Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಚನಿ ಶ್ರೀ ಚರ್ಮ ಶುದ್ಧಿಗಿಂತ ಅಂತರಂಗ...

ಜಚನಿ ಶ್ರೀ ಚರ್ಮ ಶುದ್ಧಿಗಿಂತ ಅಂತರಂಗ ಶುದ್ಧಿಗೆ, ಸಾಮಾಜಿಕ ಶುದ್ಧಿಗೆ ಮಹತ್ವ ನೀಡಿದರು: ಕೆ.ವಿ.ಪ್ರಭಾಕರ್

ವಾರ್ತಾಭಾರತಿವಾರ್ತಾಭಾರತಿ26 Oct 2025 1:30 PM IST
share
ಜಚನಿ ಶ್ರೀ ಚರ್ಮ ಶುದ್ಧಿಗಿಂತ ಅಂತರಂಗ ಶುದ್ಧಿಗೆ, ಸಾಮಾಜಿಕ ಶುದ್ಧಿಗೆ ಮಹತ್ವ ನೀಡಿದರು: ಕೆ.ವಿ.ಪ್ರಭಾಕರ್

ಬೆಂಗಳೂರು: ಮೇಲಿನವರ ಪಾಂಡಿತ್ಯ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದ ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀ ಹೆಗ್ಗಳಿಕೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಶ್ರೀ ಜಚನಿ ಅಧ್ಯಯನ ಪೀಠ ಮತ್ತು ಸಂಶೋಧನಾ ಸಂಸ್ಥೆಯ ಪ್ರಾರಂಭೋತ್ಸವದಲ್ಲಿ 'ಶಿವ ಸಾಹಿತ್ಯ ಸೂರ್ಯ ಶ್ರೀ ಜಚನಿ' ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡುತ್ತಿದ್ದರು.

ಮನುಷ್ಯರನ್ನು ಮುಟ್ಟಿಸಿಕೊಳ್ಳದ ಚರ್ಮ ಶುದ್ಧಿಯ ಆಧ್ಯಾತ್ಮದ ಗೊಡ್ಡುತನವನ್ನು ಧಿಕ್ಕರಿಸಿ 1948ರಲ್ಲೇ ದಲಿತ ಸಮುದಾಯಕ್ಕೆ ತಮ್ಮ ಮಠವನ್ನು ಮುಕ್ತಗೊಳಿಸಿದ ಜಚನಿ ಶ್ರೀ ಸಾಮಾಜಿಕ ಮತ್ತು ಅಂತರಂಗದ ಶುದ್ಧಿಯನ್ನೇ ತಮ್ಮ ಅಧ್ಯಾತ್ಮದ ಉದ್ದೇಶವನ್ನಾಗಿಸಿಕೊಂಡಿದ್ದರು ಎಂದು ವಿವರಿಸಿದರು.

ಆಡು ಮುಟ್ಟದ ಸೊಪ್ಪಿಲ್ಲ, ಜಚನಿ ಶ್ರೀ ಸಾಹಿತ್ಯ ಕೃಷಿ ಮಾಡದ ವಿಷಯಗಳೇ ಇಲ್ಲ ಎಂದು ಹೇಳಬಹುದು. ಧಾರ್ಮಿಕ, ಅಧ್ಯಾತ್ಮಿಕದಿಂದ ದೇಶದ ತುರ್ತು ಪರಿಸ್ಥಿತಿ, ಸರ್ವಾಧಿಕಾರದವರೆಗೂ ಬರೆದಿದ್ದಾರೆ. ತಮ್ಮ ಬದುಕನ್ನು ಸಾಹಿತ್ಯ ಕೃಷಿ ಮತ್ತು ಅಧ್ಯಾತ್ಮದ ಪ್ರಸಾರಕ್ಕೆ ಮಾತ್ರ ಜಚನಿ ಶ್ರೀ ಸೀಮಿತಗೊಳಿಸಿಕೊಳ್ಳಲಿಲ್ಲ ಎಂದು ಕೆ.ವಿ.ಪ್ರಭಾಕರ್ ಹೇಳಿದರು.

ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಇಡೀ ರಾಜ್ಯ ಸುತ್ತಿದ ಸಾಮಾಜಿಕ ಮತ್ತು ರಾಜಕೀಯ ಹೋರಾಟಗಾರರೂ ಆಗಿದ್ದಾರೆ ಎನ್ನುವುದು ಹೊರ ಜಗತ್ತಿಗೆ ಹೆಚ್ಚಾಗಿ ಗೊತ್ತಿಲ್ಲ ಎಂದರು.

ಭೌತವಿಜ್ಞಾನದಿಂದ ಸಮುದ್ರ ವಿಜ್ಞಾನದವರೆಗೂ, ರೈತರ ಸಮಸ್ಯೆಗಳಿಂದ ಕುಡುಕರ ಸಮಸ್ಯೆಗಳವರೆಗೂ ಸಾಹಿತ್ಯ ಕೃಷಿ ಮಾಡಿದ್ದಾರೆ. ಹತ್ತಾರು ಮಂದಿ ಹಲವಾರು ಜೀವಮಾನದಲ್ಲಿ ಮಾಡಬಹುದಾದ ಸಾಧನೆಯನ್ನು ಜಚನಿ ಶ್ರೀ ಒಂದೇ ಜೀವಮಾನದಲ್ಲಿ ಮಾಡಿ ಮುಗಿಸಿದ್ದಾರೆ ಎಂದರು.

ಇಂಥಾ ಜನಮುಖಿ ಅಧ್ಯಾತ್ಮಿಕ ಶಿಖರ ಸೂರ್ಯರ ಕೃತಿಯನ್ನು ಬಿಡುಗಡೆ ಮಾಡಲು ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಿಡುಮಾಮಿಡಿ ಶ್ರೀಗೆ ಧನ್ಯತೆಯನ್ನು ಅರ್ಪಿಸುತ್ತೇನೆ ಎಂದವರು ಹೇಳಿದರು.

12ನೇ ಶತಮಾನದ ವಚನಕ್ರಾಂತಿಯ ರಾಯಭಾರಿಯಾಗಿ 20ನೇ ಶತಮಾನದಲ್ಲಿ ಜಚನಿ ಶ್ರೀ ಬೆಳಗಿದ್ದಾರೆ. 6000 ಕ್ಕೂ ಹೆಚ್ಚು ಆಧುನಿಕ ವಚನಗಳು, 400ಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ರಚಿಸಿರುವುದು ನನ್ನ ಕಲ್ಪನಾ ಶಕ್ತಿಗೂ ನಿಲುಕದ ಅಧ್ಯಾತ್ಮಿಕ ಸಾಧನೆಯಾಗಿದೆ. ಇಂತಹ ಮಾನವೀಯ ಸಾಧಕ ಗುರುಗಳ ಬಗ್ಗೆ ನಿಡುಮಾಮಿಡಿ ಶ್ರೀ ಸಂಪಾದಿಸಿರುವ ಈ ಪುಸ್ತಕ ಕೂಡ ಅತ್ಯಂತ ಮೌಲಿಕವಾದದ್ದು. ಈ ಪುಸ್ತಕ ಜಚನಿ ಶ್ರೀಯ ಒಟ್ಟಾರೆ ಸಾಧನೆಯನ್ನು ತಿಳಿಯಲು ಮತ್ತು ಅವರ ಮಾರ್ಗದಲ್ಲಿ ಹೋಗಲು ಬಯಸುವವರಿಗೆ ಹೆದ್ದಾರಿಯಾಗಿದೆ ಎಂದು ಹೇಳಲು ಬಯಸುತ್ತೇನೆ ಎಂದರು.

ಬೈಲಹೊಂಗಲದ ಅಂಬಡಗಟ್ಟಿ ಗ್ರಾಮದಲ್ಲಿ ಜನಿಸಿ, ನನ್ನ ಕೋಲಾರ ಜಿಲ್ಲೆಯ ಗೂಳೂರಿನ ನಿಡುಮಾಮಿಡಿ ಮಠದ ಪೀಠಾಧಿಪತಿಯಾಗಿ ಕೋಲಾರದ ಮಣ್ಣಿನಲ್ಲಿ ವನಚ ಕ್ರಾಂತಿಯ ಬೆಳಕಿನ ದೀವಿಗೆ ಹಚ್ಚಿರುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದರು.

ಜಗದ್ಗುರು ಚನ್ನಬಸವರಾಜ ದೇಶೀಕೇಂದ್ರ ಶಿವಾಚಾರ್ಯ ಸ್ವಾಮಿ 'ಜಚನಿ ಶ್ರೀ' ಹೆಸರಿನಲ್ಲಿ ಕನ್ನಡ ಮಣ್ಣಿನಲ್ಲಿ ಶಾಶ್ವತ ನೆಲೆ ಗಳಿಸಿದ್ದಾರೆ. ಅವರ ಪುಸ್ತಕ ಬಿಡುಗಡೆ ಮಾಡುವ ಮೂಲಕ 'ಜಚನಿ ಶ್ರೀ' ನನ್ನ ಅಂತರಂಗದಲ್ಲೂ ದಾಖಲಾಗಿದ್ದಾರೆ ಎನ್ನುವ ಧನ್ಯತೆಯನ್ನು ಅರ್ಪಿಸಿ ಮಾತು ಮುಗಿಸುತ್ತೇನೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X