Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆರೆಸ್ಸೆಸ್ ಇಲ್ಲದೇ ಹೋದರೆ ಬಿಜೆಪಿ...

ಆರೆಸ್ಸೆಸ್ ಇಲ್ಲದೇ ಹೋದರೆ ಬಿಜೆಪಿ ಶೂನ್ಯ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ2 Nov 2025 3:05 PM IST
share
ಆರೆಸ್ಸೆಸ್ ಇಲ್ಲದೇ ಹೋದರೆ ಬಿಜೆಪಿ ಶೂನ್ಯ: ಡಿ.ಕೆ.ಶಿವಕುಮಾರ್
''ಟನಲ್ ರಸ್ತೆ ಯೋಜನೆ ಬಗ್ಗೆ ಟೀಕೆ ಬಿಟ್ಟು ಬಿಜೆಪಿ ನಾಯಕರು ಸಲಹೆ ನೀಡಲಿ''

ಬೆಂಗಳೂರು, ನ.2: " ಆರೆಸ್ಸೆಸ್ ಇಲ್ಲದೇ ಹೋದರೆ ಬಿಜೆಪಿಯು ಶೂನ್ಯ. ಬಿಜೆಪಿ ಬದುಕಿರುವುದೇ ಆರೆಸ್ಸೆಸ್ ನಿಂದ. ಇದು ಬಿಟ್ಟರೆ ಬೇರೆ ಯಾವುದೇ ಅಸ್ತ್ರ ಅವರುಗಳ ಬಳಿ ಇಲ್ಲ. ಅವರಲ್ಲಿ ಶೇ.20ರಷ್ಟು ಜನ ಬಿಟ್ಟರೆ ಮಿಕ್ಕ ಎಲ್ಲರೂ ಕಲುಷಿತಗೊಂಡವರೇ. ದಳ, ಕಾಂಗ್ರೆಸ್ ಹಾಗೂ ಬೇರೆ, ಬೇರೆ ಪಕ್ಷಗಳಿಂದ ಹೋಗಿರುವವರೇ ಅಲ್ಲಿರುವುದು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ರವಿವಾರ ಅವರು ಪ್ರತಿಕ್ರಿಯೆ ನೀಡಿದರು.

ಟನಲ್ ರಸ್ತೆ ಯೋಜನೆ ಬಗ್ಗೆ ಟೀಕೆ ಬಿಟ್ಟು ಬಿಜೆಪಿ ನಾಯಕರು ಸಲಹೆ ನೀಡಲಿ

"ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿ ನಾಯಕರು ಟೀಕೆ ಬಿಟ್ಟು ಸಲಹೆಗಳನ್ನು ನೀಡಲಿ. ಈ ಯೋಜನೆ ನನ್ನ ಆಸ್ತಿಯಲ್ಲ. ಸಾರ್ವಜನಿಕರಿಗಾಗಿ ಮಾಡುತ್ತಿರುವ ಯೋಜನೆ. ನನಗೆ ಬಿಜೆಪಿಯವರು ಪರಿಹಾರ ಮಾತ್ರ ತಿಳಿಸಲಿ" ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಟನಲ್ ರಸ್ತೆ ವಿರೋಧಿಸಿ ಬಿಜೆಪಿಯವರು ಸಹಿ ಸಂಗ್ರಹ ಅಭಿಯಾನ ನಡೆಸುತ್ತಿರುವ ಬಗ್ಗೆ ಕೇಳಿದಾಗ, "ನನಗೂ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲು ಗೊತ್ತಿದೆ. ಅವರಿಗಿಂತ ಹೆಚ್ಚು ಸಂಘಟನೆ ಮಾಡುವವನು ನಾನು. ಅವರು ಒಂದು ಸಂಸ್ಥೆ ಇಟ್ಟುಕೊಂಡು ಸಂಘಟನೆ ಮಾಡುತ್ತಿದ್ದಾರೆ. ನಾವು ಪಕ್ಷದ ಮೂಲಕವೇ ಸಂಘಟನೆ ಮಾಡುತ್ತಿದ್ದೇವೆ. ಯಾವುದೇ ಪರಿಹಾರ ಹೇಳದೆ ಟೀಕೆ ಮಾಡಿದರೆ ಏನು ಪ್ರಯೋಜನ? ಒಳ್ಳೆಯ ಸಲಹೆಗಳನ್ನು ನೀಡಿದರೆ ಒಪ್ಪಿಕೊಳ್ಳೋಣ" ಎಂದರು.

ಮೆಟ್ರೋ ಸಂಚಾರ ಟನಲ್ ಮೂಲಕವೇ ಅಲ್ಲವೇ?

"ಮೆಟ್ರೋ ಮಾರ್ಗ ಹೋಗುವುದು ಟನಲ್ ಮೂಲಕವೇ ಅಲ್ಲವೇ? ಈ ಯೋಜನೆ ತಂದವರು ಯಾರು? ಎಸ್.ಎಂ.ಕೃಷ್ಣ ಕಾಲದಲ್ಲಿ ಹತ್ತು ದೇಶಗಳನ್ನು ತಿರುಗಿ ಅಧ್ಯಯನ ನಡೆಸಿ ವರದಿ ಮಾಡಿದ್ದೆ. ಎಸ್.ಎಂ. ಕೃಷ್ಣ ಅವರು, ಅನಂತಕುಮಾರ್ ಹಾಗೂ ನಾನು ದಿಲ್ಲಿಗೆ ತೆರಳಿ ಅಂದಿನ ಪ್ರಧಾನಿ ವಾಜಪೇಯಿಯವರಿಗೆ ವರದಿ ನೀಡಿದ್ದೆವು. ಹೀಗೆ ಯೋಜನೆ ಪ್ರಾರಂಭವಾಯಿತು" ಎಂದು ಹೇಳಿದರು.

ತೇಜಸ್ವಿ ಸೂರ್ಯ ದೊಡ್ಡ ನಾಯಕ

ಅಮೆರಿಕದಲ್ಲಿ ಉಗಿಸಿಕೊಂಡು ಬಂದಿದ್ದ ಸಂಸದ ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿಗೆ ಶಿವಕುಮಾರ್ ಧಮ್ಕಿ ಹಾಕುತ್ತಿದ್ದಾರೆ ಎನ್ನುವ ಅಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ, "ನಾನೇಕೆ ಧಮ್ಕಿ ಹಾಕಲಿ? ರಾಮಮೂರ್ತಿ ನಮ್ಮ ಹುಡುಗ. ತೇಜಸ್ವಿ ಸೂರ್ಯ ದೊಡ್ಡ ನಾಯಕ, ಅತೀ ಬುದ್ಧಿವಂತ. ಅದಕ್ಕೆ ವಿಮಾನದ ತುರ್ತು ನಿರ್ಗಮನ ದ್ವಾರವನ್ನೇ ತೆರೆಯಲು ಹೋಗಿದ್ದ. ಯಾವುದೇ ಅನುಮತಿ ಇಲ್ಲದೇ ಅಮೆರಿಕ ಅಧ್ಯಕ್ಷ ಟ್ರಂಪ್ ಭೇಟಿ ಮಾಡಲು ಹೋಗಿ ಉಗಿಸಿಕೊಂಡು ಬಂದವನು. ಈಗ ಕಾರಲ್ಲಿ ಓಡಾಡಬೇಡಿ ಎನ್ನುತ್ತಾನೆ. ಮದುವೆಯಾಗುವ ವೇಳೆಯಲ್ಲಿ ಹೊಸ ಕಾರು ಬೇಕು ಎಂದು ಅರ್ಜಿ ನೀಡಿದ್ದ. ದಾಖಲೆ ಬಿಡುಗಡೆ ಮಾಡಿ ಎಂದರೆ ಬಿಡುಗಡೆ ಮಾಡುತ್ತೇವೆ" ಎಂದು ವ್ಯಂಗ್ಯವಾಡಿದರು.

"ಈಗ ಆತ ಹಾಗೂ ಬಿಜೆಪಿ ನಾಯಕರು ಕಾರಲ್ಲಿ ಓಡಾಡುವುದು ಬಿಟ್ಟು ಮೆಟ್ರೋ, ಸಾರ್ವಜನಿಕ ಸಾರಿಗೆ ಬಳಸಲಿ. ಇವರ ನಾಟಕಗಳನ್ನು ಕೇಳುವವರು ಯಾರು? ಆತನಿಗೆ ಮದುವೆಗೆ ಮುಂಚಿತವಾಗಿ ಹೊಸ ಕಾರು ಏಕೆ ಬೇಕಿತ್ತು? ಕಾರಲ್ಲಿ ಓಡಾಡುವುದು ಪ್ರತಿಷ್ಠೆಯೇ? ಸಾಮಾಜಿಕ ಅನಿವಾರ್ಯತೆ ಅವನಿಗೆ ಎದುರಾಯಿತೇ? ರೈಲು, ಮೆಟ್ರೋದಲ್ಲಿ ಓಡಾಡಲು ಬೇಡ ಎಂದವರಾರು?" ಎಂದು ಕಿಡಿ ಕಾರಿದರು.

"ತೇಜಸ್ವಿ ಸೂರ್ಯ ರೈಲು ಯೋಜನೆ ಮಾಡಿ ಎಂದು ಹೇಳುತ್ತಾನೆ. ಆ ಯೋಜನೆ ಮಾಡಲು ಬೆಂಗಳೂರಿನಲ್ಲಿ ಜಾಗ ಎಲ್ಲಿದೆ? ಕೇಂದ್ರ ಸರಕಾರವೇ ಈ ಯೋಜನೆ ಮಾಡಲಿ. ಬಿಆರ್ ಟಿಎಸ್ ಯೋಜನೆ ಮಾಡಲು ಬೆಂಗಳೂರಿನಲ್ಲಿ ಎಲ್ಲಾದರೂ ಜಾಗ ಇದೆಯೇ? ಅವರಿಗೆ ತಲೆ ಇದೆಯೇ? ಇದರಿಂದ ದಿನಕ್ಕೆ ನೂರಾರು ಜನ ಸಾಯಬೇಕಾಗುತ್ತದೆ. ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಬಿಆರ್ ಟಿಎಸ್ ಯೋಜನೆಯಲ್ಲಿ ವಿಫಲರಾದರು" ಎಂದರು.

ಲಾಲ್ ಬಾಗ್ ಹಾಳು ಮಾಡಲು ಮೂರ್ಖನಲ್ಲ

"ನಾನು ಎಲ್ಲಾ ರೀತಿಯ ಅಧ್ಯಯನ ನಡೆಸಿದ್ದೇನೆ. ಲಾಲ್ ಬಾಗ್ ಹಾಳು ಮಾಡಲು ನಾನೇನು ಮೂರ್ಖನಲ್ಲ. ಇದರ ಇತಿಹಾಸವೂ ನನಗೆ ಗೊತ್ತಿದೆ. ಉದ್ಯಾನದಲ್ಲಿ ಎಷ್ಟು ಭಾಗ ಉಪಯೋಗವಾಗುತ್ತಿದೆ, ಉಪಯೋಗವಾಗುತ್ತಿಲ್ಲ ಎಂಬುದು ನನಗೆ ಗೊತ್ತಿದೆ" ಎಂದರು.

"ಯಾವುದೇ ಅಭಿವೃದ್ಧಿ ಕೆಲಸ ಕೈಗೆತ್ತಿಕೊಂಡರೂ ಬಿಜೆಪಿಯವರು ವಿರೋಧ ವ್ಯಕ್ತಪಡಿಸುತ್ತಾರೆ. ಜಾರ್ಜ್ ಅವರ ಸಮಯದಲ್ಲಿ ಸ್ಟೀಲ್ ಬ್ರಿಡ್ಜ್ ಗೆ ವಿರೋಧ ಮಾಡಿದರು. ಒಂದೂ ಪರಿಹಾರ ಹೇಳುವುದಿಲ್ಲ. ಸಹಿ ಸಂಗ್ರಹ ಅಭಿಯಾನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಿ. ಅಶೋಕ್ ಅವರಲ್ಲಿ ಮನವಿ ಮಾಡುತ್ತೇನೆ. ಅವರ ನೇತೃತ್ವದಲ್ಲಿಯೇ ಸಮಿತಿ ಮಾಡುತ್ತೇವೆ. ಯಾರನ್ನು ಬೇಕಾದರೂ ಅದಕ್ಕೆ ಸೇರಿಸಿಕೊಳ್ಳಲಿ. ಅವರು ಸೂಚಿಸಿದ ತಾಂತ್ರಿಕ ಪರಿಣಿತರನ್ನೇ ಸಮಿತಿಗೆ ಸೇರಿಸೋಣ" ಎಂದು ಹೇಳಿದರು.

ಶಾಸಕರು, ಸಚಿವರು ಅವರವರ ಕೆಲಸಕ್ಕೆ ದಿಲ್ಲಿಗೆ ಹೋಗುತ್ತಾರೆ

ಕಾಂಗ್ರೆಸ್ ನಾಯಕರು ದಿಲ್ಲಿಗೆ ಹೋಗುತ್ತಿರುವುದರ ಬಗ್ಗೆ ಕೇಳಿದಾಗ, "ನಾಯಕರುಗಳು ಅವರವರ ಕೆಲಸಗಳಿಗೆ ಹೋಗುತ್ತಿರುತ್ತಾರೆ. ನಾನು ನ.5 ಅಥವಾ 6ರಂದು ಬಿಹಾರಕ್ಕೆ ತೆರಳುತ್ತಿದ್ದೇನೆ. ಕೇಂದ್ರ ನಗರಾಭಿವೃದ್ಧಿ ಸಚಿವರು ಸಭೆ ಕರೆದಿದ್ದಾರೆ. ಇದರ ನಡುವೆ ಕಾವೇರಿ ನದಿ ನೀರಿನ ತೀರ್ಪಿದೆ. ಈ ಬಗ್ಗೆ ವಕೀಲರಿಂದ ವರದಿಯನ್ನು ತರಿಸಿಕೊಂಡಿದ್ದೇನೆ. ಪರಿಸ್ಥಿತಿ ಹೀಗಿರುವಾಗ ದಿಲ್ಲಿಗೆ ಹೋಗಬೇಕಾಗುತ್ತದೆ. ಅದಕ್ಕೆ ರಾಜಕೀಯ ಬಣ್ಣ ಕಟ್ಟಿದರೆ ಹೇಗೆ? ರಾಜಕೀಯ ಕಾರಣಕ್ಕೆ ಹೋಗಲಾಗುತ್ತದೆ ಎಂದು ತಿಳಿದುಕೊಳ್ಳುವುದು ಏತಕ್ಕೆ? ಶಾಸಕರು, ಸಚಿವರು ಅವರರವರ ಕೆಲಸಗಳಿಗೆ ದಿಲ್ಲಿಗೆ ಹೋಗಲಿ ಬಿಡಿ" ಎಂದರು.

"ಒಂದಷ್ಟು ಜನರಿಗೆ ಬಿಹಾರ, ರಿಝ್ವಾನ್, ಶ್ರೀನಿವಾಸ್ ಮಾನೆ ಸೇರಿದಂತೆ ಇತರಿಗೆ ಒಡಿಶಾ ರಾಜ್ಯಗಳ ಜವಾಬ್ದಾರಿ ನೀಡಿದ್ದಾರೆ. ಸಂಸದ ತುಕಾರಾಂ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಲು, ಸಂಘಟನೆ ವಿಚಾರವಾಗಿ ಕಳುಹಿಸಲಾಗಿದೆ. ಹಾಗೆಂದ ಮಾತ್ರಕ್ಕೆ ಎಲ್ಲದರಲ್ಲೂ ರಾಜಕೀಯ ಇರುತ್ತದೆಯೇ" ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X