Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಹಾರದ ಅಭಿವೃದ್ಧಿಗಾಗಿ ಮಹಾಘಟಬಂಧನ್ ಗೆ...

ಬಿಹಾರದ ಅಭಿವೃದ್ಧಿಗಾಗಿ ಮಹಾಘಟಬಂಧನ್ ಗೆ ಮತ ನೀಡಿ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ3 Nov 2025 2:06 PM IST
share
ಬಿಹಾರದ ಅಭಿವೃದ್ಧಿಗಾಗಿ ಮಹಾಘಟಬಂಧನ್ ಗೆ ಮತ ನೀಡಿ: ಡಿ.ಕೆ.ಶಿವಕುಮಾರ್

ಬೆಂಗಳೂರು : ಬಿಹಾರದ ಅಭಿವೃದ್ಧಿಗಾಗಿ ಮಹಾಘಟಬಂಧನ್ ಗೆ ಮತ ನೀಡಿ ಹಾಗೂ ನಿಮ್ಮ ಸಂಬಂಧಿಕರಿಗೂ ನಮಗೆ ಮತ ನೀಡುವಂತೆ ತಿಳಿಸಿ. ನಿಮ್ಮ ರಾಜ್ಯದ ಅಭಿವೃದ್ಧಿಗಾಗಿ ಮತ ಚಲಾವಣೆ ಮಾಡಬೇಕು. ಮತವನ್ನು ವ್ಯರ್ಥ ಮಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

ರವಿವಾರ ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್ ನಲ್ಲಿ ಬಿಹಾರ ಮೂಲದ ಬೆಂಗಳೂರು ನಿವಾಸಿಗಳ ಸಂಘದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ನನಗೆ ದೊಡ್ಡ ಸ್ಥಾನ ಬೇಕು ಎಂದು ನೀವೆಲ್ಲರೂ ಹೇಳಿದ್ದೀರಿ. ನನಗೆ ಅದು ಮುಖ್ಯವಲ್ಲ. ಬಿಹಾರದಲ್ಲಿ ಮಹಾಘಟ ಬಂಧನ ಅಧಿಕಾರಕ್ಕೆ ತಂದರೆ ನನಗೆ ಎಲ್ಲ ಸ್ಥಾನವನ್ನು ನೀವು ಕೊಟ್ಟಂತೆ. ನಿಮ್ಮ ಒಂದೊಂದು ಮತವೂ ಮಹಾಘಟಬಂದನ್ ಅಧಿಕಾರಕ್ಕೆ ಬರಲು ಮುಖ್ಯ ಎಂದರು.

ಈ ಮೊದಲಿನಂತೆ ನಿತೀಶ್ ಕುಮಾರ್ ಕೈಯಲ್ಲಿ ಬಿಹಾರವಿಲ್ಲ. ಅವರು ರಾಜಕೀಯದ ಕೊನೆಗಾಲದಲ್ಲಿದ್ದಾರೆ. ಬಿಹಾರದ‌ ಅಭಿವೃದ್ಧಿಗೆ ಲಾಲುಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ರಾಹುಲ್ ಗಾಂಧಿಯವರು ಘೋಷಣೆ ಮಾಡಿದ್ದಾರೆ ಎಂದು ಅವರು ಹೇಳಿದರು.

"ರಾಹುಲ್ ಗಾಂಧಿಯವರನ್ನು ಈ ದೇಶದ ಪ್ರಧಾನಿಯಾಗಿ ಮಾಡಬೇಕು. ನೆಹರು ಕುಟುಂಬ ಈ ದೇಶಕ್ಕೆ ತನ್ನದೇ ಆದ ಕೊಡುಗೆ ‌ನೀಡಿದೆ. ಈ ಕಾರಣಕ್ಕೆ ಅವರಿಗೆ ನೀವು ಶಕ್ತಿ ನೀಡಬೇಕು. ತೇಜಸ್ವಿ ಯಾದವ್ ಅವರನ್ನ ಬೆಂಬಲಿಸಬೇಕು ಎಂದು ಶಿವಕುಮಾರ್ ಮನವಿ ಮಾಡಿದರು.

"ಬಿಹಾರದಲ್ಲಿ ಲಕ್ಷಾಂತರ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಕಿತ್ತು ಹಾಕಲಾಗಿದೆ. ನಿಮ್ಮ ಊರಿನಲ್ಲಿರುವವರ ಬದುಕನ್ನು ಉಳಿಸಲು ನಾವು ಪ್ರಯತ್ನ ಮಾಡುತ್ತಿದ್ದೇವೆ. ನೀವುಗಳು ಇಲ್ಲಿ ಬದುಕು ಕಟ್ಟಿಕೊಂಡಿರಬಹುದು. ಆದರೆ ನಿಮ್ಮ ಮತಗಳು ಅಲ್ಲಿರಬಹುದು. ಅಥವಾ ನಿಮ್ಮ ಸಂಬಂಧಿಕರು ಅಲ್ಲಿರಬಹುದು. ಅವರಿಗೆ ಮತದಾನ ಮಾಡಲು ನೀವು ತಿಳಿಸಿ. ನೀವುಗಳು ಸಹ ಮತದಾನ ಮಾಡಲು ಊರಿಗೆ ತೆರಳಿ. ನಿಮಗೆಲ್ಲರಿಗು ಮೂರು ದಿನ ರಜೆ ನೀಡುವಂತೆ ನೀವುಗಳು ಕೆಲಸ ನಿರ್ವಹಿಸುವ ಸಂಸ್ಥೆಗಳು, ಗುತ್ತಿಗೆದಾರರಿಗೆ ಹಾಗೂ ಕ್ರೆಡಾಯ್ ಸಂಸ್ಥೆಗೆ ಸೂಚಿಸುತ್ತೇನೆ" ಎಂದರು.

"ಬಿಹಾರದವರು ಇಲ್ಲದಿದ್ದರೆ ಬೆಂಗಳೂರಿನಲ್ಲಿ ಅತ್ಯುತ್ತಮ ‌ಕಟ್ಟಡಗಳನ್ನು ನಿರ್ಮಾಣ ಮಾಡಲು ಸಾಧ್ಯವಿರುತ್ತಿರಲಿಲ್ಲ. ನೀವು ಶ್ರಮಜೀವಿಗಳು. ಮರಗೆಲಸ, ಎಲೆಕ್ಟ್ರಿಕಲ್ ಕೆಲಸಗಳು, ವಿನ್ಯಾಸದ‌‌ ಕೆಲಸಗಳು ಸೇರಿದಂತೆ ಯಾವುದೇ ಕೆಲಸ ನೀಡಿದರು ಅತ್ಯಂತ ಶ್ರದ್ಧೆಯಿಂದ ನಿರ್ವಹಣೆ ಮಾಡುವವರು. ‌ನಿಮ್ಮ ಸಂಘದ ಸಮುದಾಯ ಭವನಕ್ಕೆ ನಿವೇಶನ ನೀಡಲಾಗುವುದು" ಎಂದು ಅವರು ತಿಳಿಸಿದರು.

"ಇನ್ನೊಂದು ತಿಂಗಳಲ್ಲಿ ಇದರ ಬಗ್ಗೆ ಬೇರೆ ರಾಜ್ಯದ ಸಂಘಟನೆಗಳಿಗೆ ನಿವೇಶನಗಳನ್ನು ಮೀಸಲಿಡುವ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು. ನೀವು ನಿವೇಶನಕ್ಕೆ ಅರ್ಜಿ ಸಲ್ಲಿಸಬೇಕು. ಸಂಘದ ಪದಾಧಿಕಾರಿಗಳು ಮುಂದಿನ ವಾರದಲ್ಲಿ ಬಂದು ಭೇಟಿಮಾಡಿ. ಅಸ್ಸಾಂಗೆ ಗಾಯಕ ಜುಬಿನ್ ಅವರ ಸ್ಮರಣೆ ಕಾರ್ಯಕ್ರಮಕ್ಕೆ ಹೋದ ಸಂದರ್ಭದಲ್ಲಿ ನಮಗೂ ಚಟುವಟಿಕೆಗಳನ್ನು ನಡೆಸಲು ನಿವೇಶನ ನೀಡಿ ಎಂದು ಮನವಿ ಮಾಡಿದ್ದರು ಎಲ್ಲರಿಗೂ ಸಿಎ ನಿವೇಶನ ನೀಡಲು ಆಲೋಚಿಸಲಾಗುವುದು" ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X