ಬೆಂಗಳೂರು | ಅನುಮಾನಾಸ್ಪದವಾಗಿ ಗೃಹಿಣಿ ಮೃತದೇಹ ಪತ್ತೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ಇಲ್ಲಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಸುಪ್ರಿತಾ(27) ಮೃತ ಗೃಹಿಣಿ ಎಂದು ಗುರುತಿಸಲಾಗಿದೆ. ಇದು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡುಬಂದಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಹೆಣ್ಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಐದು ವರ್ಷಗಳ ಹಿಂದೆ ಕಿರಣ್ ಕುಮಾರ್ ಎಂಬವರೊಂದಿಗೆ ಸುಪ್ರಿತಾ ವಿವಾಹವಾಗಿತ್ತು. ಕಿರಣ್ ಖಾಸಗಿ ಸಂಸ್ಥೆಯೊಂದರ ಸೇಲ್ಸ್ ತಂಡದಲ್ಲಿ ಕೆಲಸ ಮಾಡುತ್ತಿದ್ದರೆ, ಸುಪ್ರಿತಾ ಗೃಹಿಣಿಯಾಗಿದ್ದರು ಎಂದು ತಿಳಿದುಬಂದಿದೆ. ಸದ್ಯ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





