ಬಾಗಲಕೋಟೆಯಲ್ಲಿ ದಲಿತ ಮಹಿಳೆಯ ಮೇಲೆ ದೌರ್ಜನ್ಯ: ಮಹಿಳಾ ಆಯೋಗ ಖಂಡನೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಛಬ್ಬಿ ಗ್ರಾಮದಲ್ಲಿ ದಲಿತ ಮಹಿಳೆಯ ಮೇಲೆ ಪುರುಷರು, ಕ್ಷುಲ್ಲಕ ಕಾರಣಕ್ಕೆ ದೌರ್ಜನ್ಯವೆಸಗಿರುವ ಅಮಾನುಷ ಕೃತ್ಯವು ತಡವಾಗಿ ಬೆಳಕಿಗೆ ಬಂದಿರುವ ಬಗ್ಗೆ ವರದಿಯಾಗಿರುತ್ತದೆ. ಮಹಿಳೆಯ ಮೇಲೆ ನಡೆದಿರುವ ಈ ಅಮಾನುಷ ಕೃತ್ಯವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗ ಖಂಡಿಸಿದೆ.
ಈ ಕುರಿತು ಮಹಿಳಾ ಆಯೋಗದ ಕಾರ್ಯದರ್ಶಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದ್ದು, ಸದರಿ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಮಹಿಳೆ ಹಾಗೂ ಆಕೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ತಿಳಿಸಿದೆ.
ಮಹಿಳೆಯ ಮೇಲೆ ದೌರ್ಜನ್ಯವೆಸಗಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಠಾಣಾಧಿಕಾರಿಯವರಿಗೆ ಸೂಕ್ತ ನಿರ್ದೇಶನ ನೀಡಲು ಕ್ರಮ ಕೈಗೊಂಡು, ವರದಿಯನ್ನು ತಕ್ಷಣವೇ ಆಯೋಗಕ್ಕೆ ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಪತ್ರದಲ್ಲಿ ತಿಳಿಸಿದೆ.
Next Story





