Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ...

ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯ : ಕರ್ನಾಟಕಕ್ಕೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ3 Nov 2025 12:30 AM IST
share
ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯ : ಕರ್ನಾಟಕಕ್ಕೆ ಪ್ರಶಸ್ತಿ
ವಿಂಡರ್ಜಿ-2025ರಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಕ್ರೆಡಲ್‍ನಿಂದ ಕರ್ನಾಟಕದ ಪವನ ವಿದ್ಯುತ್ ಸಾಮರ್ಥ್ಯದ ಅನಾವರಣ

ಬೆಂಗಳೂರು : ಅತ್ಯಧಿಕ ಪವನ ವಿದ್ಯುತ್ ಉತ್ಪಾದನೆ ಮೂಲಕ 2024-25ನೇ ಸಾಲಿನಲ್ಲಿ ಪ್ರಶಸ್ತಿ ಪಡೆದಿದ್ದ ಕರ್ನಾಟಕ ರಾಜ್ಯವು ಇದೇ ಸಾಲಿನಲ್ಲಿ ‘ಅನುಷ್ಠಾನದ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯತ್ ಸಾಮರ್ಥ್ಯ'ಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನೂ ತನ್ನದಾಗಿಸಿಕೊಡಿದೆ.

ಈ ಸಾಧನೆಯು ಕರ್ನಾಟಕದ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಇರುವ ಬದ್ಧತೆ ಮತ್ತು ಇಂಧನ ಅಗತ್ಯಗಳನ್ನು ಪೂರೈಸಲು ಪವನ ವಿದ್ಯುತ್ ಬಳಸಿಕೊಳ್ಳುವಲ್ಲಿ ರಾಜ್ಯ ಕೈಗೊಂಡಿರುವ ಪೂರ್ವಭಾವಿ ಕ್ರಮಗಳಿಗೆ ಸಾಕ್ಷಿಯಾಗಿದೆ.

ವಿಂಡ್ ಟರ್ಬೈನ್ ತಯಾರಕರ ಸಂಘ(ಐಡಬ್ಲ್ಯುಟಿಎಂಎ) ಚೆನ್ನೈನ ಟ್ರೇಡ್ ಸೆಂಟರ್‍ನಲ್ಲಿ ಆಯೋಜಿಸಿದ್ದ ‘ವಿಂಡರ್ಜಿ ಇಂಡಿಯಾ 2025'ರ ಏಳನೆ ಆವೃತ್ತಿಯಲ್ಲಿ ಕೇಂದ್ರದ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿಯವರಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಟಿ.ಡಿ.ರಾಜೇಗೌಡ ಮತ್ತು ಕ್ರೆಡಲ್‍ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಪ್ರಶಸ್ತಿ ಸ್ವೀಕಾರ ಮಾಡಿದರು.

ಕ್ರೆಡಲ್ ಮಳಿಗೆಯನ್ನು ಉದ್ಘಾಟಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನವೀಕರಿಸಬಹುದಾದ ಇಂಧನ ವಲಯಕ್ಕೆ ಪ್ರಗತಿಪರ ನೀತಿ, ಉಪಕ್ರಮಗಳ ಮೂಲಕ ಕರ್ನಾಟಕ ರಾಜ್ಯವು ನೀಡಿರುವ ಕೊಡುಗೆಗಳನ್ನು ಶ್ಲಾಘಿಸಿದರು. ‘ಸರಕಾರ ಮತ್ತು ಉದ್ದಿಮೆಗಳು ಒಟ್ಟಾಗಿ ಸೇರಿ ಕೆಲಸ ಮಾಡಿದಾಗ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ನಾವು ಗಮನಾರ್ಹ ಸಾಧನೆ ಮಾಡಬಹುದು. ನಾವೀನ್ಯತೆಯನ್ನು ಅಳವಡಿಸಿಕೊಳ್ಳುವ ಮೂಲಕ ಸಾಮರ್ಥ್ಯವನ್ನು ಹೆಚ್ಚಿಸಿ ದೇಶಕ್ಕೆ ಸುಸ್ಥಿರ ಇಂಧನ ಭವಿಷ್ಯವನ್ನು ನಿರ್ಮಿಸುವಲ್ಲಿ ಇಂತಹ ಸಹಯೋಗದ ಪಾತ್ರ ಮಹತ್ವದ್ದು’ ಎಂದು ವಿವರಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕ್ರೆಡಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ, ‘ಇದು ನಮ್ಮ ಕರ್ನಾಟಕ ರಾಜ್ಯಕ್ಕೆ ಹೆಮ್ಮೆಯ ಸಂಗತಿ. ಶುದ್ಧ ಇಂಧನ ಉತ್ಪಾದನೆ ಮತ್ತು ಬಳಕೆಗೆ ಆದ್ಯತೆ ನೀಡಿ, ಈ ನಿಟ್ಟಿನಲ್ಲಿ ಕಾರ್ಯೋ ನ್ಮುಖರಾಗಿರುವ ಎಲ್ಲ ಪಾಲುದಾರರ ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದು ಹೇಳಿದರು.

ರಾಜ್ಯದಲ್ಲಿನ ಪವನ ವಿದ್ಯುತ್ ಉತ್ಪಾದನೆಯ ಸಾಮರ್ಥ್ಯ, ಸದ್ಯದ ಯೋಜನೆಗಳು ಮತ್ತು ಈ ವಲಯದಲ್ಲಿನ ಸಹಯೋಗದ ಅವಕಾಶಗಳ ಬಗ್ಗೆ ಮಾಹಿತಿ ನೀಡಲು ಸಮಾವೇಶದಲ್ಲಿ ಕ್ರೆಡಲ್ ಮಳಿಗೆ ತೆರೆದಿತ್ತು. ವಲಯದ ಉದ್ಯಮ ಮುಖಂಡರು, ನೀತಿ ನಿರೂಪಕರು, ಅಭಿವರ್ಧಕರು ಮಳಿಗೆಗೆ ಭೇಟಿ ನೀಡಿ, ಕ್ರೆಡಲ್ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಜಾರ್ಜ್ ಹರ್ಷ: ಪವನ ವಿದ್ಯುತ್ ವಲಯದಲ್ಲಿ ಕರ್ನಾಟಕದ ಸಾಧನೆಗೆ ಸಂದಿರುವ ಪ್ರಶಸ್ತಿ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ‘ಅನುಷ್ಠಾನ ಹಂತದಲ್ಲಿರುವ ಪವನ ವಿದ್ಯುತ್ ಸಾಮರ್ಥ್ಯ ದಲ್ಲಿ ಕರ್ನಾಟಕವು ದೇಶದಲ್ಲೇ ಅಗ್ರಮಾನ್ಯ ಸ್ಥಾನದಲ್ಲಿರುವ ಅಂಶವನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಇಡೀ ರಾಜ್ಯಕ್ಕೆ ಹೆಮ್ಮೆಯ ವಿಷಯ. ಈ ಪ್ರಶಸ್ತಿಯು ಇಂಧನ ಉತ್ಪಾದನೆ ಮತ್ತು ಸುಸ್ಥಿರ ಅಭಿವೃದ್ಧಿಯ ಬಗ್ಗೆ ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ಇರುವ ಅಚಲ ಬದ್ಧತೆಗೆ ಸಾಕ್ಷಿ ಎಂದು ಬಣ್ಣಿಸಿದರು.

‘ಹಸಿರು ಇಂಧನದತ್ತ ಪರಿವರ್ತನೆಯ ನಮ್ಮ ಪ್ರಯತ್ನಗಳಿಗೆ ವೇಗ ತುಂಬಿ, ನವೀಕರಿಸಬಹುದಾದ ವಲಯದಲ್ಲಿ ಕರ್ನಾಟಕದ ಸ್ಥಾನವನ್ನು ಬಲಪಡಿಸುವತ್ತ ಗಮನಹರಿಸಿದ್ದೇವೆ. ಇಂಧನ ವಲಯದಲ್ಲಿನ ನಮ್ಮ ನವೀನ ನೀತಿಗಳು ರಾಜ್ಯವನ್ನು ನವೀಕರಿಸಬಹುದಾದ ಇಂಧನದ ಶಕ್ತಿ ಕೇಂದ್ರವನ್ನಾಗಿ ರೂಪಿಸುತ್ತಿವೆ’

-ಗೌರವ್ ಗುಪ್ತ, ಅಪರ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X