Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಹಿಳೆಯರು ಕಾನೂನು ಅರಿತರೆ ಕಿರುಕುಳ...

ಮಹಿಳೆಯರು ಕಾನೂನು ಅರಿತರೆ ಕಿರುಕುಳ ತಡೆಗಟ್ಟಬಹುದು: ವಿಜಯ ರಾಹತ್ಕರ್

ವಾರ್ತಾಭಾರತಿವಾರ್ತಾಭಾರತಿ14 Oct 2025 11:33 PM IST
share
ಮಹಿಳೆಯರು ಕಾನೂನು ಅರಿತರೆ ಕಿರುಕುಳ ತಡೆಗಟ್ಟಬಹುದು: ವಿಜಯ ರಾಹತ್ಕರ್
‘ಲಿಂಗ ಸಂವೇದನೆ ಮತ್ತು ಸೈಬರ್ ಜಾಗೃತಿ' ಕಾರ್ಯಾಗಾರ

ಬೆಂಗಳೂರು, ಅ.14: ಸೈಬರ್ ಕ್ರೈಂ, ಡೀಪ್ ಫೇಕ್, ಫೊಟೊ ಮಾರ್ಫಿಂಗ್‌ ಸೇರಿದಂತೆ ಇನ್ನೂ ಅನೇಕ ರೀತಿಯಲ್ಲಿ ಮಹಿಳೆಯರ ಮೇಲೆ ಕಿರುಕುಳ ನಡೆಯುತ್ತಿದೆ. ಮಹಿಳೆಯರ ರಕ್ಷಣೆಗೆ ರೂಪಿಸಿರುವ ಕಾನೂನು ಮತ್ತು ಹಕ್ಕುಗಳನ್ನು ಅರಿತುಕೊಂಡು ಸಂಘಟಿತರಾದರೆ ಮಹಿಳಾ ಕಿರುಕುಳವನ್ನು ತಡೆಗಟ್ಟಬಹುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯ ರಾಹತ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯ ಕಾನೂನು ಕಾಲೇಜು, ಕಾನೂನು ಅಧ್ಯಯನ ವಿಭಾಗ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಸಹಯೋಗದಲ್ಲಿ ಆಯೋಜಿಸಿದ್ದ ‘ಕ್ಯಾಂಪಸ್ ಕಾಲಿಂಗ್' ಕಾರ್ಯಕ್ರಮದಡಿ ‘ಲಿಂಗ ಸಂವೇದನೆ ಮತ್ತು ಸೈಬರ್ ಜಾಗೃತಿ' ಕುರಿತಾದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಕಾಲೇಜು, ವಿಶ್ವವಿದ್ಯಾಲಯಗಳು ಕೇವಲ ಶಿಕ್ಷಣ ಸಂಸ್ಥೆಗಳಲ್ಲ, ರಾಷ್ಟ್ರ ನಿರ್ಮಾಣದ ಕೇಂದ್ರಗಳಾಗಿವೆ. ಪ್ರಸ್ತುತ ವಿದ್ಯಾರ್ಥಿ ಸಮೂಹ ಪ್ರಗತಿಯತ್ತ, ಹೊಸ ವಿಚಾರ, ಚಿಂತನೆಗಳೊಂದಿಗೆ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ದೇಶದ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಬೇಕಿದೆ ಎಂದರು.

ಸರಕಾರಗಳು ಮಹಿಳೆಯರ ರಕ್ಷಣೆಗೆ ಅನೇಕ ಕಾನೂನುಗಳನ್ನು ರೂಪಿಸಿದ್ದರೂ ಶೈಕ್ಷಣಿಕ, ಔದ್ಯೋಗಿಕ, ರಾಜಕೀಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಮಹಿಳಾ ಅಸಮಾನತೆ ಮತ್ತು ಕಿರುಕುಳ ಪ್ರಕರಣಗಳು ಕಾಣ ಸಿಗುತ್ತಿವೆ. ಮಹಿಳೆಯರು ತಮ್ಮ ಅಧಿಕಾರ ಮತ್ತು ಹಕ್ಕುಗಳನ್ನು ಅರಿತುಕೊಳ್ಳಬೇಕು. ಸೈಬರ್ ಕ್ರೈಂ, ಡೀಪ್ ಫೇಕ್, ಫೊಟೊ ಮಾರ್ಫಿಂಗ್‌ ಕಿರುಕುಳ ಹೆಚ್ಚಾಗಿದೆ. ಪ್ರತಿ ಮಹಿಳೆಯು ಕಾನೂನಿನ ಕುರಿತು ಅರಿವು ಪಡೆಯಬೇಕು ಎಂದು ಸಲಹೆ ನೀಡಿದರು.

ಮಹಿಳೆಯರು ಪಾಶ್ ಮತ್ತು ಪೊಕ್ಸೋ ಬಗ್ಗೆ ತಿಳಿದುಕೊಳ್ಳಬೇಕು. 2047ರೊಳಗೆ ಭಾರತೀಯ ಮಹಿಳೆಯರು ಸಶಕ್ತ, ಸುರಕ್ಷಿತ, ಸಂಘಟಿತ ಸಮಾಜದಲ್ಲಿ ಜೀವಿಸುವಂತಿರಬೇಕು. ಆ ನಿಟ್ಟಿನಲ್ಲಿ ಇಡೀ ಸಮಾಜ ಸೃಷ್ಟಿಯಾಗಬೇಕು ಎಂದು ಆಶಿಸಿದರು.

ಕಾನೂನು ನಿಕಾಯದ ಡೀನ್ ಪ್ರೊ.ವಿ.ಸುದೇಶ್ ಮಾತನಾಡಿ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮಹಿಳಾ ಪ್ರಾತಿನಿಧ್ಯ ಮತ್ತು ಅವಕಾಶಗಳು ವಿಫುಲವಾಗಿದ್ದು, ವಿದ್ಯಾರ್ಥಿಗಳ ಮುಕ್ತ ಅಧ್ಯಯನಕ್ಕೆ ಸಹಕಾರಿಯಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ ಕಾನೂನು ಅಧ್ಯಯನ ವಿಭಾಗ ಮಹಿಳಾ ಕಾನೂನು ಮತ್ತು ಹಕ್ಕುಗಳ ಕುರಿತು ನಿರಂತರವಾಗಿ ಮಾಹಿತಿ ಒದಗಿಸುವ ಕಾರ್ಯದಲ್ಲಿ ತೊಡಗಲಿದೆ ಎಂದು ತಿಳಿಸಿದರು.

ಬೆಂಗಳೂರು ವಿವಿ ಕಾನೂನು ಕಾಲೇಜು ಪ್ರಾಂಶುಪಾಲ ಪ್ರೊ.ಎಂ.ದಶರಥ್, ಕಾನೂನು ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ.ಜ್ಯೋತಿ ವಿಶ್ವನಾಥ್, ಬೆಂಗಳೂರು ನೈರುತ್ಯ ವಿಭಾಗದ ಡಿಸಿಪಿ ಅನಿತಾ ಬಿ. ಹದ್ದಣನವರ್, ಮಹಿಳಾ ಆಯೋಗದ ಕಾನೂನು ಸಲಹೆಗಾರ್ತಿ ಶಾಂತಲಾ ಭಟ್, ಆಯೋಗದ ಉಪ ನಿರ್ದೇಶಕರು ರಾಮವತಾರ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X