ಬಿ.ಟಿ.ಲಲಿತಾ ನಾಯಕ್, ಶಿವರುದ್ರಯ್ಯರಿಗೆ ‘ಬರಗೂರು ಪ್ರಶಸ್ತಿ’

ಬಿ.ಟಿ.ಲಲಿತಾ ನಾಯಕ್
ಬೆಂಗಳೂರುವ : ನಾಡೋಜ ಡಾ.ಬರಗೂರು ಪ್ರತಿಷ್ಠಾನದಿಂದ ನೀಡಲಾಗುವ ‘ಬರಗೂರು ಪ್ರಶಸ್ತಿ’ಗೆ ಹಿರಿಯ ಸಾಹಿತಿ ಹಾಗೂ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹಾಗೂ ಸಿನೆಮಾ ನಿರ್ದೇಶಕ ಶಿವರುದ್ರಯ್ಯ ಅವರು ಆಯ್ಕೆಯಾಗಿದ್ದಾರೆ.
ಪ್ರತಿವರ್ಷ ಸಾಹಿತ್ಯ ಮತ್ತು ಸಿನೆಮಾ ಕ್ಷೇತ್ರದ ತಲಾ ಒಬ್ಬರಿಗೆ ಜೀವಮಾನ ಸಾಧನೆಗಾಗಿ ಬರಗೂರು ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಪ್ರಶಸ್ತಿಯು ಗೌರವಧನ, ಪ್ರಶಸ್ತಿ ಫಲಕ ಮತ್ತು ಪ್ರಶಸ್ತಿ ಪತ್ರಗಳನ್ನು ಹೊಂದಿದೆ.
ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.14ರಂದು ಸಂಜೆ 4:30ಕ್ಕೆ ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಪ್ರಶಸ್ತಿಯನ್ನು ನಿವೃತ್ತ ಐಎಎಸ್ ಅಧಿಕಾರಿ ಐ.ಎಂ. ವಿಠಲಮೂರ್ತಿ ಪ್ರದಾನ ಮಾಡಲಿದ್ದು, ವಿಧಾನ ಪರಿಷತ್ನ ಮುಖ್ಯ ಸಚೇತಕ ಸಲೀಂ ಅಹ್ಮದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





