Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಪಡೆಯುವ...

ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಪಡೆಯುವ ಜ್ಞಾನವನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು : ಥಾವರ್ ಚಂದ್ ಗೆಹ್ಲೋಟ್

ವಾರ್ತಾಭಾರತಿವಾರ್ತಾಭಾರತಿ8 Oct 2025 10:02 PM IST
share
ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಪಡೆಯುವ ಜ್ಞಾನವನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು : ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು ವಿವಿಯಲ್ಲಿ 60ನೇ ಘಟಿಕೋತ್ಸವ

ಬೆಂಗಳೂರು, ಅ.8: ಶಿಕ್ಷಣದ ಉದ್ದೇಶ ಕೇವಲ ಜ್ಞಾನವನ್ನು ಗಳಿಸುವುದಲ್ಲ. ಅದನ್ನು ಸಮಾಜದ ಕಲ್ಯಾಣಕ್ಕಾಗಿ ಉಪಯೋಗಿಸುವುದಾಗಿದೆ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಪಡೆಯುವ ಜ್ಞಾನವನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.

ಬುಧವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ವಿವಿ ಹಮ್ಮಿಕೊಂಡಿದ್ದ 60ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ವಿಶ್ವ ವಿದ್ಯಾನಿಲಯ ‘ಜ್ಞಾನಂ ವಿಜ್ಞಾನಸಹಿತಂ’ ಎಂಬ ಧ್ಯೇಯವಾಕ್ಯದ ಅರ್ಥವನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಶ್ರೇಷ್ಠತೆಯ ದಿಕ್ಕಿನಲ್ಲಿ ನಿರಂತರವಾಗಿ ಮುಂದುವರಿಯುತ್ತಿದೆ. ರಾಷ್ಟ್ರೀಯ ಮತ್ತು ಅಂತರ್‍ರಾಷ್ಟ್ರೀಯ ಸಂಸ್ಥೆಗಳ ಸಹಕಾರದ ಮೂಲಕ ಉನ್ನತ ಶಿಕ್ಷಣದಲ್ಲಿ ಶ್ರೇಷ್ಠತೆಯನ್ನು ಸಾಧಿಸಿರುವುದು ಹೆಮ್ಮೆಯಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಜ್ಞಾನ ಮತ್ತು ಕೌಶಲ್ಯಗಳನ್ನು ಬಳಸಿಕೊಳ್ಳಬೇಕು. ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟ್‍ಅಪ್ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ, ವೆಂಚರ್ ಕ್ಯಾಪಿಟಲ್ ಫಂಡ್ ಯೋಜನೆಗಳ ಅವಕಾಶಗಳನ್ನು ಬಳಸಿಕೊಂಡು ನವ ಭಾರತ ಮತ್ತು ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಮುನ್ನಡೆಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಡಿಆರ್‍ಡಿಎಲ್‍ನ ನಿವೃತ್ತ ನಿರ್ದೇಶಕ ಡಾ.ಪ್ರಹ್ಲಾದ ರಾಮರಾವ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಬೆಂಗಳೂರು ವಿವಿ ಕುಲಪತಿ ಡಾ.ಜಯಕರ ಎಸ್.ಎಂ, ಕುಲಸಚಿವೆ ಕೆ.ಟಿ. ಶಾಂತಲಾ, ಕುಲಸಚಿವ ಮೌಲ್ಯಮಾಪನ ಪ್ರೊ.ಸಿ.ಎಸ್.ಕರಿಗಾರ್, ಪ್ರಾಧ್ಯಾಪಕರಾದ ಪ್ರೊ.ರಘುನಂದನ್, ಪ್ರೊ.ಪಿ.ಸಿ. ಕೃಷ್ಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಸ್ಪೀಕರ್ ಯು.ಟಿ.ಖಾದರ್ ಅನುಪಸ್ಥಿತಿ: ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ವಿಧಾನ ಪರಿಷತ್‍ನ ಮಾಜಿ ಸದಸ್ಯ ಡಿ.ಮಾದೇಗೌಡ, ಜೆ.ಪಿ.ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್‍ನ ಸಂಸ್ಥಾಪಕ ಡಾ.ಟಿ.ಬಿ.ಪ್ರಸನ್ನ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಬೇಕಿದ್ದ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ವಿದೇಶಿ ಪ್ರವಾಸದ ಹಿನ್ನೆಲೆಯಲ್ಲಿ ಅನುಪಸ್ಥಿತಿಯಾಗಿದ್ದರು.

30,300 ವಿದ್ಯಾರ್ಥಿಗಳು ಪದವಿಗೆ ಅರ್ಹರಾಗಿದ್ದು, 157 ವಿದ್ಯಾರ್ಥಿಗಳು 298 ಚಿನ್ನದ ಪದಕಗಳನ್ನು ಸ್ವೀಕರಿಸಿದರು. 61 ವಿದ್ಯಾರ್ಥಿಗಳು 132 ನಗದು ಪ್ರಶಸ್ತಿ ಪಡೆದರು. ಒಟ್ಟು 140 ವಿದ್ಯಾರ್ಥಿಗಳು ಪಿಎಚ್‍ಡಿ ಪದವಿ ಸ್ವೀಕರಿಸಿದರು.

ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಬೆಂವಿವಿಯ ಕನ್ನಡ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿ ಪ್ರೇಮ ಎಸ್. ಒಟ್ಟು 11 ಚಿನ್ನದ ಪದಕ ಪಡೆಯುವ ಮೂಲಕ ಅತಿ ಹೆಚ್ಚು ಪದಕ ಚಿನ್ನದ ಗಳಿಸಿದರು. ಸ್ನಾತಕ ಪದವಿ ವಿಭಾಗದಲ್ಲಿ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಹೇಮಂತ ಎಸ್. ಒಟ್ಟು 7 ಚಿನ್ನದ ಪದಕ ಸ್ವೀಕರಿಸಿದರು. ಸ್ವರೂಪ್ ಎನ್. ಮತ್ತು ರಂಜಿತ ಜಾದವ್ 2023-24ನೇ ವರ್ಷದ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿ ಸ್ವೀಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X