿ...

ಮೈಸೂರು ದಸರಾ | ರಾಜೀವ್ ಗಾಂಧಿ ವಿವಿ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ

ವಾರ್ತಾಭಾರತಿವಾರ್ತಾಭಾರತಿ4 Oct 2025 10:22 PM IST
share
ಮೈಸೂರು ದಸರಾ | ರಾಜೀವ್ ಗಾಂಧಿ ವಿವಿ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ

ಬೆಂಗಳೂರು : ಮೈಸೂರಿನ ಐತಿಹಾಸಿಕ ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (RGUHS) ಸ್ತಬ್ಧಚಿತ್ರ ಎರಡನೇ ಬಹುಮಾನ ಪಡೆದಿದೆ.

ಆರೋಗ್ಯಪೂರ್ಣ ಮನಸ್ಸು, ನಶಾಮುಕ್ತ ಕ್ಯಾಂಪಸ್‌ ಎಂಬ ಥೀಮ್‌ನೊಂದಿಗೆ ಗಮನಸೆಳೆದ ಸ್ತಬ್ಧಚಿತ್ರ ಕೇಂದ್ರ/ರಾಜ್ಯ ಹಾಗೂ ವಿವಿಧ ನಿಗಮಗಳ ವಿಭಾಗದಲ್ಲಿ ಎರಡನೇ ಬಹುಮಾನಕ್ಕೆ ಪಾತ್ರವಾಯಿತು.

ಈ ಪ್ರಯತ್ನವು ರಾಷ್ಟ್ರ ಮಟ್ಟದ ನಶಾ ಮುಕ್ತ ಭಾರತ ಅಭಿಯಾನದ ಮುಂದುವರಿದ ಭಾಗವಾಗಿದ್ದು, ವಿದ್ಯಾರ್ಥಿಗಳಲ್ಲಿ ನಶಾಪದಾರ್ಥ ಬಳಕೆಯನ್ನು ತಡೆಗಟ್ಟುವ ಹಾಗೂ ಸ್ವಸ್ಥ ಪರಿಸರವನ್ನು ಉತ್ತೇಜಿಸುವ ವಿಶ್ವವಿದ್ಯಾಲಯದ ನಿರಂತರ ಪ್ರಯತ್ನಗಳ ಭಾಗವಾಗಿದೆ.

ಈ ಕುರಿತು ಸಂತಸ ಹಂಚಿಕೊಂಡ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾನ್ಯ ಕುಲಪತಿ ಡಾ. ಭಗವಾನ್ ಬಿ.ಸಿ., ನಮ್ಮ ನಿಷ್ಠೆ ಮತ್ತು ಸೇವಾಭಾವನೆಗೆ ದಕ್ಕಿದ ಈ ಗೌರವವು ನಮಗೆ ಹೆಮ್ಮೆಯ ವಿಷಯವಾಗಿದೆ. ನಮ್ಮ ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯಕ್ಕೆ ನೀಡಲಾದ ಪ್ರಾಧಾನ್ಯತೆಗೆ, ಅವರ ಶ್ರೇಯೋಭಿವೃದ್ಧಿಗಾಗಿ ವಿಶ್ವವಿದ್ಯಾಲಯ ಮಾಡಿದ ಕೆಲಸಕ್ಕೆ ಸಿಕ್ಕ ಮನ್ನಣೆಯಾಗಿದೆ. ಈ ಬಹುಮಾನ ನಮ್ಮ ಮುಂದಿನ ಕಾರ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಲಿದೆ." ಎಂದರು.

ಕಾಲಚಕ್ರ – ಜೀವನದ ಪಯಣ :

ಮಧು ಮೋಹನ್ ಆರ್. (INCUBE) ಅವರು ರೂಪಿಸಿ ವಿನ್ಯಾಸಗೊಳಿಸಿದ ಈ ವರ್ಷದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (RGUHS) ಸ್ತಬ್ಧಚಿತ್ರವು ಕಾಲಚಕ್ರದ ಪರಿಣಾಮಕಾರಿ ಹಾಗೂ ಸಾಂಕೇತಿಕ ಅರ್ಥವನ್ನು ಪ್ರತಿನಿಧಿಸಿತು. ಇದನ್ನು ಬಲವಾದ ದೃಶ್ಯಪ್ರತಿಮೆಗಳಿಂದ ವಿನ್ಯಾಸಗೊಳಿಸಲಾದ ಒಂದು ಮರದ ಎರಡು ವಿಭಿನ್ನ ಮುಖಗಳನ್ನು ತೋರಿಸುವಂತೆ ಚಿತ್ರಿಸಲಾಗಿತ್ತು.

ಒಂದು ಬದಿ ಜೀವಂತಿಕೆಯನ್ನು ಪ್ರತಿನಿಧಿಸುವ, ಜೀವಕಳೆ ಹೊತ್ತ ಚೈತನ್ಯದ ಮುಖ, ಇನ್ನೊಂದು ಬದಿ ದುಶ್ಚಟಗಳಿಗೆ ಒಳಗಾಗಿ ತನ್ನನ್ನು ತಾನೇ ಶೋಷಣೆಗೆ ಒಳಪಡಿಸಿಕೊಂಡ ರೋಗಗ್ರಸ್ಥ, ಕಳೆಗುಂದಿದ ಮುಖ. ಈ ಪರಿಣಾಮಕಾರಿ ವ್ಯತ್ಯಾಸಗಳು ಜೀವನದ ಎರಡು ವಿಭಿನ್ನ ದಿಕ್ಕುಗಳನ್ನು ಸೂಚಿಸುವಂತಿದ್ದವು.

ಮಾದಕವಸ್ತು ಬಳಸುವಂತೆ ಪ್ರೇರೇಪಿಸುವ ಪರಿಸರ ಹಾಗೂ ಅವಕಾಶಗಳು, ಆಕರ್ಷಣೆಗಳು ಒಂದೆಡೆ. ಮನುಷ್ಯ ಶಿಕ್ಷಣ, ಸಂಸ್ಕಾರ, ವಿವೇಚನೆಯ ಕೈ ಹಿಡಿದರೆ ಅಂತಹ ಕ್ಷಣಿಕ ಆಕರ್ಷಣೆಗಳಿಂದ ಬಿಡಿಸಿಕೊಂಡು ಆರೋಗ್ಯಕರ ಜೀವನವನ್ನು ಆಯ್ದುಕೊಳ್ಳಬಹುದು ಎನ್ನುವ ತಿಳಿವಳಿಕೆ ಮತ್ತೊಂದು ಕಡೆ. ಒಂದು ಮುಖ ವಿನಾಶವನ್ನು, ಮತ್ತೊಂದು ಮುಖ ಪ್ರಗತಿಯನ್ನು ಸಂಕೇತಿಸುವಂತೆ ವಿನ್ಯಾಸಗೊಳಿಸಲಾಗಿತ್ತು.

ಕಾಲವು ಯಾವತ್ತೂ ಮುಂದಕ್ಕೆ ಸಾಗುತ್ತಿರುತ್ತದೆ; ಅದು ನಿಲ್ಲುವುದಿಲ್ಲ, ಹಿಮ್ಮುಖವಾಗಿ ಸಾಗುವುದೂ ಇಲ್ಲ. ಇದು ನಮ್ಮ ಕ್ರಿಯೆಗಳನ್ನು ಫಲಿತಾಂಶಗಳಾಗಿ, ಮತ್ತು ಆಯ್ಕೆಗಳನ್ನು ವಿಧಿಲಿಖಿತವಾಗಿ ರೂಪಿಸುತ್ತಾ ಸಾಗುತ್ತದೆ. ಇದನ್ನು ತಡೆಯಲಾಗದು, ಬದಲಾಯಿಸಲೂ ಆಗದು. ಆದರೆ ಪರಿಣಾಮಕಾರಿ, ವಿಚಾರಪೂರ್ಣ ನಿರ್ಧಾರಗಳಿಂದ ಅರ್ಥಪೂರ್ಣ ಬದಲಾವಣೆಗಳನ್ನು ತಂದುಕೊಳ್ಳಬಹುದು ಎನ್ನುವುದನ್ನು ಪ್ರತಿಪಾದಿಸಿತು.

ಭವಿಷ್ಯದ ದೃಷ್ಟಿಕೋನ – ರಾಮನಗರ ಕ್ಯಾಂಪಸ್ :

ಸ್ತಬ್ಧಚಿತ್ರದ ಮುಂಭಾಗದಲ್ಲಿ ಆರ್‌ಜಿಯುಎಚ್‌ಎಸ್ ರಾಮನಗರ ಕ್ಯಾಂಪಸ್‌ನ ನೂತನ ನಿರ್ಮಾಣದ ರೂಪುರೇಷೆಯನ್ನು ಒಳಗೊಂಡಿತ್ತು. ಈ ವಿನ್ಯಾಸವು ಆರ್‌ಜಿಯುಎಚ್‌ಎಸ್ ಸಂಸ್ಥೆಯ ನಾವೀನ್ಯತೆ, ಶ್ರೇಷ್ಠತೆ ಮತ್ತು ಸಮಗ್ರ ಸ್ವಾಸ್ಥ್ಯಕ್ಕೆ ಸಲ್ಲಿಸಿದ ಬದ್ಧತೆಯನ್ನು ಪ್ರತಿಬಿಂಬಿಸುವಂತಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X