ಜಿಬಿಎ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ; ದಾಖಲೆಗಳು ಭಸ್ಮ

ಬೆಂಗಳೂರು : ಜಯನಗರದ 4ನೇ ಬ್ಲಾಕ್‌ನಲ್ಲಿರುವ ಜಿಬಿಎ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲವು ದಾಖಲೆಗಳು ಸುಟ್ಟುಕರಕಲಾಗಿರುವ ಘಟನೆ ವರದಿಯಾಗಿದೆ.
ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆತಂಕಗೊಂಡ ಸಿಬ್ಬಂದಿ ಕೂಡಲೇ ಹೊರಗೆ ಓಡಿ ಬಂದಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಎರಡು ಅಗ್ನಿಶಾಮಕ ವಾಹನಗಳ ಸಮೇತ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ವೇಳೆ ಲಿಫ್ಟ್‌ನಲ್ಲಿ ಸಿಲುಕಿದ್ದ ಇಬ್ಬರನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಿಸಿ ಹೊರ ಕರೆತಂದಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಜಯನಗರದ ಪೊಲೀಸರು ಪರಿಶೀಲಿಸಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
Next Story





