Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಐ ಕಾಲಘಟ್ಟದಲ್ಲಿ ಸುದ್ದಿ, ಚಿತ್ರಗಳ...

ಎಐ ಕಾಲಘಟ್ಟದಲ್ಲಿ ಸುದ್ದಿ, ಚಿತ್ರಗಳ ನೈಜತೆ ಖಾತ್ರಿ ಅಗತ್ಯ : ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ25 Nov 2025 12:23 AM IST
share
ಎಐ ಕಾಲಘಟ್ಟದಲ್ಲಿ ಸುದ್ದಿ, ಚಿತ್ರಗಳ ನೈಜತೆ ಖಾತ್ರಿ ಅಗತ್ಯ : ಈಶ್ವರ್ ಖಂಡ್ರೆ
ಕೆ.ಯು.ಡಬ್ಲ್ಯು.ಜೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬೆಂಗಳೂರು : ಇದು ಕೃತಕ ಬುದ್ಧಿಮತ್ತೆ (ಎ.ಐ.)ಕಾಲವಾಗಿದ್ದು, ಮಾಧ್ಯಮಗಳು ಸುದ್ದಿ ಪ್ರಸಾರಕ್ಕೆ ಮುನ್ನ ಸುದ್ದಿ ಚಿತ್ರಗಳ ನೈಜತೆಯನ್ನು ಖಚಿತ ಪಡಿಸಿಕೊಳ್ಳುವುದು ಅಗತ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರ ನಗರದ ಗಾಂಧೀಭವನದಲ್ಲಿ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸುಳ್ಳು ಸುದ್ದಿಗಳು, ನಕಲಿ ಚಿತ್ರ, ದೃಶ್ಯಗಳ ಬಗ್ಗೆ ಎಚ್ಚರಿಕೆ ಅಗತ್ಯ. ಒಮ್ಮೆ ಚಾರಿತ್ರ್ಯವಧೆ ಆದರೆ ಮತ್ತೆ ಅದನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಮಾಧ್ಯಮಗಳಿಗೆ ವಿಶ್ವಾಸಾರ್ಹತೆ ಮುಖ್ಯ. ಹೀಗಾಗಿ ಪೂರ್ವಾಗ್ರಹ ಪೀಡಿತವಾಗಿ ಮತ್ತು ರೋಚಕ ಸುದ್ದಿಗಳನ್ನು ಬಿತ್ತಸಿರುವ ಧಾವಂತದಲ್ಲಿ ಸುಳ್ಳೇ ಸತ್ಯ ಎಂಬಂತೆ ಬಿಂಬಿಸಬಾರದು, ಇದು ಜನರ ನಂಬಿಕೆಯನ್ನು ದೂರ ಮಾಡುತ್ತದೆ ಎಂದರು.

ಮಾಧ್ಯಗಳಿಗೆ ಸ್ವಾತಂತ್ರ್ಯ ಇರಬೇಕು. ನಿಯಂತ್ರಣ ಹಾಕಲು ಹಲವು ಕಾಯಿದೆಗಳಿವೆ. ಆದರೆ, ಮಾಧ್ಯಮಗಳು ಸ್ವಯಂ ನಿಯಂತ್ರಣ ವಿಧಿಸಿಕೊಂಡು ಸತ್ಯ, ನಿಖರ ಮಾಹಿತಿಯನ್ನು ಜನರಿಗೆ ನೀಡಬೇಕು. ಮಾಹಿತಿದಾಹವನ್ನು ತಣಿಸಬೇಕು ಎಂದು ಹೇಳಿದರು.

ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗದ ಜೊತೆಗೆ ನಾಲ್ಕನೇ ಅಂಗವಾಗಿ ಗುರುತಿಸಿಕೊಂಡಿರುವ ಮಾಧ್ಯಮರಂಗ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಮತ್ತು ಸಮಾಜದ ಓರೆಕೋರೆ, ಸಾಮಾಜಿಕ ಪಿಡುಗುಗಳ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಅವರು ಹೇಳಿದರು.

ಸ್ವಾತಂತ್ರ್ಯ ಸಂಗ್ರಾಮ ಕಾಲದಲ್ಲಿ ಪತ್ರಿಕೆಗಳು ಮಹತ್ವದ ಪಾತ್ರ ವಹಿಸಿದ್ದವು. ಸ್ವಾತಂತ್ರ್ಯೋತ್ತರದಲ್ಲೂ ಪತ್ರಿಕೆಗಳು, ಮಾಧ್ಯಮಗಳು ದೊಡ್ಡ ಪಾತ್ರ ನಿರ್ವಹಿಸುತ್ತಿವೆ. ಮಾಧ್ಯಮಗಳಿಗೆ, ಸಾರ್ವಜನಿಕ ಅಭಿಪ್ರಾಯ ಮೂಡಿಸುವ ಶಕ್ತಿ ಇದ್ದು, ಅತ್ಯಂತ ಪ್ರಭಾವಶಾಲೀ ಸಾಧನವಾಗಿದೆ. ಇದರ ಸದ್ಬಳಕೆ ಆಗಬೇಕು ಎಂದು ಖಂಡ್ರೆ ತಿಳಿಸಿದರು.

ಕವಿ ಡಿ.ವಿ. ಗುಂಡಪ್ಪನವರು ಪ್ರಥಮ ಅಧ್ಯಕ್ಷರಾಗಿದ್ದ ಸಂಘ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಂಗ ಸಂಸ್ಥೆಯಾಗಿ 9 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದ್ದು, ಈ ಸಂಘದ ರಾಜ್ಯ ಮತ್ತು ಜಿಲ್ಲಾ ಘಟಕಗಳಿಗೆ ಸುಸೂತ್ರವಾಗಿ ಪ್ರಜಾಸತ್ತಾತ್ಮಕವಾಗಿ ಚುನಾವಣೆ ನಡೆಸಿರುವುದು ಅಭಿನಂದನಾರ್ಹ ಎಂದರು.

ಕೇಂದ್ರದಲ್ಲಿ ಪೆಟ್ರೋಲಿಯಂ ಸಚಿವರಾಗಿದ್ದ ಎಂ.ಎಸ್.ಗುರುಪಾದಸ್ವಾಮಿ, ಖಾದ್ರಿ ಶಾಮಣ್ಣ, ಜಯಶೀಲರಾವ್, ಪೊತೇನ್ ಜೋಸೆಫ್ ಮೊದಲಾದವರು ಅಧ್ಯಕ್ಷರಾಗಿ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಶಿವಾನಂದ ತಗಡೂರು ಅವರ ಮಾರ್ಗದಲ್ಲಿ ಸಾಗುತ್ತಿದ್ದಾರೆ ಎಂದು ಪ್ರಶಂಸಿಸಿದರು.

ಪತ್ರಕರ್ತರಿಗೆ ಅವರ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಂಘಟನೆಗಳ ಅಗತ್ಯವಿದೆ. ಕೆ.ಯು.ಡಬ್ಲ್ಯು.ಜೆ. ಸುದ್ದಿಗಾರರ ಮತ್ತು ಮಾಧ್ಯಮ ಸಂಸ್ಥೆಗಳ ಸಿಬ್ಬಂದಿಯ ಹಿತ ಕಾಯಲಿ, ಪತ್ರಕರ್ತರು ವೃತ್ತಿ ಘನತೆ ಕಾಪಾಡಿ, ಮಾಧ್ಯಮದ ಹಿರಿಮೆ ಎತ್ತಿ ಹಿಡಿಯಿರಿ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಐ.ಎಫ್.ಡಬ್ಲ್ಯುಜೆ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಹಿರಿಯ ಪತ್ರಕರ್ತೆ ನಾಗಮಣಿ ಎಸ್.ರಾವ್ ಮತ್ತಿತರರು ಪಾಲ್ಗೊಂಡಿದ್ದರು.

ಭೀಮಣ್ಣ ಖಂಡ್ರೆ ಹೆಸರಲ್ಲಿ ಪತ್ರಕರ್ತರಿಗೆ ಪ್ರಶಸ್ತಿ: ಈಶ್ವರ್ ಖಂಡ್ರೆ

ಇದೇ ವೇಳೆ ಮಾಜಿ ಸಚಿವ, ಶತಾಯುಷಿ, ಲೋಕನಾಯಕ ಡಾ.ಭೀಮಣ್ಣ ಖಂಡ್ರೆ ಅವರ ಹೆಸರಲ್ಲಿ ಪತ್ರಕರ್ತರಿಗೆ ಪ್ರಶಸ್ತಿ ನೀಡಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ದತ್ತಿ ನಿಧಿ ಸ್ಥಾಪಿಸುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದರು.

ತಮ್ಮ ತಂದೆಯವರು ಪತ್ರಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು, ಅವರ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿ ನೀಡಲು ಕೆ.ಯು.ಡಬ್ಲ್ಯು.ಜೆ.ಯಲ್ಲಿ 2.5 ಲಕ್ಷ ರೂ. ಠೇವಣಿ ಇಡುವುದಾಗಿ ಈಶ್ವರ್ ಖಂಡ್ರೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X