Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆರೆಸ್ಸೆಸ್ ವಿಚಾರದಲ್ಲಿ ಹೊಸ ನಿಯಮ...

ಆರೆಸ್ಸೆಸ್ ವಿಚಾರದಲ್ಲಿ ಹೊಸ ನಿಯಮ ರೂಪಿಸಿಲ್ಲ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ19 Oct 2025 11:44 PM IST
share
ಆರೆಸ್ಸೆಸ್ ವಿಚಾರದಲ್ಲಿ ಹೊಸ ನಿಯಮ ರೂಪಿಸಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು : ಸರಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳಿಗೆ ನಿಷೇಧ ಸಂಬಂಧ ರಾಜ್ಯ ಸರಕಾರ ಹೊಸ ನಿಯಮ ರೂಪಿಸಿಲ್ಲ. ಬದಲಾಗಿ, ಈ ಹಿಂದೆ ಬಿಜೆಪಿ ಸರಕಾರವೇ ಜಾರಿಗೊಳಿಸಿದ್ದ ಆದೇಶವನ್ನು ಚಾಲ್ತಿಗೆ ತರಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ರವಿವಾರ ಇಲ್ಲಿನ ಕೋರಮಂಗಲದ ವೀರ ಯೋಧ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ "ಬೆಂಗಳೂರು ನಡಿಗೆ" ಅಭಿಯಾನದ ಅಂಗವಾಗಿ ನಾಗರಿಕರೊಂದಿಗೆ ಸಂವಾದ ನಡೆಸಿ, ಅಹವಾಲು ಆಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಆರೆಸ್ಸೆಸ್ ವಿಚಾರವಾಗಿ ನಾವು ಹೊಸ ನಿಯಮ ರೂಪಿಸಿಲ್ಲ. ಬಿಜೆಪಿ ಸರಕಾರದ ಆದೇಶವನ್ನೇ ಹೊರಡಿಸಿದ್ದೇವೆ. 2013ರಲ್ಲಿ ಜಗದೀಶ್ ಶೆಟ್ಟರ್ ಅವರ ಸರಕಾರದ ಆದೇಶವನ್ನು ಮತ್ತೇ ಜಾರಿಗೊಳಿಸುತ್ತಿದ್ದೇವೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಮಾರ್ಗಸೂಚಿಯನ್ನು ಎಲ್ಲರೂ ಪಾಲನೆ ಮಾಡೋಣ ಎಂದರು.

ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು. ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ. ಆದರೆ, ನಾವು ನಮ್ಮ ಮೂಲವನ್ನು ಮರೆಯಬಾರದು, ಮೂಲವನ್ನು ಮರೆತರೆ ಯಶಸ್ಸು ಸಾಧಿಸುವುದಿಲ್ಲ ಎಂದು ನಾನು ನಂಬಿದ್ದೇನೆ ಎಂದು ತಿಳಿಸಿದರು.

ನಗರದಾದ್ಯಂತ ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂಬುದನ್ನು ಸಾರ್ವಜನಿಕರೇ ಫೋಟೊ ತೆಗೆದು ಅದನ್ನು ಮೊಬೈಲ್ ಆ್ಯಪ್ ಮೂಲಕ ಸರಕಾರದ ಗಮನಕ್ಕೆ ತರುವ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನಾವು ರೂಪಿಸಿದ್ದೇವೆ. ಮಾಧ್ಯಮಗಳೂ ಸಹ ಸುದ್ದಿ ಮಾಡುತ್ತಿವೆ. ನಾನು ಟೀಕೆ ಹಾಗೂ ವಿಮರ್ಶೆಗಳನ್ನು ಸ್ವಾಗತಿಸುತ್ತೇನೆ. ಟೀಕೆಗಳು ಇದ್ದಾಗಲೇ ಪ್ರಜಾಪ್ರಭುತ್ವಕ್ಕೆ ಹೆಚ್ಚು ಮೌಲ್ಯ ಇರುತ್ತದೆ. ಆದರೆ ಕೆಲವರು ವಿಕೋಪಕ್ಕೆ ಹೋಗಿ ಟೀಕೆ ಮಾಡುತ್ತಿದ್ದಾರೆ. ಅಂತಹವರ ಟೀಕೆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಇತಿಹಾಸ ಗಮನಿಸಿದರೆ ನಾವು ಮಾಡಿದಷ್ಟು ತೀರ್ಮಾನಗಳನ್ನು ಯಾರೂ ಸಹ ಮಾಡಿಲ್ಲ. ನಾವು ಮಾಡಿದ ಕೆಲಸಗಳ ಬಗ್ಗೆ ಸಾರ್ವಜನಿಕರಿಗೆ, ವಿರೋಧ ಪಕ್ಷದವರಿಗೆ ಎಲ್ಲರಿಗೂ ತಿಳಿದಿದೆ. ಇಡೀ ದೇಶದಲ್ಲಿ ಸಮಸ್ಯೆಯಿದೆ. ಅವರೆಲ್ಲಾ ಮಾಧ್ಯಮಗಳನ್ನು ನಿಯಂತ್ರಣ ಮಾಡುತ್ತಿದ್ದಾರೆ. ನಾವು ಮುಕ್ತವಾಗಿ ಬಿಟ್ಟಿದ್ದೇವೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X