Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಎಂಆರ್‌ಸಿಎಲ್ ಮೇಲೆ ರಾಜ್ಯ ಸರಕಾರ...

ಬಿಎಂಆರ್‌ಸಿಎಲ್ ಮೇಲೆ ರಾಜ್ಯ ಸರಕಾರ ಸೀಮಿತ ಅಧಿಕಾರ ವ್ಯಾಪ್ತಿ ಹೊಂದಿರಲಿದೆ; ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ7 Nov 2025 12:15 AM IST
share
ಬಿಎಂಆರ್‌ಸಿಎಲ್ ಮೇಲೆ ರಾಜ್ಯ ಸರಕಾರ ಸೀಮಿತ ಅಧಿಕಾರ ವ್ಯಾಪ್ತಿ ಹೊಂದಿರಲಿದೆ; ಹೈಕೋರ್ಟ್ ಆದೇಶ

ಬೆಂಗಳೂರು : ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ರೈಲ್ವೆ ಕಂಪನಿಯಾಗಿದ್ದು, ಅದು ಕೇಂದ್ರ ಸರ್ಕಾರದ ಒಪ್ಪಿಗೆ ಮೇರೆಗೆ ಕಾರ್ಯನಿರ್ವಹಿಸುತ್ತಿದೆ. ಅದಕ್ಕೆ ಸಂಬಂಧಿಸಿದಂತೆ ವ್ಯಾಜ್ಯಗಳು ಏರ್ಪಟ್ಟಾಗ ಕೈಗಾರಿಕಾ ವಿವಾದಗಳ ಕಾಯ್ದೆ ಅಡಿಯಲ್ಲಿ ಅವುಗಳನ್ನು ಪರಿಹರಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆಯೇ ಹೊರತು ರಾಜ್ಯ ಸರ್ಕಾರಕ್ಕಲ್ಲ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಇದೇ ವೇಳೆ, ರಾಜ್ಯ ಸರ್ಕಾರ 2019ರಲ್ಲಿ ಬಿಎಂಆರ್‌ಸಿಎಲ್‌ ಅನ್ನು ಸಾರ್ವಜನಿಕ ಉಪಯುಕ್ತ ಸೇವೆ ಎಂದು ಹೊರಡಿಸಿದ್ದ ಅಧಿಸೂಚನೆ ಹಾಗೂ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿಯಲ್ಲಿ ಬಿಎಂಆರ್‌ಸಿಎಲ್‌ ಸೇವೆಗಳನ್ನು 'ಅತ್ಯವಶ್ಯಕ ಸೇವೆಗಳು' ಎಂದು 2017ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಗೊಳಿಸಿರುವ ಹೈಕೋರ್ಟ್, ಬಿಎಂಆರ್‌ಸಿಎಲ್‌ ಮೇಲೆ ಕೇಂದ್ರ ಸರ್ಕಾರಕ್ಕೆ ವಿಶಾಲ ನಿಯಂತ್ರಣವಿರಲಿದ್ದು, ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿ ಸೀಮಿತವಾಗಿದೆ ಎಂದು ಹೇಳಿದೆ.

ಮೆಟ್ರೊ ರೈಲು ನೌಕರರ ಮುಷ್ಕರ ನಿಯಂತ್ರಿಸಲು ರಾಜ್ಯ ಸರ್ಕಾರ ಎಸ್ಮಾ ಕಾಯ್ದೆಯಡಿ ಹೊರಡಿಸಿದ್ದ ಅಧಿಸೂಚನೆ ಹಾಗೂ ಮೆಟ್ರೊ ರೈಲು ಸಾರ್ವಜನಿಕ ಉಪಯುಕ್ತ ಸೇವೆ ಎಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಬಿಎಂಆರ್‌ಸಿಎಲ್‌, ಬಿಎಂಆರ್‌ಸಿಎಲ್‌ ನೌಕರರ ಸಂಘ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ಹೈಕೋರ್ಟ್ ಆದೇಶವೇನು?

ಬಿಎಂಆರ್‌ಸಿಎಲ್‌ನಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ತಲಾ ಶೇ. 50 ಷೇರುಗಳನ್ನು ಹೊಂದಿದ್ದು, ಕೆಲ ಮಹತ್ವದ ಪಾತ್ರಗಳನ್ನು ನಿರ್ವಹಿಸುತ್ತದೆ. ಆದರೆ, ಪ್ರಮುಖ ಆಡಳಿತಾತ್ಮಕ ಕ್ರಮಗಳಲ್ಲಿ ಕೇಂದ್ರ ಸರ್ಕಾರದ ನಿರ್ಧಾರವೇ ಅಂತಿಮವಾಗಿರಲಿದೆ. ರಾಜ್ಯ ಸರ್ಕಾರ ಯಾವುದಾದರೂ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳಬೇಕಾದರೆ ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ. ಆದ್ದರಿಂದ, ಮೆಟ್ರೊ ಸೇವೆಯನ್ನು ಎಸ್ಮಾ ಕಾಯ್ದೆಯಡಿ ಅತ್ಯವಶ್ಯಕ ಸೇವೆ ಎಂದು ಘೋಷಣೆ ಮಾಡುವುದಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಮೆಟ್ರೊ ರೈಲ್ವೆ ಸೇವೆ ಕೇಂದ್ರ ಸರ್ಕಾರ ರಚನೆ ಮಾಡಿರುವ ಕಾಯ್ದೆಗಳಿಂದ ನಿಯಂತ್ರಣಕ್ಕೊಳಪಡಲಿದೆ. ಮೆಟ್ರೊ ರೈಲ್ವೆಯ ಹಲವು ಕಾರ್ಯಾಚರಣೆಗಳ ಉಸ್ತುವಾರಿ ಹೊಂದಿರುವ ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಅಗತ್ಯ ಅನುಮತಿ ಪಡೆದ ನಂತರವೇ ರೈಲ್ವೆ ಸೇವೆ ಆರಂಭಿಸಲು ಮತ್ತು ನಿರ್ವಹಣೆ ಮಾಡಲು ಅಧಿಕಾರವಿರಲಿದೆ. ಬಿಎಂಆರ್‌ಸಿಎಲ್‌ ಸಂಬಂಧ ಕೇಂದ್ರ ಮತ್ತು ರಾಜ್ಯಗಳ ನಡುವೆ ಮಾಡಿಕೊಂಡಿರುವ ಒಪ್ಪಂದದಡಿ ಮೆಟ್ರೊ ರೈಲು ಮಾರ್ಗಗಳ ನಿರ್ಮಾಣ ಮತ್ತು ನಿರ್ವಹಣೆಗೆ ಅವಕಾಶವಿರಲಿದೆ. ಭಾರತೀಯ ರೈಲ್ವೆ ಕಾಯ್ದೆ ಮತ್ತು ಕೈಗಾರಿಕಾ ವಿವಾದ ಕಾಯ್ದೆಯಡಿ ಬಿಎಂಆರ್‌ಸಿಎಲ್‌ ರೈಲ್ವೆ ಕಂಪನಿ ಸ್ಥಾನಮಾನ ಹೊಂದಿದೆ. ಈ ಸಂಸ್ಥೆಯ ಮೇಲೆ ಕೇಂದ್ರ ಸರ್ಕಾರ ವ್ಯಾಪಕ ಅಧಿಕಾರ ಹೊಂದಿರಲಿದ್ದು, ಕೇಂದ್ರದ ನಿಯಂತ್ರಣದಲ್ಲಿಯೇ ಬಿಎಂಆರ್‌ಸಿ‌ಎಲ್ ಇರಲಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X