ಬೆಂಗಳೂರು | ಸಿಲಿಂಡರ್ ಸ್ಫೋಟ: ಮಾಜಿ ಸೈನಿಕನಿಗೆ ಗಾಯ

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು, ಅ.19: ಇಲ್ಲಿನ ಅಂದ್ರಹಳ್ಳಿ ಸಮೀಪದ ಬ್ಯಾಡರಹಳ್ಳಿಯ ವಿದ್ಯಾಮಾನ್ಯ ನಗರದಲ್ಲಿನ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮಾಜಿ ಸೈನಿಕರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಮಡಿಕೇರಿ ಮೂಲದ ಜನಾರ್ದನ್(60) ಗಾಯಾಳು. ಇವರು ವಾಸವಿದ್ದ ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿತ್ತು. ಅ.17ರ ಶುಕ್ರವಾರ ರಾತ್ರಿ 9 ಗಂಟೆಯಲ್ಲಿ ಅಡುಗೆ ಮಾಡಲು ಸ್ಟವ್ ಹಚ್ಚುತ್ತಿದ್ದಂತೆ ಸಿಲಿಂಡರ್ ಸ್ಪೋಟಗೊಂಡಿತ್ತು. ಇದರ ತೀವ್ರತೆಗೆ ಮನೆಯ ಗೋಡೆಗಳು ಬಿರುಕು ಬಿಟ್ಟಿವೆ. ಗಾಯಗೊಂಡಿರುವ ಜನಾರ್ದನ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
Next Story





