Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ʼಶರಾವತಿ ಭೂಗತ ಜಲವಿದ್ಯುತ್ ಯೋಜನೆʼ...

ʼಶರಾವತಿ ಭೂಗತ ಜಲವಿದ್ಯುತ್ ಯೋಜನೆʼ ರದ್ದುಪಡಿಸಲು ಕೋರಿ ಮುಖ್ಯ ನ್ಯಾಯಮೂರ್ತಿಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ1 Nov 2025 12:08 AM IST
share
ʼಶರಾವತಿ ಭೂಗತ ಜಲವಿದ್ಯುತ್ ಯೋಜನೆʼ ರದ್ದುಪಡಿಸಲು ಕೋರಿ ಮುಖ್ಯ ನ್ಯಾಯಮೂರ್ತಿಗೆ ಪತ್ರ

ಬೆಂಗಳೂರು, ಅ.31: ಶಿವಮೊಗ್ಗ ಜಿಲ್ಲೆಯ ಪಶ್ಚಿಮಘಟ್ಟದಲ್ಲಿ ಸುಮಾರು 16ಸಾವಿರಕ್ಕೂ ಹೆಚ್ಚು ದೈತ್ಯಾಕಾರದ ಮರಗಳನ್ನು ಕತ್ತರಿಸುವ ಜೊತೆಗೆ ಅಪರೂಪದ ಸಸ್ಯ, ಪ್ರಾಣಿ ಸಂಕುಲನಕ್ಕೆ ಧಕ್ಕೆ ಉಂಟು ಮಾಡುವ ‘ಶರಾವತಿ ಭೂಗತ ಜಲವಿದ್ಯುತ್ ಯೋಜನೆ’ಯನ್ನು ರದ್ದು ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಎಚ್.ಎಂ.ವೆಂಕಟೇಶ್ ಒತ್ತಾಯಿಸಿದ್ದಾರೆ.

ಶುಕ್ರವಾರ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿರುವ ಅವರು, ರಾಜ್ಯ ಸರಕಾರವು ‘ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನೆ ಘಟಕ’ವನ್ನು ಪರಿಸರ ಸೂಕ್ಷ್ಮ ಅರಣ್ಯ ಪ್ರದೇಶದಲ್ಲಿ ನಿರ್ಮಾಣ ಮಾಡುತ್ತಿದ್ದು, ಇದು ಅವೈಜ್ಞಾನಿಕವಾಗಿದೆ. ಯೋಜನೆಯಿಂದ ವನ್ಯಜೀವಿ, ಅಪರೂಪದ ಸಸ್ಯ ಸಂಕುಲನ ಜನಜಾನುವಾರುಗಳಿಗೆ ತೊಂದರೆ ಉಂಟಾಗುತ್ತಿದೆ ಎಂದಿದ್ದಾರೆ.

ಈ ಯೋಜನೆಯ ಅಂದಾಜು ವೆಚ್ಚ 10,500 ಕೋಟಿ ರೂ. ಆಗಿದ್ದು, ಯೋಜನೆಯ ಬಗ್ಗೆ ಜನಸಾಮಾನ್ಯರಿಗೆ ಮಾಹಿತಿಯನ್ನು ನೀಡದೆ ಏಕಪಕ್ಷಿಯ ನಿರ್ಧಾರಗಳನ್ನು ತೆಗೆದುಕೊಂಡು ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಹಾನಿ ಉಂಟು ಮಾಡುತ್ತಿದ್ದಾರೆ. ಸರಕಾರ ಯೋಜನಾ ವರದಿಯನ್ನೇ(ಡಿಪಿಆರ್) ಗುಪ್ತವಾಗಿರಿಸಿ ಪಾರದರ್ಶಕದ ಆಡಳಿತವನ್ನು ಕಡೆಗಣಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಅರಣ್ಯ ಸಂಪತ್ತು, ಸಸ್ಯ ಸಂಪತ್ತು, ಪ್ರಾಣಿ-ಪಕ್ಷಿಗಳ ಸಂಪತ್ತು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರ ಭಾಗದಲ್ಲಿ 745 ಮರಗಳು, ವನ್ಯಜೀವಿ ವಲಯದಲ್ಲಿ 1,918 ಮರಗಳು, ಉತ್ತರ ಕನ್ನಡ ಭಾಗದಲ್ಲಿ 13,856 ಮರಗಳು ಹೀಗೆ ಪ್ರಕೃತಿ ಸಹಜವಾಗಿ ಬೆಳೆದು ನಿಂತಿರುವ 16,041 ಮರಗಳನ್ನು ಅಂದಾಜಿಸಿ ಕತ್ತರಿಸಲಾಗುತ್ತಿದೆ. ಸರಕಾರಿ ಪಾಠಶಾಲೆಗಳು, ದೇವಾಲಯಗಳು, ರೈತರ ಮನೆಗಳು ಮತ್ತು ಜಾನುವಾರುಗಳ ಕೊಟ್ಟಿಗೆಗಳು ಈ ಯೋಜನೆಯಿಂದ ನಾಶವಾಗುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಯೋಜನೆಯನ್ನು ತಡೆಯಲು ವಿವಿಧ ಪರಿಸರ ಸಂಘಟನೆಗಳು, ಪರಿಸರ ಕಾರ್ಯಕರ್ತರು, ಇನ್ನಿತರ ಸಂಘಟನೆಗಳು ಮತ್ತು ನಾಗರಿಕರು ನಿರಂತರ ಪ್ರಯತ್ನ ಪಟ್ಟರೂ, ಸರಕಾರವು ನಾಗರಿಕರ ಮನವಿಗಳನ್ನು ಕೇಳಲು ತಯಾರಿಲ್ಲದಿರುವುದು ದುರದೃಷ್ಟಕರ ಸಂಗತಿಯಾಗಿದೆ. ಹೀಗಾಗಿ ಈ ಮನವಿ ಪತ್ರವನ್ನೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಿ, ವಿಚಾರಣೆಯನ್ನು ನಡೆಸಬೇಕು ಎಂದು ಎಚ್.ವೆಂಕಟೇಶ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯನ್ನು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X