Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಹಂಪನಾ’ ಸಮಾಜದಲ್ಲಿ ಬದಲಾವಣೆ ಬಯಸುವ...

‘ಹಂಪನಾ’ ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ11 Oct 2025 8:27 PM IST
share
‘ಹಂಪನಾ’ ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ : ಸಿಎಂ ಸಿದ್ದರಾಮಯ್ಯ
‘ಹಂಪನಾ 90ರ ಸಂಭ್ರಮ’


ಬೆಂಗಳೂರು, ಅ.11: ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ. ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.

ಶನಿವಾರ ನಗರದ ಗಾಂಧಿ ಭವನದಲ್ಲಿ ವೀರಲೋಕ ಬುಕ್ಸ್ ವತಿಯಿಂದ ನಡೆದ ‘ಹಂ.ಪ.ನಾಗರಾಜಯ್ಯ ಅವರ 90ರ ಸಂಭ್ರಮ’ ಹಾಗೂ ಹಂಪನಾ ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಂಪನಾ ಅವರು ಸಮಾಜಮುಖಿ ಆಗುವ ಮೂಲಕ ತಮ್ಮ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ. ಇವರು ಕನ್ನಡಿಗರ ಹೆಮ್ಮೆಯ ನಾಗರಾಜಯ್ಯ. ಇವರ ಸಾಹಿತ್ಯ ಮತ್ತು ಬದುಕಿಗೆ ನಾನು ಸಾಕ್ಷಿ ಆಗಿರುವುದು ನನ್ನ ಜೀವನದ ಸೌಭಾಗ್ಯ. ಇವರ ಬದುಕು ಮತ್ತು ಬರಹ ಹಾಗೂ ಸಾರ್ಥಕತೆ ಇಡೀ ಸಮಾಜಕ್ಕೆ ಮಾರ್ಗದರ್ಶನ ಎಂದು ಸಿದ್ದರಾಮಯ್ಯ ತಿಳಿಸಿದರು.

ಸಾಹಿತ್ಯ ಕೃಷಿಯಲ್ಲಿ ಮಾತ್ರವಲ್ಲದೆ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿ ಕನ್ನಡ ಕಟ್ಟುವ ಕೆಲಸ ಮಾಡಿದ್ದಾರೆ. ಇವರ ಕೆಲಸ ಕನ್ನಡ ಜಗತ್ತಿಗೆ ತಲುಪಿರುವುದು ಅತ್ಯಂತ ಮಹತ್ವದ ಸಂಗತಿ. ಭಾಷಾಶಾಸ್ತ್ರ, ಸಂಶೋಧನೆ, ಮಕ್ಕಳ ಸಾಹಿತ್ಯ, ವಿಮರ್ಶೆ ಸೇರಿ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಬೆರಗು ಮೂಡಿಸುವ ಕೆಲಸ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಹಂಪನಾ ಅವರು ಇನ್ನೂ ನೂರು ಕಾಲ ಆರೋಗ್ಯವಂತರಾಗಿ ಬದುಕಲಿ. ಕಮಲಾ ಮತ್ತು ಹಂಪನಾ ಅವರು ಅದ್ಭುತ ದಂಪತಿ. ಇಬ್ಬರೂ ಸಾಹಿತ್ಯ ಕೃಷಿಯಲ್ಲಿ ಸಾಧನೆ ಮಾಡಿದವರು. ಇಬ್ಬರೂ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.


ನಾನು ಹಂಪನಾ ಅಭಿಮಾನಿ: ‘ಹಂಪನಾ ಅವರು ಒಳ್ಳೆ ವಾಗ್ಮಿ. ಸಮಾಜಕ್ಕೆ ಇವರಿಂದ ಬಹಳ ಉಪಕಾರ ಆಗುತ್ತದೆ. ಅಧ್ಯಾಪಕರೂ ಆಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರೂ ಆಗಿದ್ದರು. ನಾನು ಸಾಹಿತ್ಯದ ವಿದ್ಯಾರ್ಥಿ ಅಲ್ಲ. ಆದರೂ ಸಾಹಿತ್ಯ ವಲಯದ ಒಡನಾಟ ಹೆಚ್ಚಾಗಿದ್ದು ನಾನು ಹಂಪನಾ ಅವರ ಅಭಿಮಾನಿ’

-ಸಿದ್ದರಾಮಯ್ಯ ಮುಖ್ಯಮಂತ್ರಿ


share
ವಾರ್ತಾಭಾರತಿ
ವಾರ್ತಾಭಾರತಿ
Next Story
X