Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಮೃತದೇಹ ಮುಂದಿಟ್ಟುಕೊಂಡು...

ಬೆಂಗಳೂರು | ಮೃತದೇಹ ಮುಂದಿಟ್ಟುಕೊಂಡು ಲಂಚ ಸ್ವೀಕಾರ: ತಂದೆಯ ಭಾವುಕ ಪೋಸ್ಟ್ ವೈರಲ್, ಪಿಎಸ್ಸೈ, ಕಾನ್‍ಸ್ಟೇಬಲ್ ಅಮಾನತು!

ವಾರ್ತಾಭಾರತಿವಾರ್ತಾಭಾರತಿ31 Oct 2025 1:16 AM IST
share
ಬೆಂಗಳೂರು | ಮೃತದೇಹ ಮುಂದಿಟ್ಟುಕೊಂಡು ಲಂಚ ಸ್ವೀಕಾರ: ತಂದೆಯ ಭಾವುಕ ಪೋಸ್ಟ್ ವೈರಲ್, ಪಿಎಸ್ಸೈ, ಕಾನ್‍ಸ್ಟೇಬಲ್ ಅಮಾನತು!

ಬೆಂಗಳೂರು : ತನ್ನ ಮಗಳ ಮೃತದೇಹವನ್ನು ಮುಂದಿಟ್ಟುಕೊಂಡು ಎದುರಿಸಿದ ಕಿರುಕುಳ ಮತ್ತು ಭ್ರಷ್ಟಾಚಾರದ ಬಗ್ಗೆ ತಂದೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಅಳಲು ತೋಡಿಕೊಂಡಿದ್ದ ಪೋಸ್ಟ್ ವೈರಲ್ ಆದ ಬೆನ್ನಲ್ಲೇ, ಬೆಳ್ಳಂದೂರು ಠಾಣೆಯ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ (ಪಿಎಸ್ಸೈ) ಮತ್ತು ಕಾನ್‍ಸ್ಟೇಬಲ್‍ರನ್ನು ಗುರುವಾರ ಅಮಾನತುಗೊಳಿಸಲಾಗಿದೆ.

ಬೆಳ್ಳಂದೂರು ಠಾಣೆಯ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್(ಪಿಎಸ್ಸೈ) ಸಂತೋಷ್, ಕಾನ್‍ಸ್ಟೇಬಲ್ ಗೋರಕ್‍ನಾಥ್ ಅವರನ್ನು ಅಮಾನತುಗೊಳಿಸಿ ವೈಟ್‍ಫೀಲ್ಡ್ ವಿಭಾಗದ ಡಿಸಿಪಿ ಕೆ.ಪರಶುರಾಮ ಆದೇಶಿಸಿದ್ದಾರೆ.

ಭಾರತ್ ಪೆಟ್ರೋಲಿಯಂ ಕಾ‌ರ್ಪೊರೇಷನ್ ಲಿಮಿಟೆಡ್‍ನ (ಬಿಪಿಸಿಎಲ್) ನಿವೃತ್ತ ಮುಖ್ಯ ಹಣಕಾಸು ಅಧಿಕಾರಿ ಶಿವಕುಮಾರ್ ಕೆ. ಎಂಬುವವರು ಸೆಪ್ಟೆಂಬರ್‍ನಲ್ಲಿ ತಮ್ಮ 34 ವರ್ಷದ ಪುತ್ರಿ ಅಕ್ಷಯಾ ಅವರ ಮೆದುಳಿನಲ್ಲಿನ ರಕ್ತಸ್ರಾವದಿಂದಾಗಿ ಮೃತಪಟ್ಟ ನಂತರ ಸಂಕಷ್ಟದ ಸಮಯದಲ್ಲಿಯೂ ತಾವು ಅನುಭವಿಸಿದ ಯಾತನೆಯನ್ನು ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದರು.

‘ಮಗಳ ಶವ ಸಾಗಿಸಲು ಆಂಬ್ಯುಲೆನ್ಸ್ ವಾಹನಕ್ಕೆ ಲಂಚ ನೀಡಬೇಕಾಯಿತು. ಮಗಳ ಶವದ ಮರಣೋತ್ತರ ಪರೀಕ್ಷೆ ನಡೆಸಿ ವರದಿ ನೀಡಲು ಲಂಚ ಕೇಳಿದರು. ಎಫ್‍ಐಆರ್ ದಾಖಲಿಸಿಕೊಳ್ಳಲು ಬೆಳ್ಳಂದೂರು ಠಾಣೆಯ ಪೊಲೀಸರು ಲಂಚ ಕೇಳಿದರು. ಬೆಳ್ಳಂದೂರು ಠಾಣೆಯ ಇನ್‍ಸ್ಪೆಕ್ಟರ್ ಅಹಂಕಾರದಿಂದ ವರ್ತಿಸಿದರು. ಶವ ಸಂಸ್ಕಾರ ಮಾಡಲು ಚಿತಾಗಾರಕ್ಕೆ ಹೋದಾಗ ಅಲ್ಲಿಯೂ ಲಂಚ ನೀಡಬೇಕಾಯಿತು. ಮಗಳ ಮರಣ ಪ್ರಮಾಣಪತ್ರ ಪಡೆಯಲು ಕೂಡಾ ಪಾಲಿಕೆಯ ಅಧಿಕಾರಿಗಳಿಗೂ ಲಂಚ ಕೊಡಬೇಕಾಯಿತು. ಮಗಳನ್ನು ಕಳೆದುಕೊಂಡ ತಂದೆಯ ಬಗ್ಗೆ ಯಾರೊಬ್ಬರಿಗೂ ಸಹಾನುಭೂತಿ ಇರಲಿಲ್ಲ. ನನ್ನ ಬಳಿ ಕೊಡಲು ಹಣವಿತ್ತು. ಆದರೆ ಬಡವರು ಏನು ಮಾಡುತ್ತಾರೆ?’ ಎಂದು ಶಿವಕುಮಾರ್ ಅಳಲು ತೋಡಿಕೊಂಡಿದ್ದರು.

ಶಿವಕುಮಾರ್ ಅವರ ಅನುಭವದ ಬಗ್ಗೆ ದುಃಖ ವ್ಯಕ್ತಪಡಿಸಿ, ಅನೇಕರು ಬೆಂಗಳೂರು ನಗರ ಪೊಲೀಸ್ ಮತ್ತು ವೈಟ್‍ಫೀಲ್ಡ್ ವಿಭಾಗದ ಡಿಸಿಪಿ ಖಾತೆಗಳಿಗೆ ‘ಎಕ್ಸ್’ ನಲ್ಲಿರುವ ಪೋಸ್ಟ್‌ ಗಳನ್ನು ಟ್ಯಾಗ್ ಮಾಡುವ ಮೂಲಕ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದರು.

ಈ ಸಂಬಂಧ ಡಿಸಿಪಿ ಕಚೇರಿಯು ಉತ್ತರಿಸಿದ್ದು, ಶಿವಕುಮಾರ್ ಅವರ ‘ಎಕ್ಸ್’ ಖಾತೆಯಲ್ಲಿ ಉಲ್ಲೇಖಿಸಲಾದ ಘಟನೆಗೆ ಸಂಬಂಧಿಸಿದಂತೆ, ಬೆಳ್ಳಂದೂರು ಪೊಲೀಸ್ ಠಾಣೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ವಿಷಯವನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗುವುದು ಮತ್ತು ಭಾಗಿಯಾಗಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆ ಯಾವುದೇ ಸಂದರ್ಭದಲ್ಲೂ ಅಸಭ್ಯ ಅಥವಾ ಅನುಚಿತ ವರ್ತನೆಯನ್ನು ಸಹಿಸುವುದಿಲ್ಲ ಎಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X