Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಡದಿ ತ್ಯಾಜ್ಯದಿಂದ ವಿದ್ಯುತ್...

ಬಿಡದಿ ತ್ಯಾಜ್ಯದಿಂದ ವಿದ್ಯುತ್ ಸ್ಥಾವರದಿಂದ ಪರಿಸರಕ್ಕೆ ಹಾನಿ ಇಲ್ಲ: ಕೆಪಿಸಿಎಲ್

ವಾರ್ತಾಭಾರತಿವಾರ್ತಾಭಾರತಿ7 Nov 2025 10:56 PM IST
share
ಬಿಡದಿ ತ್ಯಾಜ್ಯದಿಂದ ವಿದ್ಯುತ್ ಸ್ಥಾವರದಿಂದ ಪರಿಸರಕ್ಕೆ ಹಾನಿ ಇಲ್ಲ: ಕೆಪಿಸಿಎಲ್

ಬೆಂಗಳೂರು : ಬಿಡದಿಯಲ್ಲಿ ಸ್ಥಾಪಿಸಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕವು ಮಾಲಿನ್ಯ ನಿಯಂತ್ರಣ ಮಂಡಳಿಯ ಎಲ್ಲ ನಿಯಮಗಳನ್ನು ಪಾಲಿಸುತ್ತಿದ್ದು, ಘಟಕದಿಂದ ಪರಿಸರಕ್ಕೆ ಯಾವುದೇ ಹಾನಿ ಇಲ್ಲ ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಸ್ಪಷ್ಟಪಡಿಸಿದೆ.

ಶುಕ್ರವಾರ ಈ ಸಂಬಂಧ ಪ್ರಕಟಣೆ ನೀಡಿರುವ ಕೆಪಿಸಿಎಲ್, ‘ಪರಿಸರ ಮಾಲಿನ್ಯಕಾರಕಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ಸ್ಥಾವರ ವಿಫಲವಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣಕ್ಕೆ ಸಲ್ಲಿಸಿದೆ ಎನ್ನಲಾದ ವರದಿಗೆ ಸಂಬಂಧಿಸಿದಂತೆ ‘ದಿ ಫ್ರೈಡೇಸ್‍ಫಾರ್ ಫ್ಯೂಚರ್-ಕರ್ನಾಟಕ' ಬಿಡುಗಡೆ ಮಾಡಿರುವ ಹೇಳಿಕೆಗೆ ಆಕ್ಷೇಪಿಸಿದೆ.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಬಿಡದಿಯ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಸ್ಥಾವರದ ಕಾರ್ಯಾರಂಭಕ್ಕೆ 2024ರ ಜುಲೈ 20ರಂದು ಅನುಮತಿ ನೀಡಿದ್ದು, ಅದಾದ ಬಳಿಕವೇ ಘಟಕದ ಕಾರ್ಯಾಚರಣೆ ಆರಂಭಿಸಲಾಗಿದೆ. ಘನತ್ಯಾಜ್ಯ ನಿರ್ವಹಣಾ ನಿಯಮಗಳು-2016ರ ಅಡಿಯಲ್ಲಿ ಘಟಕಕ್ಕೆ ಅನುಮತಿ ಪಡೆಯುವ ಬಗ್ಗೆ ಎಲ್ಲ ಅಗತ್ಯ ದಾಖಲೆಗಳೊಂದಿಗೆ ಮಾಲಿನ್ಯ ನಿಯಂತ್ರಣ ಮಂಡಳಿಗೆ 2025ರ ಅಕ್ಟೋಬರ್ 13ರಂದು ಪ್ರಸ್ತಾವ ಸಲ್ಲಿಸಲಾಗಿದೆ ಎಂದು ತಿಳಿಸಲಾಗಿದೆ.

ಸ್ಥಾವರವು 2025ರ ಆಗಸ್ಟ್ 25ರಂದು ರಾಜ್ಯ ಮತ್ತು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಸರ್ವರ್‍ಗಳೊಂದಿಗೆ ಸಂಪರ್ಕ ಸಾಧಿಸಿದೆ. ಪ್ರಸ್ತುತ ಸ್ಥಾವರದ ಎಲ್ಲ ಮಾಹಿತಿಗಳು ಆನ್‍ಲೈನ್ ಮೂಲಕ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಲಭ್ಯವಿದೆ. ಪ್ರತಿ ಕ್ಷಣದ ಮಾಹಿತಿಯೂ ಮಂಡಳಿಗೆ ಸಿಗುತ್ತಿದೆ ಎಂದು ಕೆಸಿಪಿಎಲ್ ಸ್ಪಷ್ಟಪಡಿಸಿದೆ.

ಸ್ಥಾವರದಲ್ಲಿ ಉತ್ಪತ್ತಿಯಾಗುವ ಕಲ್ಮಶಯುಕ್ತ ನೀರು ಪಕ್ಕದಲ್ಲೇ ಸಂಸ್ಕರಿಸಿ ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ಪರೀಕ್ಷಿಸಿ ಶುದ್ಧವಾಗಿದೆ ಎಂದು ಖಚಿತವಾದ ಬಳಿಕ ಸಂಸ್ಕರಿಸಿದ ನೀರನ್ನು ಸ್ಥಾವರದಲ್ಲಿ ಮತ್ತೆ ಬಳಸಿಕೊಳ್ಳಲಾಗುತ್ತಿದೆಯೇ ಹೊರತು ಪರಿಸರಕ್ಕೆ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಕಲ್ಮಶಯುಕ್ತ ನೀರನ್ನು ಸರಿಯಾದ ಮೇಲ್ವಿಚಾರಣೆ ಮತ್ತು ಪರೀಕ್ಷೆಯಿಲ್ಲದೆ ಬಿಡುಗಡೆ ಮಾಡಲಾಗಿದೆ ಎಂಬ ಆರೋಪಗಳು ಸತ್ಯಕ್ಕೆ ದೂರವಾದುದು ಎಂದು ಕೆಪಿಸಿಎಲ್ ಹೇಳಿದೆ.

ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆಯಾದ ಬಳಿಕ ಹೊರಬರುವ ತಳ ಬೂದಿ ಮತ್ತು ಹಾರು ಬೂದಿಯನ್ನು ಪ್ರಸ್ತುತ ಬಿಬಿಎಂಪಿ ಮೂಲಕವೇ ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಈ ಮಧ್ಯೆ, ಕೇಂದ್ರ ರಸ್ತೆ ಸಂಶೋಧನಾ ಸಂಸ್ಥೆ(ಸಿಆರ್‍ಆರ್‍ಐ)ಗೆ 2025 ಜುಲೈ 1ರಂದು ಪ್ರಸ್ತಾವನೆ ಸಲ್ಲಿಸಿ, ಈ ಬೂದಿಯನ್ನು ರಸ್ತೆ ನಿರ್ಮಾಣಕ್ಕೆ ಬಳಸಿಕೊಳ್ಳುವ ಬಗ್ಗೆ ಪ್ರಸ್ತಾಪಿಸಲಾಗಿತ್ತು.

ಅದರಂತೆ ಅವರು ಪತ್ರ ಬರೆದು ಸಂಶೋಧನೆಗೆ 44.84ಲಕ್ಷ ರೂ.ಪಾವತಿಸುವಂತೆ ತಿಳಿಸಿದ್ದರು. ಅದರಂತೆ ಈ ಹಣವನ್ನು ಸಿಆರ್‍ಆರ್‍ಐಗೆ ನೀಡಲಾಗಿದೆ. ಶೀಘ್ರದಲ್ಲೇ ಅದು ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. ತಳ ಬೂದಿ ಮತ್ತು ಹಾರು ಬೂದಿಯನ್ನು ರಸ್ತೆ ನಿರ್ಮಾಣಕ್ಕೆ ಬಳಸಿಕೊಂಡರೆ ಅವುಗಳ ವಿಲೇವಾರಿ ಸಮಸ್ಯೆ ಪೂರ್ಣ ಪ್ರಮಾಣದಲ್ಲಿ ಬಗೆಹರಿಯಲಿದೆ ಎಂದು ಸ್ಪಷ್ಟಪಡಿಸಿದೆ.

ಪ್ರತಿನಿತ್ಯ 600 ಟನ್ ತ್ಯಾಜ್ಯ ಸಂಸ್ಕರಿಸಿ 11.50 ಮೆ.ವ್ಯಾ.ವಿದ್ಯುತ್ ಉತ್ಪಾದಿಸುವ ಬಿಡದಿಯ ವಿದ್ಯುತ್ ಸ್ಥಾವರಕ್ಕೆ ಪ್ರಸ್ತುತ 200 ಟನ್ ಸಂಸ್ಕರಿಸಿದ ಒಣ ತ್ಯಾಜ್ಯ ಬರುತ್ತಿದೆ. ಈ ತಿಂಗಳಾಂತ್ಯದೊಳಗೆ ಇದರ ಪ್ರಮಾಣ 500 ಟನ್ ತಲುಪುವ ನಿರೀಕ್ಷೆಯಿದೆ. ಪ್ರಸ್ತುತ ತ್ಯಾಜ್ಯದಲ್ಲಿ ಸ್ವಲ್ಪ ಮಟ್ಟಿನ ತೇವಾಂಶ ಇದೆಯಾದರೂ ಅದರಿಂದ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಘಟಕದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ ಎಂದು ಕೆಪಿಸಿಎಲ್ ಹೇಳಿದೆ.

ಪಸ್ತುತ ಬಿಡದಿಯ ತ್ಯಾಜ್ಯದಿದ ವಿದ್ಯುತ್ ಉತ್ಪಾದಿಸುವ ಘಟಕವು ಪರಿಸರಕ್ಕೆ ಸಂಬಂದಿಸಿದಂತೆ ಎಲ್ಲ ಮಾನದಂಡಗಳನ್ನು ಪೂರೈಸುವ ಮಾಲಿನ್ಯ ನಿಯಂತ್ರಣ ಮಂಡಳಿಯ ಕಣ್ಗಾವಲಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಹೀಗಾಗಿ ವಿಷಕಾರಿ ಮಾಲಿನ್ಯಕಾರಕಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ವಿಫಲವಾಗಿದೆ ಎಂಬ ಆರೋಪಗಳು ಸತ್ಯಕ್ಕೆ ದೂರವಾದುದು ಎಂದು ಕೆಪಿಸಿಎಲ್ ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X