ಬೆಂಗಳೂರಿನಲ್ಲಿ ಹತ್ತು ಪಿಜಿಗಳಿಗೆ ಬೀಗ

ಸಾಂದರ್ಭಿಕ ಚಿತ್ರ | PC : gemini AI
ಬೆಂಗಳೂರು : ಸೋಮವಾರದಂದು ಇಲ್ಲಿನ ಜಯನಗರ, ಬೆಂಗಳೂರು ದಕ್ಷಿಣ, ಬಿಟಿಎಂ ಲೇಔಟ್ ಬೊಮ್ಮನಹಳ್ಳಿ ಕ್ಷೇತ್ರಗಳಲ್ಲಿ ಶುಚಿತ್ವ ಇಲ್ಲದೆ ನಡೆಯುತ್ತಿದ್ದ 10 ಪೇಯಿಂಗ್ ಗೆಸ್ಟ್ ಗಳಿಗೆ(ಪಿ.ಜಿ.) ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಬೀಗ ಹಾಕಿದ್ದಾರೆ.
ಶುದ್ಧ ಕುಡಿಯುವ ನೀರು, ಶುಚಿತ್ವ, ಅಡುಗೆ ಕೋಣೆ ನೈರ್ಮಲ್ಯ, ಸುರಕ್ಷತೆ, ಉತ್ತಮ ಶೌಚಾಲಯ ವ್ಯವಸ್ಥೆ, ಅಗ್ನಿಶಾಮಕ ಸಾಧನಗಳು ಹಾಗೂ ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಕೆ ಮತ್ತು ಎಫ್ಎಸ್ಎಸ್ಎಐನ ಆಹಾರ ಸುರಕ್ಷತಾ ಪ್ರಮಾಣ ಪತ್ರ ಇತ್ಯಾದಿ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಒಟ್ಟು 66 ಪಿಜಿಗಳನ್ನು ತಪಾಸಣೆ ನಡೆಸಲಾಗಿದೆ.
ತಪಾಸಣೆ ನಡೆಸಿದ ಪಿ.ಜಿ. ಉದ್ದಿಮೆಗಳಲ್ಲಿ ಕಂಡು ಬಂದ ನ್ಯೂನ್ಯತೆಗಳಿಗೆ 22,500 ರೂ.ಗಳ ದಂಡವನ್ನು ವಿಧಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ.
Next Story





