Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸರಕಾರಕ್ಕೆ ವರದಿ ಸಲ್ಲಿಸಿದ ‘ಸಂಪನ್ಮೂಲ...

ಸರಕಾರಕ್ಕೆ ವರದಿ ಸಲ್ಲಿಸಿದ ‘ಸಂಪನ್ಮೂಲ ಕ್ರೋಢೀಕರಣ ಸಮಿತಿ’

ವಾರ್ತಾಭಾರತಿವಾರ್ತಾಭಾರತಿ6 Nov 2025 9:56 PM IST
share
ಸರಕಾರಕ್ಕೆ ವರದಿ ಸಲ್ಲಿಸಿದ ‘ಸಂಪನ್ಮೂಲ ಕ್ರೋಢೀಕರಣ ಸಮಿತಿ’

ಬೆಂಗಳೂರು : ತೆರಿಗೆ ವ್ಯಾಪ್ತಿಯನ್ನು ವಿಸ್ತರಿಸಬೇಕು ಹಾಗೂ ನಗರ ಭೂ ಸ್ವತ್ತುಗಳನ್ನು ನಗದೀಕರಿಸುವ ಮೂಲಕ ಆದಾಯ ಗಳಿಕೆ ಸಾಮರ್ಥ್ಯವನ್ನು ಹೆಚ್ಚಿಸಬಹುದು ಎಂದು ನಿವೃತ್ತ ಐಎಎಸ್ ಅಧಿಕಾರಿ ಕೆ.ಪಿ.ಕೃಷ್ಣನ್ ನೇತೃತ್ವದ 'ಸಂಪನ್ಮೂಲ ಕ್ರೋಢೀಕರಣ ಸಮಿತಿ'ಯು ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆ.ಪಿ.ಕೃಷ್ಣನ್ ನೇತೃತ್ವದ ಸಮಿತಿಯ ನಿಯೋಗವು ಸಮಗ್ರ ವಿಶ್ಲೇಷಣೆ ಮತ್ತು ಶಿಫಾರಸುಗಳ ವರದಿಯನ್ನು ಸಲ್ಲಿಕೆ ಮಾಡಿತು. ಆದಾಯ ಹೆಚ್ಚಿಸುವಲ್ಲಿನ ಪ್ರಮುಖ ಸವಾಲುಗಳನ್ನು ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿದ್ದು, ರಾಜ್ಯದ ತೆರಿಗೆಯೇತರ ಆದಾಯ ಕಡಿಮೆ ಇದೆ. ಬಳಕೆದಾರರ ಶುಲ್ಕಗಳು ಹಾಗೂ ಸರಕಾರಿ ಸ್ವತ್ತುಗಳಿಂದ, ಗುತ್ತಿಗೆ ಮತ್ತು ನಗದೀಕರಣದಿಂದ ಹೆಚ್ಚಿನ ರಾಜಸ್ವ ಸೃಜಿಸಲು ಅವಕಾಶಗಳಿವೆ. ಆಸ್ತಿ ದತ್ತಾಂಶಗಳ ಉತ್ತಮ ನಿರ್ವಹಣೆ ಮತ್ತು ಸರಕಾರಿ ಆಸ್ತಿಗಳ ವ್ಯವಸ್ಥಿತ ಸಮೀಕ್ಷೆ ಮಾಡಬೇಕಾದ ಅಗತ್ಯವಿದೆ ಎಂದು ತಿಳಿಸಿದೆ.

ಮಾರ್ಗಸೂಚಿ ದರಗಳು ಮತ್ತು ಆಸ್ತಿ ತೆರಿಗೆಗಳ ಪರಿಷ್ಕರಣೆಯಿಂದಾಗಿ ಸ್ಥಳೀಯ ಸಂಸ್ಥೆಗಳು ರಾಜಸ್ವ ಸೃಜಿಸಲು ಸಾಕಷ್ಟು ಅವಕಾಶವಿದೆ. ಮೂಲಸೌಕರ್ಯ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಬೆಳವಣಿಗೆಯನ್ನು ಉತ್ತೇಜಿಸಲು ಅಗತ್ಯವಾದ ಅನುದಾನ ಮೀಸಲಿಡಬೇಕು. ಜತೆಗೆ ವೆಚ್ಚವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಅಗತ್ಯದ ಬಗ್ಗೆಯೂ ತಿಳಿಸಿದೆ.

ರಾಜ್ಯದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯದ ರಾಜಸ್ವ ಸಂಗ್ರಹಣೆಯಲ್ಲಿ ವ್ಯವಸ್ಥಿತ ಮತ್ತು ಕ್ರಮಬದ್ಧ ಸುಧಾರಣೆಗಳು ಅತೀ ಅಗತ್ಯ ಎಂದೂ ಸಮಿತಿ ಹೇಳಿದೆ.

ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕವು ಅತ್ಯುತ್ತಮ ಆರ್ಥಿಕ ಬೆಳವಣಿಗೆ ಹೊಂದಿದೆ. ರಾಜ್ಯದ ಒಟ್ಟು ರಾಜಸ್ವ ಸ್ವೀಕೃತಿಗಳಲ್ಲಿ ಸ್ವಂತ ತೆರಿಗೆ ರಾಜಸ್ವದ ಪಾಲು ಶೇ.60ದಿಂದ ಶೇ.70 ರಷ್ಟಿದೆ. ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ ಹಾಗೂ ಮೋಟಾರು ವಾಹನ ತೆರಿಗೆಗಳು ರಾಜ್ಯದ ಸ್ವಂತ ತೆರಿಗೆ ರಾಜಸ್ವದ ಪ್ರಮುಖ ಸ್ವೀಕೃತಿಗಳಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ 2024ರ ಆಗಸ್ಟ್‍ನಲ್ಲಿ ಈ ಸಮಿತಿಯನ್ನು ರಾಜ್ಯ ಸರಕಾರ ರಚಿಸಿತ್ತು.

ಪ್ರಮುಖ ಶಿಫಾರಸುಗಳೇನು?:

► ಸಾರ್ವಜನಿಕ ಸೇವೆಗಳಲ್ಲಿ ಬಳಕೆದಾರ ಶುಲ್ಕಗಳನ್ನು ತರ್ಕಬದ್ದಗೊಳಿಸಬೇಕು. ಪ್ರಮಾಣಾತ್ಮಕ ಬಿಲ್ಲಿಂಗ್ ವ್ಯವಸ್ಥೆಯನ್ನು ಹಂತ ಹಂತವಾಗಿ ತರಬೇಕು.

► ಹಣದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕಗಳನ್ನು ಸ್ವಯಂಚಾಲಿತವಾಗಿ ಪರಿಷ್ಕರಿಸುವ ವ್ಯವಸ್ಥೆ ರೂಪಿಸಬೇಕು

► ವೈಜ್ಞಾನಿಕ ಆಸ್ತಿ ಮೌಲ್ಯಮಾಪನ, ಸಾರ್ವಜನಿಕ-ಖಾಸಗಿ ಪಾಲುದಾರಿಕೆಗಳ ಅಡಿಯಲ್ಲಿ ಗುತ್ತಿಗೆಯನ್ನು ವಿಸ್ತರಿಸಬೇಕು

► ಸಿಬ್ಬಂದಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮೂಲಕ ಇಲಾಖಾ ಸಾಮಥ್ರ್ಯವನ್ನು ಹೆಚ್ಚಿಸಬೇಕು. ಆಸ್ತಿ ಸಮೀಕ್ಷೆಗಳನ್ನು ನಿಯತಕಾಲಿಕವಾಗಿ ಮಾಡಬೇಕು.

► ತೆರಿಗೆಯೇತರ ಆದಾಯ ಮತ್ತು ಆಸ್ತಿ ನಗದೀಕರಣದ ಮೇಲ್ವಿಚಾರಣೆ ಮಾಡಲು ಆರ್ಥಿಕ ಇಲಾಖೆಯಲ್ಲಿ ಆರ್ಥಿಕ ನೀತಿ ವಿಭಾಗ ರಚಿಸಬೇಕು.

► ತೆರಿಗೆ ಸುಧಾರಣೆ ಮೂಲಕ ಕೆಲವು ಪ್ರಮುಖ ರಾಜಸ್ವ ಮೂಲಗಳ ಮೇಲಿನ ಅತಿಯಾದ ಅವಲಂಬನೆಯನ್ನು ಕಡಿಮೆ ಮಾಡಬೇಕು. ತೆರಿಗೆ ವ್ಯಾಪ್ತಿಯನ್ನು ವಿಸ್ತರಿಸಬೇಕು.

► ಅಬಕಾರಿ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆ ಹೆಚ್ಚಿಸಲು ಹರಾಜು ಆಧಾರಿತ ಡಿಜಿಟಲ್ ಸನ್ನದು ನೀಡಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X