ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚೆ; ತುರ್ತು ಭೇಟಿಗಾಗಿ ಪ್ರಧಾನಿಗೆ ಸಿಎಂ ಪತ್ರ

ಬೆಂಗಳೂರು : ರಾಜ್ಯದಲ್ಲಿ ಕಬ್ಬು ಬೆಳೆಗಾರರ ವಿಚಾರದಲ್ಲಿ ಉದ್ಭವಿಸಿರುವ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಆದ್ದರಿಂದ ತುರ್ತಾಗಿ ತಮ್ಮ ಭೇಟಿಗೆ ಅವಕಾಶ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಕೇಂದ್ರ ಸರಕಾರವು ಕೂಡಲೇ ಮಧ್ಯಪ್ರವೇಶ ಮಾಡಿ ಕಬ್ಬಿಗೆ ಎಫ್.ಆರ್.ಪಿ. ದರ ಪರಿಷ್ಕರಿಸುವುದು, ಸಕ್ಕರೆ ರಫ್ತು ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಕೇಂದ್ರ ಸರಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಲು ತುರ್ತಾಗಿ ಭೇಟಿಗೆ ಅವಕಾಶ ನೀಡಬೇಕೆಂದು ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Next Story





