Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಇಂದಿರಾ ಗಾಂಧಿ ಆದರ್ಶಗಳನ್ನು ಪಾಲಿಸುವುದೇ...

ಇಂದಿರಾ ಗಾಂಧಿ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ಗೌರವ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ31 Oct 2025 8:11 PM IST
share
ಇಂದಿರಾ ಗಾಂಧಿ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ಗೌರವ : ಸಿಎಂ ಸಿದ್ದರಾಮಯ್ಯ
ಇಂದಿರಾ ಗಾಂಧಿ ಪುಣ್ಯಸ್ಮರಣೆ ಹಾಗೂ ಸರ್ದಾರ್ ವಲ್ಲಭಬಾಯಿ ಪಟೇಲ್ 150ನೇ ಜನ್ಮದಿನಾಚರಣೆ ಕಾರ್ಯಕ್ರಮ

ಬೆಂಗಳೂರು : ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶಕ್ಕಾಗಿ ಹುತಾತ್ಮರಾಗಿ ಅವರ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ಅವರ ಆದರ್ಶಗಳನ್ನು ಪಾಲಿಸುವುದೆ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯಸ್ಮರಣೆ ಹಾಗೂ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150ನೆ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಂದಿರಾ ಗಾಂಧಿ ದಿಟ್ಟ ಮಹಿಳೆಯಾಗಿದ್ದು, ಅವರನ್ನು ಉಕ್ಕಿನ ಮಹಿಳೆ ಎಂದು ಕರೆಯಲಾಗುತ್ತಿತ್ತು. ಬಾಂಗ್ಲಾದೇಶದ ವಿಮೋಚನಾ ಸಂದರ್ಭದಲ್ಲಿ ವಾಜಪೇಯಿಯವರು ಇಂದಿರಾ ಗಾಂಧಿಯನ್ನು ದುರ್ಗೆಯೆಂದು ಕರೆದಿದ್ದರು. ಪಾಕಿಸ್ತಾನವನ್ನು ಸದೆಬಡೆದು ಬಾಂಗ್ಲಾದೇಶವನ್ನು ವಿಮೋಚನೆಗೊಳಿಸಿದ ಈ ಯುದ್ಧದಲ್ಲಿ ಸುಮಾರು 90 ಸಾವಿರ ಪಾಕಿಸ್ತಾನ ಸೈನಿಕರು ಸೆರೆಯಾಗಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

ಇಂದಿರಾಗಾಂಧಿ ಧೀಮಂತ ನಾಯಕಿ. ದೀರ್ಘ ಕಾಲದವರೆಗೆ ದೇಶವನ್ನಾಳಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಅವಧಿಯಲ್ಲಿ ಬಡತನ ನಿರ್ಮೂಲನೆಗೊಳಿಸುವ ‘ಗರೀಬಿ ಹಠಾವೋ’ ಘೋಷಣೆಯನ್ನು ಮಾಡಿದ್ದರು. ಭಾರತದಲ್ಲಿ ಅಸಮಾನತೆಯಿದೆ. ಇಂದಿರಾಗಾಂಧಿಯವರ ಕಾಲಘಟ್ಟದಲ್ಲಿ ಬಡವರ ಸಂಖ್ಯೆ ಹೆಚ್ಚಿತ್ತು. ಆದುದರಿಂದ, ಬಡತನ ಹೋಗಲಾಡಿಸಲು 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದರು ಎಂದು ಮುಖ್ಯಮಂತ್ರಿ ಸ್ಮರಿಸಿದರು.

ಜಾತಿವ್ಯವಸ್ಥೆಯಿಂದ ಅಸಮಾನತೆ ಹೆಚ್ಚಿದೆ: ನಮ್ಮ ಸಂವಿಧಾನ ಎಲ್ಲರಿಗೂ ಬದುಕುವ ಹಕ್ಕನ್ನು ನೀಡಿದೆ. ಜಾತಿ ವ್ಯವಸ್ಥೆಯಿಂದ ಅಸಮಾನತೆ ಹೆಚ್ಚಿದ್ದು, ಬಹುಸಂಖ್ಯಾತ ಜನರು, ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಚತುರ್ವರ್ಣ ವ್ಯವಸ್ಥೆಯಲ್ಲಿ ಮೊದಲ ಮೂರು ವರ್ಗಗಳಿಗೆ ಎಲ್ಲ ಅವಕಾಶಗಳು ಸಿಗುತ್ತಿತ್ತು. ಆದರೆ ಮೇಲ್ವರ್ಗದ ಹೆಣ್ಣುಮಕ್ಕಳೂ ಸಹ ಶಿಕ್ಷಣದಿಂದ ವಂಚಿತರಾಗಿದ್ದರು ಎಂದು ಅವರು ಹೇಳಿದರು.

ಸಮ ಸಮಾಜ ಪರಿಕಲ್ಪನೆಗೆ ಜೀವ ತುಂಬಿದ್ದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದರು. ನಮ್ಮ ಸರಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಎಲ್ಲ ಸರಕಾರಿ ಕಚೇರಿಗಳಲ್ಲಿ ಬಸವಣ್ಣವರ ಭಾವಚಿತ್ರವನ್ನು ಅಳವಡಿಸಲು ಆದೇಶ ಹೊರಡಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.

ʼಉಕ್ಕಿನ ಮನುಷ್ಯʼ ವಲ್ಲಭಭಾಯಿ ಪಟೇಲ್‌ :

ವಲ್ಲಭಭಾಯಿ ಪಟೇಲರು ದೇಶದ ಉಪಪ್ರಧಾನಿಗಳಾಗಿದ್ದರಲ್ಲದೆ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಲ್ಲಿ ಅಗ್ರಗಣ್ಯರು. ಸ್ವಾತಂತ್ರ್ಯ ಗಳಿಸಿದಾಗ ದೇಶದಲ್ಲಿ 562 ಸಂಸ್ಥಾನಗಳನ್ನು ಭಾರತಕ್ಕೆ ಸೇರಿಸಲು ಗೃಹ ಸಚಿವರಾಗಿದ್ದ ವಲ್ಲಭ ಭಾಯಿ ಪಟೇಲರ ಪ್ರಯತ್ನವೇ ಕಾರಣ. ಅದಕ್ಕಾಗಿಯೇ ಅವರನ್ನು ಉಕ್ಕಿನ ಮನುಷ್ಯ ಎಂದು ಕರೆಯುತ್ತೇವೆ. ಅವರ 150ನೆ ಜನ್ಮ ದಿನದಂದು ಗೌರವದಿಂದ ನಾವು ಅವರನ್ನು ಸ್ಮರಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಯೇ ಇಲ್ಲ: ಬಿಜೆಪಿಯವರು ನೆಹರೂ ಅವರನ್ನು ಟೀಕಿಸುತ್ತಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮಾ ಗಾಂಧಿಯವರ ನೇತೃತ್ವದಲ್ಲಿ ನೆಹರೂ, ವಲ್ಲಭಭಾಯಿ ಪಟೇಲ್, ಸುಭಾಷ್‌ ಚಂದ್ರ ಬೋಸ್ ಸೇರಿದಂತೆ ಅನೇಕರು ಹೋರಾಡಿದರು. ಇಂದು ದೇಶ ಸ್ವತಂತ್ರವಾಗಿದ್ದರೆ ಅದು ಅವರ ಹೋರಾಟದ ಫಲ ಎಂದು ಅವರು ತಿಳಿಸಿದರು.

ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಯೆ ಇಲ್ಲ. ಸಾವರ್ಕರ್, ಗೋಳ್ವಾಲ್ಕರ್ ಆಗಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ. ಈಗ ಬಿಜೆಪಿಯವರು ಮಹಾನ್ ದೇಶಭಕ್ತರಂತೆ ಮಾತನಾಡುತ್ತಾರೆ. ಇದು ಬಿಜೆಪಿಯವರ ಢೋಂಗಿತನ ಎಂದು ಮುಖ್ಯಮಂತ್ರಿ ಟೀಕಿಸಿದರು.

ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದು ಕಾಂಗ್ರೆಸ್ ಹೊರತು ಬೇರೆ ಯಾರೂ ಅಲ್ಲ. 1925 ರಲ್ಲಿಯೆ ಆರೆಸ್ಸೆಸ್ ಸ್ಥಾಪನೆಯಾಗಿತ್ತು. ಆಗ ಸ್ವಾತಂತ್ರ್ಯ ಹೋರಾಟ ಬಹಳ ಬಿರುಸಾಗಿ ನಡೆಯುತ್ತಿದ್ದ ಕಾಲ. ಕೆ.ಬಿ.ಹೆಡ್ಗೆವಾರ್ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಎಂದು ಆರೆಸ್ಸೆಸ್ ಕಾರ್ಯಕರ್ತರಿಗೆ ಕರೆ ನೀಡಲಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಸಾವರ್ಕರ್ ಮತ್ತು ಹಿಂದೂ ಮಹಾ ಸಭಾದ ಅಧ್ಯಕ್ಷ ಗೋಳ್ವಾಲ್ಕರ್ ಇಬ್ಬರೂ ಸಂವಿಧಾನವನ್ನು ವಿರೋಧಿಸಿದವರು. ಮನುವಾದಿಗಳು, ಚತುರ್ವಣ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟುಕೊಂಡವರು ಯಾವತ್ತೂ ಸಂವಿಧಾನದ ಪರವಾಗಿಲ್ಲ ಎಂದು ಮುಖ್ಯಮಂತ್ರಿ ಕಿಡಿಗಾರಿದರು.

ಕಾರ್ಯಕ್ರಮದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಚಿವ ಡಾ.ಎಚ್.ಸಿ. ಮಹದೇವಪ್ಪ, ಪರಿಷತ್ತಿನ ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಮಾಜಿ ಸಂಸದ ಚಂದ್ರಪ್ಪ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X