Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶೈಕ್ಷಣಿಕ ಸಂಸ್ಥೆಯ ಸಕ್ರಮಾತಿ ವಿಧೇಯಕ...

ಶೈಕ್ಷಣಿಕ ಸಂಸ್ಥೆಯ ಸಕ್ರಮಾತಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ24 March 2026 10:53 PM IST
share
ಶೈಕ್ಷಣಿಕ ಸಂಸ್ಥೆಯ ಸಕ್ರಮಾತಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು : 2026ನೆ ಸಾಲಿನ ಕರ್ನಾಟಕ ಸರಕಾರಿ ಶೈಕ್ಷಣಿಕ ಸಂಸ್ಥೆಯ ಭೂಮಿಗಳ (ರಕ್ಷಣೆ ಮತ್ತು ಸಕ್ರಮಾತಿ) ವಿಧೇಯಕವು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರವಾಯಿತು.

ಮಂಗಳವಾರ ವಿಧಾನಸಭೆಯ ಶಾಸನ ರಚನೆ ಕಲಾಪದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರು ವಿಧೇಯಕವನ್ನು ಪರ್ಯಾಲೋಚಿಸಿ ಅನುಮೋದಿಸಬೇಕೆಂದು ಕೋರಿ ವಿಧೇಯಕದ ಉದ್ದೇಶಗಳನ್ನು ಸದನದಲ್ಲಿ ವಿವರಿಸಿದರು.

ಈ ವಿಧೇಯಕವು ಕರ್ನಾಟಕದ ಹಲವು ಭಾಗಗಳಲ್ಲಿ ಸರಕಾರಿ ಶೈಕ್ಷಣಿಕ ಸಂಸ್ಥೆಗಳು ಹಲವು ಬಾರಿ ಔಪಚಾರಿಕ ದಸ್ತಾವೇಜು ಅಥವಾ ನೋಂದಾಯಿತ ವರ್ಗಾವಣೆಯಿಲ್ಲದೆ ವ್ಯಕ್ತಿಗಳು, ಕುಟುಂಬಗಳು ಅಥವಾ ಸಮುದಾಯ ಸಂಸ್ಥೆಗಳು ದಾನಮಾಡಿದ ಭೂಮಿಗಳ ಮೇಲೆ ಸ್ಥಾಪಿಸಲಾಗಿದೆ. ಸದ್ಬಾವನೆಯಿಂದ ಮಾಡಲಾದ ಈ ದಾನಗಳು ಹಲವು ಪೀಳಿಗೆಗಳ ಮಕ್ಕಳಿಗೆ ಶಿಕ್ಷಣ ಸೇವೆ ಸಲ್ಲಿಸಿದ್ದು, ಅತ್ಯಾವಶ್ಯಕ ಶೈಕ್ಷಣಿಕ ಮೂಲಭೂತ ಸೌಕರ್ಯದೊಂದಿಗೆ ರಾಜ್ಯದ ಬೆಳವಣಿಗೆಯನ್ನು ಸಾಧ್ಯವಾಗಿಸಿವೆ.

ದಸ್ತಾವೇಜುಗಳ ತಾಂತ್ರಿಕ ನ್ಯೂನ್ಯತೆಗಳ ಆಧಾರದ ಮೇಲೆ, ಉತ್ತರಾಧಿಕಾರಿಗಳು ಅಥವಾ ಕಾನೂನು ಬದ್ಧ ವಾರಸುದಾರರು ಇತ್ತೀಚೆಗೆ ಕ್ಲೇಮುಗಳನ್ನು ಮಾಡುತ್ತಿದ್ದು, ಅವರ ವ್ಯಾಜ್ಯಗಳು ನಿರ್ಮಾಣ ಸ್ಥಗಿತಗೊಳ್ಳಲು ಮತ್ತು ಭೂ-ಸ್ಥಿತಿಗತಿಗೆ ಅಸ್ಥಿರತೆಗೆ ಕಾರಣವಾಗಿವೆ ಎಂದು ಸಚಿವರು ಉಲ್ಲೇಖಿಸಿದರು.

ಪ್ರಸ್ತಾವಿತ ವಿಧೇಯಕವು ಸಿಂಧುವಾದ ಹಕ್ಕುಗಳನ್ನು ನ್ಯಾಯಸಮ್ಮತವಲ್ಲದ ರೀತಿಯಲ್ಲಿ ಶಮನಗೊಳಿಸಿ ನೈಜ ಕ್ಲೇಮುಗಳನ್ನು ಮಾಡಲು ಸೀಮಿತ ಗವಾಕ್ಷಿ ಮತ್ತು ಅಪೀಲಿಗಾಗಿ ವೇದಿಕೆಯನ್ನು ಒಳಗೊಂಡಂತೆ ಪ್ರಕ್ರಿಯಾತ್ಮಕ ರಕ್ಷಣೆಯನ್ನು ಉಪಬಂಧಿಸುವುದು. ಜತೆಗೆ, ಇದು ವೈಯಕ್ತಿಕ ಸ್ವತ್ತಿನ ಹಕ್ಕುಗಳೊಂದಿಗೆ ದೀರ್ಘಕಾಲಿಕ ಸಾರ್ವಜನಿಕ ಹಿತಾಸಕ್ತಿಯನ್ನು ಸರಿದೂಗಿಸುವ ಗುರಿಯನ್ನು ಹೊಂದಿದ್ದು, ಶಿಕ್ಷಣದ ಮೂಲಭೂತ ಹಕ್ಕನ್ನು ಎತ್ತಿಹಿಡಿಯುವುದು ಹಾಗೂ ಸರ್ಕಾರಿ ಶೈಕ್ಷಣಿಕ ಮೂಲಸೌಕರ್ಯದ ಕಾನೂನು ಖಚಿತತೆಯನ್ನು ಸಂರಕ್ಷಿಸುವುದು ವಿಧೇಯಕದ ಉದ್ದೇಶವಾಗಿದೆ ಎಂದು ಸಚಿವರು ತಿಳಿಸಿದರು.

ವಿರೋಧಪಕ್ಷದ ನಾಯಕ ಆರ್.ಅಶೋಕ್, ಜೆಡಿಎಸ್ ಸದಸ್ಯ ಜಿ.ಟಿ.ದೇವೇಗೌಡ ಹಾಗೂ ಇನ್ನಿತರ ಸದಸ್ಯರು ವಿಧೇಯಕವನ್ನು ಸ್ವಾಗತಿಸಿದರು. ಬಳಿಕ ವಿಧೇಯಕವು ಸರ್ವಾನುಮತದಿಂದ ಅಂಗೀಕರಿಸಲ್ಪಟ್ಟಿತು.

Tags

Budget Session 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X