ಬೆಂಗಳೂರು | ಸಮೀಕ್ಷೆಗೆ ತೆರಳಿದ ಶಿಕ್ಷಕಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು, ಅ.12: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಸಮೀಕ್ಷೆ ನಡೆಸುತ್ತಿರುವ ಸಂದರ್ಭದಲ್ಲೇ ಲಘು ಹೃದಯಾಘಾತಕ್ಕೆ ಒಳಗಾಗಿ ಶಿಕ್ಷಕಿಯೊಬ್ಬರು ಕುಸಿದು ಬಿದ್ದಿದ್ದು, ಕೂಡಲೇ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿರುವ ಅ.11ರ ಶನಿವಾರ ಘಟನೆ ನಡೆದಿದೆ.
ಬೊಮ್ಮಸಂದ್ರದ ಸರಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ 42 ವರ್ಷದ ಯಶೋಧ ಎಂಬುವರಿಗೆ ಸಮೀಕ್ಷೆ ಮಾಡುವ ವೇಳೆ ಲಘು ಹೃದಯಾಘಾತ ಸಂಭವಿಸಿದೆ. ಆಗ ಸ್ಥಳೀಯರ ಸಮಯ ಪ್ರಜ್ಞೆಯಿಂದ ಶಿಕ್ಷಕಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Next Story





