Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ...

ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ನಿಂಗಪ್ಪ ಸಾವಂತ್ ವಿರುದ್ಧದ ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ನಕಾರ

ವಾರ್ತಾಭಾರತಿವಾರ್ತಾಭಾರತಿ4 Oct 2025 11:16 PM IST
share
ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ನಿಂಗಪ್ಪ ಸಾವಂತ್ ವಿರುದ್ಧದ ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಮುಖ್ಯಪೇದೆ ನಿಂಗಪ್ಪ ಸಾವಂತ್‌ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಹೊಳಲ್ಕೆರೆ ತಾಲೂಕು ತಾಳಿಕಟ್ಟೆಯ ನಿಂಗಪ್ಪ ಸಾವಂತ್‌ (45) ಸಲ್ಲಿಸಿದ್ದ ಅರ್ಜಿ ಕುರಿತು ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್‌.ಆರ್‌. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚೆಗೆ ಪ್ರಕಟಿಸಿದೆ.

ನಿಂಗಪ್ಪ ಸಾವಂತ್ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿ, ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಈ ಆದೇಶ ಹಾಗೂ ಅದರಲ್ಲಿ ಅವಲೋಕಿಸಲಾಗಿರುವ ಅಂಶಗಳು ಆಕ್ಷೇಪಾರ್ಹ ಎಫ್‌ಐಆರ್ ಪ್ರಶ್ನಿಸುವ ಸೀಮಿತ/ಪ್ರಾಥಮಿಕ ಹಂತಕ್ಕೆ ಮಾತ್ರ ಅನ್ವಯಿಸಲಿದೆ. ಪ್ರಕರಣದಲ್ಲಿ ಅಂತಿಮ ವರದಿ ಸಲ್ಲಿಕೆಯಾದ ಬಳಿಕ ಮತ್ತೆ ಈ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವುದೂ ಸೇರಿ ಕಾನೂನಿನಲ್ಲಿ ಲಭ್ಯವಿರುವ ಪರಿಹಾರಗಳನ್ನು ಆಶ್ರಯಿಸುವ ಸ್ವಾತಂತ್ರ್ಯವನ್ನು ಅರ್ಜಿದಾರರಿಗೆ ಕಾಯ್ದಿರಿಸಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಭ್ರಷ್ಟಾಚಾರ ನಿಗ್ರಹ (ಪಿಸಿ) ಕಾಯ್ದೆ ಸೆಕ್ಷನ್‌ 7(a) ಹಾಗೂ 7A ಅಡಿ ಎಫ್‌ಐಆರ್‌ ದಾಖಲಿಸಿದ್ದು, ಇದರಲ್ಲಿ ಯಾವುದೇ ಸರ್ಕಾರಿ ಅಧಿಕಾರಿಯನ್ನು ಆರೋಪಿಯನ್ನಾಗಿಸದೇ ತನ್ನನ್ನು ಮಾತ್ರ ಆರೋಪಿಯಾಗಿಸಿರುವುದರಿಂದ ದೂರು ಅನೂರ್ಜಿತವಾಗುತ್ತದೆ ಎಂಬ ನಿಂಗಪ್ಪ ವಾದದಲ್ಲಿ ಉರುಳಿಲ್ಲ. ಏಕೆಂದರೆ, ತನಿಖೆಯ ಬಳಿಕ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್‌ 173 ಅಡಿ ಕಾಯ್ದೆಯ ಸೆಕ್ಷನ್‌ 7, 8, 12 ಇತ್ಯಾದಿ ಅನ್ವಯಿಸಿ ಸರ್ಕಾರಿ ಅಧಿಕಾರಿಗಳನ್ನು ಹೆಚ್ಚುವರಿ ಆರೋಪಿಗಳನ್ನಾಗಿಸಲು ಅವಕಾಶವಿದೆ ಎಂದು ನ್ಯಾಯಪೀಠ ಹೇಳಿದೆ.

ಸದ್ಯ ತನಿಖೆಯು ಪ್ರಾಥಮಿಕ ಹಂತದಲ್ಲಿದ್ದು, ಲೋಕಾಯುಕ್ತ ಪೊಲೀಸರಿಗೆ ಬಿಬಿಎಂಪಿ, ಅಬಕಾರಿ ಇಲಾಖೆ ಸೇರಿ ಬೇರೆ ಆರೋಪಿಗಳನ್ನು ಸೇರ್ಪಡೆ ಮಾಡಲು ನಿರಾಕರಿಸಲಾಗದು. ಆರೋಪ ಪಟ್ಟಿ ಸಲ್ಲಿಸುವಾಗ ತನಿಖಾಧಿಕಾರಿಯು ಕಾಯ್ದೆಯ ಬೇರೆ ಸೆಕ್ಷನ್‌ಗಳನ್ನು ಅನ್ವಯಿಸಿ ಆರೋಪ ಪಟ್ಟಿ ಸಲ್ಲಿಸಲು ಅವಕಾಶವಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಅರ್ಜಿದಾರ ಸಾವಂತ್‌ ವಿರುದ್ಧ ಕಾಯ್ದೆಯ ಸೆಕ್ಷನ್‌ 7A ಅನ್ವಯಿಸಲು ಮೇಲ್ನೋಟಕ್ಕೆ ಅಗತ್ಯವಾದ ಅಂಶಗಳು ಗೋಚರಿಸಿದ್ದು, ಆತನ ವಿರುದ್ಧ ಗಂಭೀರ ಆರೋಪಗಳನ್ನು ಮಾಡಲಾಗಿದೆ. ದೂರಿನಲ್ಲಿನ ವಿಸ್ತೃತ ಆರೋಪ ಮತ್ತು ವರದಿಯಲ್ಲಿನ ಅಂಶಗಳನ್ನು ನೋಡಿದರೆ ಕಾಯ್ದೆ ಸೆಕ್ಷನ್‌ 7A ಅನ್ವಯ ಪ್ರಕರಣದ ತನಿಖೆ ನಡೆಯುವುದು ಅಗತ್ಯವಾಗಿದೆ ಎಂದಿರುವ ಹೈಕೋರ್ಟ್, ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಪ್ರಕರಣವೇನು?

ಭ್ರಷ್ಟ ಅಧಿಕಾರಿಗಳ ವಿರುದ್ಧ ನಡೆಸಲಾಗುವ ದಾಳಿಗಳ ಕುರಿತು ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡುವ ಜತೆಗೆ, ದಾಳಿಗಳ ಬಗ್ಗೆ ಮುಂಚಿತವಾಗಿ ಮಾಹಿತಿ ಸೋರಿಕೆ ಮಾಡಿ ಹಣ ವಸೂಲಿ ಮಾಡುತ್ತಿದ್ದ ಆರೋಪದಲ್ಲಿ ನಿಂಗಪ್ಪ ಸಾವಂತ್‌ ಮತ್ತು ಇತರರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್‌ 7(a) ಮತ್ತು 7A ಅಡಿ ಬೆಂಗಳೂರಿನ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಬಂಧಿಸಲ್ಪಟ್ಡು, ಆನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಿಂಗಪ್ಪ ಸಾವಂತ್, ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X