Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದಲ್ಲಿ ಆರೆಸ್ಸೆಸ್ ನಿಷೇಧಿಸಲು...

ರಾಜ್ಯದಲ್ಲಿ ಆರೆಸ್ಸೆಸ್ ನಿಷೇಧಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ14 Oct 2025 11:40 PM IST
share
ರಾಜ್ಯದಲ್ಲಿ ಆರೆಸ್ಸೆಸ್ ನಿಷೇಧಿಸಲು ಆಗ್ರಹ

ಬೆಂಗಳೂರು, ಅ.14 : ಮಕ್ಕಳಲ್ಲಿ ದ್ವೇಷದ ವಿಷ ಬೀಜ ಬಿತ್ತುತ್ತಿರುವ ಮತ್ತು ಹಿಂದೂ-ಮುಸ್ಲಿಮ್ ಹೆಸರಿನಲ್ಲಿ ಕೋಮುಗಲಭೆಗಳ ಮೂಲಕ ಭಯೋತ್ಪಾದನೆ ಸೃಷ್ಟಿಸುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್)ವನ್ನು ಕರ್ನಾಟಕ ರಾಜ್ಯದಲ್ಲಿ ನಿಷೇಧಿಸಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಆಗ್ರಹಿಸಿದ್ದಾರೆ.

ಮಂಗಳವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಕೇರಳ ರಾಜ್ಯದಲ್ಲಿ ಆರೆಸ್ಸೆಸ್ ಮುಖಂಡರಿಂದ ಸಾಫ್ಟ್‌ ವೇರ್ ಎಂಜಿನಿಯರ್ ಮೇಲೆ ನಡೆದಂತಹ ಲೈಂಗಿಕ ದೌರ್ಜನ್ಯ ಮತ್ತು ಆತ್ಮಹತ್ಯೆಯನ್ನು ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಆರೆಸ್ಸೆಸ್‍ಗೆ ನೂರು ವರ್ಷ ತುಂಬಿದೆ ಎಂದು ಸಂಭ್ರಮಾಚರಣೆ ಮಾಡುತ್ತಿದೆ. ಆದರೆ ಅದರಿಂದ ದೇಶಕ್ಕೆ ಇಲ್ಲಿಯವರೆಗೂ ಯಾವೊಂದು ಒಳ್ಳೆಯ ಕೆಲಸವೂ ಆಗಿಲ್ಲ ಎಂದು ಟೀಕಿಸಿದರು.

ಆರೆಸ್ಸೆಸ್‍ನ ಯಾವೊಬ್ಬ ನಾಯಕರೂ ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿಲ್ಲ ಮತ್ತು ಬೆಂಬಲವನ್ನೂ ಸೂಚಿಸಿಲ್ಲ. ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಸನಾತನಿ ವಕೀಲ ಶೂ ಎಸೆದ ಪ್ರಕರಣಕ್ಕೆ ಇಲ್ಲಿಯವರೆಗೂ ಬಿಜೆಪಿ, ಆರೆಸ್ಸೆಸ್‍ನವರು ಯಾರೂ ಖಂಡನೆ ವ್ಯಕ್ತಪಡಿಸಿಲ್ಲ, ಬಂಧಿಸಲೂ ಆಗ್ರಹಿಸಿಲ್ಲ. ಅವರು ಏನಿದ್ದರೂ ಮೇಲ್ವರ್ಗದವರಿಗೆ ಮಾತ್ರ ಬೆಂಬಲ ಸೂಚಿಸುತ್ತಾರೆ ಹೊರತು, ದಲಿತರ ಪರವಾಗಿ ಎಂದೂ ಧ್ವನಿ ಎತ್ತುವುದಿಲ್ಲ ಎಂದು ಮಂಜುನಾಥ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ಸಮಾನತೆ, ಸ್ವಾತಂತ್ರ್ಯವನ್ನೂ ಎಂದಿಗೂ ಒಪ್ಪಿಕೊಂಡಿಲ್ಲ. ಆದುದರಿಂದಲೇ ಸಮಾನತೆಯನ್ನು ಪ್ರತಿಪಾದಿಸಿದ ಗಾಂಧಿ, ಅಂಬೇಡ್ಕರ್, ಪೆರಿಯಾರ್, ಬಸವಣ್ಣನಂತಹ ನಾಯಕರ ಸಿದ್ದಾಂತಗಳನ್ನು ಸಹಿಸುವುದಿಲ್ಲ. ಇವರು ದೇಶಪ್ರೇಮಿಗಳಲ್ಲ, ದೇಶ ವಿರೋಧಿಗಳು, ಭಯೋತ್ಪಾದಕರು. ದೇಶವನ್ನು ಹಾಳು ಮಾಡಲೆಂದೇ ಹುಟ್ಟಿದ್ದಾರೆ. ಆ ನಿಟ್ಟಿನಲ್ಲಿಯೇ ಕೆಲಸ ಮಾಡುತ್ತಿದ್ದಾರೆ. ಇಂತಹ ಆರೆಸ್ಸೆಸ್ ಮನುವಾದಿ ಸಂಘಟನೆಯನ್ನು ರಾಜ್ಯದಲ್ಲಿ ಕೂಡಲೇ ನಿಷೇಧ ಮಾಡಬೇಕು ಎಂದು ಮಂಜುನಾಥ್ ಗೌಡ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕಾರ್ಯಕರ್ತರಾದ ಚೈತ್ರ ಗೌಡ, ನದೀಂ ಅಕ್ರಮ್, ಮುಹಮ್ಮದ್ ಮಾರೂಫ್, ರೇಶಲ್, ಪವನ್ ಗೌಡ, ವಿಶ್ವನಾಥ್ ಸೇರಿದಂತೆ ಹಲವರು ಭಾಗಹಿಸಿದ್ದರು.

ಆರೆಸ್ಸೆಸ್ ಭಾವಚಿತ್ರಕ್ಕೆ ಬೆಂಕಿ ಹಾಕುವ ಮೂಲಕ ಪ್ರತಿಭಟನಾಕಾರರು ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವೇಳೆಯಲ್ಲಿ ರಸ್ತೆಗೆ ನುಗ್ಗಿದ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಹೋರಾಟಗಾರರನ್ನು ಚದುರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X