ಬೆಂಗಳೂರು | ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು

ಸಾಂದರ್ಭಿಕ ಚಿತ್ರ
ಬೆಂಗಳೂರು, ಅ.19: ವೇಗವಾಗಿ ಬರುತ್ತಿದ್ದ ದ್ವಿಚಕ್ರ ವಾಹನ ಸವಾರನೊಬ್ಬ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಲ್ಲಿನ ಎಚ್ಎಎಲ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುಮಾರು 19 ವರ್ಷದ ಮೃತ ಯುವಕನನ್ನು ಅಸ್ಸಾಂ ಮೂಲದವನು ಎಂದು ಗುರುತಿಸಲಾಗಿದೆ. ಸದ್ಯ ಆತನ ಹೆಸರು ಮತ್ತು ವಿಳಾಸದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಅ.19ರ ರವಿವಾರ ಬೆಳಗಿನ ಜಾವ ಎಚ್ಎಎಲ್ ಸಂಚಾರ ಠಾಣೆ ವ್ಯಾಪ್ತಿಯ ಕರಿಯಮ್ಮನ ಅಗ್ರಹಾರ ಮುಖ್ಯರಸ್ತೆಯ ಕಾಡಬೀಚನಹಳ್ಳಿ ಸಮೀಪದಲ್ಲಿ ಈ ಘಟನೆ ನಡೆದಿದ್ದು, ಯುವಕ ಅತಿ ವೇಗದಲ್ಲಿ ದ್ವಿಚಕ್ರ ವಾಹನ ಚಲಿಸುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಎಚ್ಎಎಲ್ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.





