ಆರೆಸ್ಸೆಸ್ ನಿಷೇಧಿಸಬೇಕು; ದೇವೇಗೌಡರ ಮಾತು ನೆನಪಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಅ. 18: ‘ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್) ನಿಷೇಧವಾಗಬೇಕು’ ಎಂದು ಜೆಡಿಎಸ್ ರಾಷ್ಟ್ರೀಯಾಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಮನ್ ಕಿ ಬಾತ್. ಈ ಮನದಾಳದದ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ?’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ನೆನಪಿಸುವ ಮೂಲಕ, ಜೆಡಿಎಸ್‍ಗೆ ತಿರುಗೇಟು ನೀಡಿದ್ದಾರೆ.
ಶನಿವಾರ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪತ್ರಿಕೆಯೊಂದರ ಸುದ್ದಿಯ ತುಣಕನ್ನು ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ‘ಈ ಹಳೆಯ ಪಾಳೆಯುಳಿಕೆಯಂತಹ ಮಾತುಗಳನ್ನು ಈ ಸಂದರ್ಭದಲ್ಲಿ ಬಿಜೆಪಿಯವರಿಗೆ ನೆನಪು ಮಾಡಲು ಬಯಸುತ್ತೇನೆ’ ಎಂದು ವಾಗ್ದಾಳಿ ನಡೆಸಿದ್ದಾರೆ.
“ಆರ್ಎಸ್ಎಸ್ ನಿಷೇಧವಾಗಬೇಕು“ ಇದು ಜೆಡಿಎಸ್ ನವರ ಮನ್ ಕಿ ಬಾತ್!
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 17, 2025
ಈ ಮನದಾಳದದ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ?
ಈ ಹಳೆಯ ಪಾಳೆಯುಳಿಕೆಯಂತಹ ಮಾತುಗಳನ್ನು ಈ ಸಂದರ್ಭದಲ್ಲಿ ಬಿಜೆಪಿಯವರಿಗೆ ನೆನಪು ಮಾಡಲು ಬಯಸುತ್ತೇನೆ. pic.twitter.com/nG29YD1dIl
Next Story







