Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಾತೃಭಾಷೆ ಮರೆತವನು ತನ್ನ ಸಂಸ್ಕೃತಿ...

ಮಾತೃಭಾಷೆ ಮರೆತವನು ತನ್ನ ಸಂಸ್ಕೃತಿ ಉಳಿಸಲಾರ : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ30 Nov 2025 3:32 PM IST
share
ಮಾತೃಭಾಷೆ ಮರೆತವನು ತನ್ನ ಸಂಸ್ಕೃತಿ ಉಳಿಸಲಾರ : ಡಿಸಿಎಂ ಡಿ.ಕೆ.ಶಿವಕುಮಾರ್
2024ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ

ಬೆಂಗಳೂರು: "ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ. ಮಾತೃಭಾಷೆ ಮರೆತವನು ತನ್ನ ಸಂಸ್ಕೃತಿ ಉಳಿಸಲಾರ. ನಿಮ್ಮ ಮುಂದಿನ ಪೀಳಿಗೆಗೆ ಅರೆಭಾಷಿಕರ ಸಂಸ್ಕೃತಿ, ಆಚಾರ, ವಿಚಾರಗಳನ್ನು ದಾಟಿಸಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ರವಿವಾರ ನಡೆದ 2024ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು.

"ಈ ವಿಶಾಲವಾದ ಪ್ರಪಂಚದಲ್ಲಿ ನಾವು ಎಲ್ಲಿ ಬೇಕಾದರೂ ಬದುಕಬಹುದು. ಆದರೆ ನಮ್ಮ ಮೂಲವನ್ನು ಮರೆಯಬಾರದು. ನಾವು ಎಲ್ಲೇ ಇದ್ದರು ನಮ್ಮ ಸಾಹಿತ್ಯ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕೆಲಸ ಮಾಡಬೇಕು" ಎಂದರು‌.

"ಒಂದು ಸಮಾಜ ಅಕ್ಷರ ಮರೆತರೆ ಕಲಿಸಬಹುದು. ಆದರೆ ಕಲೆ, ಸಂಸ್ಕೃತಿ ‌ಮರೆತರೆ ಮತ್ತೆ ಕಲಿಸುವುದಕ್ಕೆ ಸಾಧ್ಯವಿಲ್ಲ. ನಮ್ಮ ಹುಟ್ಟು ಸಾವಿನ ಮಧ್ಯದಲ್ಲಿ ಮನುಷ್ಯ ಏನು ಸಾಧನೆ ಮಾಡುತ್ತಾನೆ ಎನ್ನುವುದು ಮುಖ್ಯ" ಎಂದು ಹೇಳಿದರು.

"ನಿಮ್ಮ ಜನಸಂಖ್ಯೆ ಕೇವಲ 4 ಲಕ್ಷ ಮಾತ್ರವಿದೆ ಎಂದು ಹಿಂಜರಿಕೆ ಬೇಡ. ಒಂದು ಪಬುದ್ಧ ನಾಯಕತ್ವ ಅಥವಾ ತೀರ್ಮಾನ ನಿಮ್ಮನ್ನು ಎಲ್ಲಿಗೆ ಬೇಕಾದರೂ ಕೊಂಡೊಯ್ಯಬಹುದು. ನಾಯಕನಾದವನಿಗೆ ಲಕ್ಷಾಂತರ ಜನ ಹಿಂಬಾಲಕರು ಬೇಡ. ಧೈರ್ಯ ಹಾಗೂ ತೀರ್ಮಾನ ಬೇಕು. ನಿಮ್ಮ ಜನಸಂಖ್ಯೆ ಕಡಿಮೆ ಇದ್ದರೂ ಅನೇಕರು ದೊಡ್ಡ ಸ್ಥಾನಕ್ಕೆ ಹೋಗಿಲ್ಲವೇ? ಕೇವಲ ನಾಯಕತ್ವ ಎಂದರೆ ರಾಜಕೀಯ ಮಾತ್ರವಲ್ಲ. ಔದ್ಯೋಗಿಕ, ಶಿಕ್ಷಣ, ಸಾಹಿತ್ಯ, ಸಂಗೀತ ಹೀಗೆ ಅನೇಕ ಕ್ಷೇತ್ರದಲ್ಲಿ ಅರೆಭಾಷಿಕರು ಸಾಧನೆ ಮಾಡಿದ್ದಾರೆ" ಎಂದರು.

"ಅರೆಭಾಷೆ ಸಂಘಟನೆಯವರು ತಮ್ಮ ಚಟುವಟಿಕೆಗಳನ್ನು ನಡೆಸಲು ನಿವೇಶನದ ಅವಶ್ಯಕತೆಯಿದೆ ಎಂದು ಮನವಿ ಸಲ್ಲಿಸಿದ್ದಾರೆ. ನನ್ನ ಭೇಟಿ ಮಾಡಿ ಮನವಿ ಸಲ್ಲಿಸಿದರೆ ಲಭ್ಯತೆ ನೋಡಿಕೊಂಡು ಜಾಗ ನೀಡಲಾಗುವುದು.‌ ರಾಜಕೀಯ ಹೋಗುತ್ತದೆ, ಬರುತ್ತದೆ. ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ" ಎಂದರು.

"ಬೆಳಗಾವಿ, ರಾಯಚೂರು, ಶಿವಮೊಗ್ಗ, ಮೈಸೂರು, ಬೆಂಗಳೂರು, ಮಂಗಳೂರು, ಕೊಡಗು ಸೀಮೆಯ ಕನ್ನಡಗಳೇ ಬೇರೆ ರೀತಿ. ನನ್ನ ಹುಟ್ಟೂರು ಕನಕಪುರದ ಕನ್ನಡವೇ ಬೇರೆ. ಆದರೆ ವಿಧಾನಸಭೆಯಲ್ಲಿ ಎಲ್ಲ 224 ಶಾಸಕರ ಕನ್ನಡ ಒಂದೇ ಕಡೆ ಸಮಾಗಮ ಆಗುತ್ತದೆ" ಎಂದು ತಿಳಿಸಿದರು.

"ಜಗತ್ತಿನಲ್ಲಿ 7 ಸಾವಿರಕ್ಕೂ ಹೆಚ್ಚು ಭಾಷೆಗಳಿವೆ. ಅದರಲ್ಲಿ ಸುಮಾರು 2,845 ಭಾಷೆಗಳು ಕಣ್ಮರೆ ಆಗಿವೆ. ಅರೆಭಾಷೆ ಯಾವುದೇ ಕಾರಣಕ್ಕೂ ಕಣ್ಮರೆ ಆಗದಂತೆ ನೀವೆಲ್ಲರೂ ಕಾಪಾಡಿಕೊಳ್ಳಬೇಕು" ಎಂದರು.

"ಬೆಂಗಳೂರಿನಲ್ಲಿ ಸಾಕಷ್ಟು ಜನ ಬೇರೆ ಭಾಷಿಕರು ಇದ್ದಾರೆ. ಕೊಡಗಿನಲ್ಲೂ ಇದ್ದಾರೆ. ಬಿಹಾರ, ಅಸ್ಸಾಂ ಕಾರ್ಮಿಕರು ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಮೂಲ ನಿವಾಸಿಗಳು ಬೇರೆ ಕಡೆ ಹೋದಾಗ ಬೇರೆಯವರು ಬಂದು ಆಕ್ರಮಿಸುತ್ತಾರೆ. ವ್ಯವಸಾಯ ಕಾರಣಕ್ಕೆ ಈ ರೀತಿಯ ವಲಸೆ ಹೆಚ್ಚಾಗಿದೆ. ಆದರೆ ನಾವು ಸಂಸ್ಕೃತಿಯನ್ನು ಮರೆಯಬಾರದು" ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X