ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಇಬ್ಬರು ಪೊಲೀಸರು ಅಮಾನತು

ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಸುನೀಲ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಸೋಮವಾರ ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿದ್ದು, ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಸುನೀಲ್ ಹಾಗೂ ಎಎಸ್ಸೈ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ಇಬ್ಬರನ್ನೂ ಅಮಾನತು ಮಾಡಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಇನ್‍ಸ್ಪೆಕ್ಟರ್ ಸುನೀಲ್ ವಿರುದ್ಧ 36 ವರ್ಷದ ಮಹಿಳೆಯೊಬ್ಬರು ಡಿ.ಜಿ. ಕಚೇರಿಗೆ ದೂರು ನೀಡಿದ್ದರು.
Next Story





