ಆನೇಕಲ್ ಭಾಗ ಭವಿಷ್ಯದಲ್ಲಿ ಜಿಬಿಎ ವ್ಯಾಪ್ತಿಗೆ ಸೇರ್ಪಡೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ಆನೇಕಲ್ ಭಾಗ ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಲಿದೆ. ಈಗಾಗಲೇ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಭವಿಷ್ಯದಲ್ಲಿ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಗುರುವಾರ ನಗರ ಪ್ರದಕ್ಷಿಣೆ ಅಂಗವಾಗಿ ಆನೇಕಲ್‍ನ ಮುತ್ತನಲ್ಲೂರಿಗೆ ಭೇಟಿ ನೀಡಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಆನೇಕಲ್ ಭಾಗದಲ್ಲಿ ಈಗಿನಿಂದಲೇ ಸಂಚಾರ ದಟ್ಟಣೆ ನಿಯಂತ್ರಣ ಯೋಜನೆ ರೂಪಿಸಬೇಕು. ಏಕೆಂದರೆ ನಗರ ಬೆಳವಣಿಗೆ ಆದ ನಂತರ ಯೋಜನೆ ರೂಪಿಸಲು ಕಷ್ಟವಾಗಲಿದೆ. ಅದಕ್ಕೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದರು.
ಬಯೋಕಾನ್ ಸಂಸ್ಥೆಯು ಪಂಚಾಯತಿ ವ್ಯಾಪ್ತಿಯಲ್ಲಿ ಇದೆ. ಬೆಂಗಳೂರು ನಗರ ವ್ಯಾಪ್ತಿ ಹಾಗೂ ಪಂಚಾಯತಿ ವ್ಯಾಪ್ತಿ ಬೇರೆ, ಬೇರೆ. ಈ ಬಗ್ಗೆ ಈಗಾಗಲೇ ಮಾತನಾಡಿದ್ದೇನೆ. ಈಗ ಏಕೆ ಮತ್ತೆ ಅದರ ಬಗ್ಗೆ ಮಾತು. ನಾನು ಆ ಪ್ರದೇಶವನ್ನ ನೋಡಿಕೊಂಡು ಬಂದಿದ್ದೇನೆ ಎಂದು ಶಿವಕುಮಾರ್ ಹೇಳಿದರು.
Next Story





