Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪರಿಶಿಷ್ಟರ ಮೀಸಲಾತಿ ಹೆಚ್ಚಳಕ್ಕೆ...

ಪರಿಶಿಷ್ಟರ ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಸಮರ್ಪಕ ವಕೀಲರನ್ನು ನೇಮಿಸಿ : ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ12 May 2026 7:51 PM IST
share
ಪರಿಶಿಷ್ಟರ ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಸಮರ್ಪಕ ವಕೀಲರನ್ನು ನೇಮಿಸಿ : ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಒತ್ತಾಯ

ಬೆಂಗಳೂರು, ಮೇ 12: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಸರಕಾರವು ಈ ತಡೆಯಾಜ್ಞೆ ತೆರವುಗೊಳಿಸಲು ಸಮರ್ಪಕ ವಕೀಲರನ್ನು ನೇಮಿಸಬೇಕು ಎಂದು ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಒತ್ತಾಯಿಸಿದೆ.

ಮಂಗಳವಾರ ಇಲ್ಲಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ವೇದಿಕೆಯ ಅಧ್ಯಕ್ಷ ಹಾಗೂ ಮಾಜಿ ಲೋಕಸಭಾ ಸದಸ್ಯ ವಿ.ಎಸ್. ಉಗ್ರಪ್ಪ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿತು.

ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಶೇ.3ರಷ್ಟು ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ.2ರಷ್ಟು ಮೀಸಲಾತಿಯನ್ನು ಹೆಚ್ಚಳ ಮಾಡಿರುವುದರಿಂದ ಒಟ್ಟಾರೆ ಮೀಸಲಾತಿ ಪ್ರಮಾಣವು ಶೇ.56 ಆಗಿರುತ್ತದೆ. ಆದರೆ ಮೀಸಲಾತಿ ಶೇ.50ಕ್ಕಿಂತ ಹೆಚ್ಚಾಗಿದೆ ಎಂಬ ಕಾರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ವಿಚಾರವಾಗಿ ಸಮರ್ಪಕ ವಕೀಲರನ್ನು ನೇಮಿಸಬೇಕು. ಆದರೂ ತಡೆಯಾಜ್ಞೆ ತೆರವಾಗದಿದ್ದರೆ, ಸುಪ್ರೀಂ ಕೋರ್ಟ್‍ನಲ್ಲಿ ವಿಶೇಷ ಅರ್ಜಿಯನ್ನು ದಾಖಲು ಮಾಡಬೇಕು ಎಂದು ವೇದಿಕೆ ಆಗ್ರಹಿಸಿದೆ.

2015ರಲ್ಲಿ ಕರ್ನಾಟಕ ರಾಜ್ಯ ನಾಯಕ ವಿದ್ಯಾರ್ಥಿ ಸಂಘವು ಎಸ್‍ಸಿ ಮತ್ತು ಎಸ್‍ಟಿ ಮೀಸಲಾತಿಯನ್ನು ಹೆಚ್ಚಿಸಲು ಹೈಕೋರ್ಟ್‍ನಲ್ಲಿ ಅರ್ಜಿಯನ್ನು ಸಲ್ಲಿಸಿತ್ತು. ಹೈಕೋರ್ಟ್ ಈ ಅರ್ಜಿಯನ್ನು ವಿಚಾರಣೆ ನಡೆಸಿ, ಸಂಘದ ಮನವಿಯನ್ನು ಪರಿಗಣಿಸುವಂತೆ ಸರಕಾರಕ್ಕೆ ನಿರ್ದೇಶಿಸಿತು. ಹೀಗಾಗಿ ಸರಕಾರವು 2017ರಲ್ಲಿ ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದಲ್ಲಿ ಆಯೋಗ ನೇಮಿಸಿತ್ತು ಎಂದು ವೇದಿಕೆಯು ಹೇಳಿದೆ.

2020ರಲ್ಲಿ ಆಯೋಗವು ಅಧ್ಯಯನ ಕೈಗೊಂಡು ಎಸ್‍ಸಿ ಮೀಸಲಾತಿಯನ್ನು ಶೇ.17ಕ್ಕೆ ಮತ್ತು ಎಸ್‍ಟಿ ಮೀಸಲಾತಿ ಪ್ರಮಾಣವನ್ನು ಶೇ.7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿತು. ಅದರಂತೆ ಸರಕಾರವು ‘ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಅಧಿನಿಯಮ 2022 ಅನ್ನು ಜಾರಿಗೆ ತಂದಿತು ಎಂದು ವೇದಿಕೆಯು ಮಾಹಿತಿ ನೀಡಿದೆ.

ಈ ಅಧಿನಿಯಮವು ಸಂವಿಧಾನದ 9ನೇ ಷೆಡ್ಯೂಲ್‍ಗೆ ಸೇರಿಸಿದರೆ ಮಾತ್ರ ಕಾನೂನು ಊರ್ಜಿತವಾಗುತ್ತದೆ. ಇಲ್ಲದಿದ್ದರೆ, ತೊಂದರೆಯಾಗುತ್ತದೆ. ಆದುದರಿಂದ ಈ ಕಾನೂನನ್ನು 9ನೇ ಷೆಡ್ಯೂಲ್‍ಗೆ ಸೇರಿಸುವ ವಿಚಾರವಾಗಿ ಮೊದಲು ಸರ್ವ ಪಕ್ಷಗಳ ಸಭೆಯನ್ನು ಕರೆಯಬೇಕು. ಸರ್ವ ಪಕ್ಷಗಳ ನಿಯೋಗವನ್ನು ಪ್ರಧಾನಮಂತ್ರಿಗಳ ಬಳಿಗೆ ಕೊಂಡೊಯ್ಯಬೇಕು ಎಂದು ವೇದಿಕೆಯು ಸಲ್ಲಿಸಿದ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಪರಿಶಿಷ್ಟ ಜಾತಿ ಮತ್ತು ವರ್ಗಗಳ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಲಕ್ಷಾಂತರ ಜನರು ಪಡೆದು ಪರಿಶಿಷ್ಟರ ಸೌಲಭ್ಯಗಳನ್ನು ಪಡೆಯುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ನೀಡುತ್ತಿರುವ ಅಧಿಕಾರಿಗಳ ಮೇಲೆ ಕೂಡಲೇ ಕ್ರಮ ಜರುಗಿಸಬೇಕು ಎಂದು ವೇದಿಕೆಯು ಆಗ್ರಹಿಸಿದೆ.

ನಿಯೋಗದಲ್ಲಿ ಸಂಜಯ್ ಕುಮಾರ್ ಸ್ವಾಮೀಜಿ, ರಾಮಲಿಂಗೇಶ್ವರ ಸ್ವಾಮೀಜಿ, ಈಶ್ವರಾನಂದ ಸ್ವಾಮೀಜಿ, ಪ್ರಕಾಶ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ವೇದಿಕೆ ಮುಖಂಡರಾದ ಎಂ.ನರಸಿಂಹಯ್ಯ, ಈ.ರಾಜಪ್ಪ ಸೇರಿದಂತೆ ಮತ್ತಿತರರು ಇದ್ದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನನ್ನು ಸಂವಿಧಾನದ 9ನೇ ಷೆಡ್ಯೂಲ್‍ಗೆ ಸೇರಿಸಲು ಕೇಂದ್ರದ ಮೇಲೆ ಒತ್ತಡ ಹಾಕುತ್ತೇವೆ. ಈ ವಿಚಾರವಾಗಿ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಕ್ರಮ ವಹಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X