ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ | ಆನ್‍ಲೈನ್‍ನಲ್ಲಿ ಸ್ವಯಂ ಘೋಷಣೆ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ರಾಜ್ಯದಲ್ಲಿ ಕೈಗೊಂಡಿರುವ ಆನ್‍ಲೈನ್ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಅವಧಿಯನ್ನು ನವೆಂಬರ್ 10ರ ವರೆಗೆ ವಿಸ್ತರಿಸಲಾಗಿದೆ.
ಸಮೀಕ್ಷೆಯ ಅವಧಿ ನಾಳೆ(ಅ.31)ಗೆ ಮುಕ್ತಾಯಗೊಳ್ಳಲಿದ್ದು, ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಅಂಗವಾಗಿ ಆನ್‍ಲೈನ್ https://kscbcselfdeclaration.karnataka.gov.in ಲಿಂಕ್ ಮೂಲಕ ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ-8050 7700 04 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





