Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೋದಿ ಸರಕಾರದಿಂದ ನಿರುದ್ಯೋಗ ಸೃಷ್ಟಿ :...

ಮೋದಿ ಸರಕಾರದಿಂದ ನಿರುದ್ಯೋಗ ಸೃಷ್ಟಿ : ಯುವ ಕಾಂಗ್ರೆಸ್ ಆರೋಪ

ವಾರ್ತಾಭಾರತಿವಾರ್ತಾಭಾರತಿ17 May 2026 11:11 PM IST
share
ಮೋದಿ ಸರಕಾರದಿಂದ ನಿರುದ್ಯೋಗ ಸೃಷ್ಟಿ : ಯುವ ಕಾಂಗ್ರೆಸ್ ಆರೋಪ

ಬೆಂಗಳೂರು : ದೇಶದಲ್ಲಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಸರಕಾರ ಉದ್ಯೋಗದ ಸೃಷ್ಟಿ ಬದಲು ದಾಖಲೆಯ ನಿರುದ್ಯೋಗ ಸೃಷ್ಟಿಸಿ ಯುವಜನರ ಭವಿಷ್ಯವನ್ನು ಹಾಳು ಮಾಡುತ್ತಿದೆ ಎಂದು ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ ಆರೋಪಿಸಿದ್ದಾರೆ.

ರವಿವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತೀ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಯ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರಕಾರ 11 ವರ್ಷಗಳಲ್ಲಿ 22 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು. ಆದರೆ, ದೇಶದಲ್ಲಿ ಐದು ದಶಕಗಳಲ್ಲೇ ಅತಿ ಹೆಚ್ಚು ನಿರುದ್ಯೋಗ ಸೃಷ್ಟಿಸಿದೆ. ಆ ಮೂಲಕ ಯುವಕರ ಭವಿಷ್ಯವನ್ನು ನರಕವನ್ನಾಗಿಸಿದೆ ಎಂದು ಕಿಡಿಗಾರಿದರು.

ಕೇಂದ್ರ ಸರಕಾರದ 40 ಲಕ್ಷ ಮಂಜೂರಾದ ಹುದ್ದೆಗಳಲ್ಲಿ ಶೇ.25ರಷ್ಟು ಅಂದರೆ 10 ಲಕ್ಷ ಹುದ್ದೆಗಳು ಖಾಲಿಯಿವೆ. ರೈಲ್ವೆಯಲ್ಲಿ ಶೇ.40ರಷ್ಟು ಹುದ್ದೆಗಳು, ಗೃಹ ಇಲಾಖೆಯಲ್ಲಿ ಶೇ.33, ರಕ್ಷಣಾ ಇಲಾಖೆಯಲ್ಲಿ ಶೇ.12ರಷ್ಟು ಹುದ್ದೆಗಳು ಖಾಲಿಯಿವೆ. ಇದೆಲ್ಲ ಯಾವಾಗ ಭರ್ತಿ ಮಾಡಲಾಗುತ್ತದೆ? ಎಂದು ಮಂಜುನಾಥ್ ಪ್ರಶ್ನಿಸಿದರು.

9.67 ಲಕ್ಷ ಹುದ್ದೆಗಳು ಖಾಲಿ: ವೇತನ ವಿಧೇಯಕ ಮಂಡಿಸುವಾಗ 2023ರ ಮಾ.1ರಂದು ಕೇಂದ್ರ ಸರಕಾರವೆ ಅಧಿಕೃತವಾಗಿ 9.67 ಲಕ್ಷ ಹುದ್ದೆಗಳು ಖಾಲಿಯಿವೆ ಎಂದು ಹೇಳಿತ್ತು. ಈಗ ಈ ಸಂಖ್ಯೆ 10 ಲಕ್ಷ ದಾಟಿದೆ. ಶೇ.25ರಷ್ಟು ಹುದ್ದೆಗಳು ಖಾಲಿಯಿದ್ದು, ಈ ಪೈಕಿ ‘ಬಿ’ ಗ್ರೂಪ್ ನಲ್ಲಿ ಶೇ.33, ‘ಸಿ’ ಗ್ರೂಪ್ ನಲ್ಲಿ ಶೇ.24, ‘ಎ’ ಗ್ರೂಪ್ ನಲ್ಲಿ ಶೇ.23 ಖಾಲಿ ಇವೆ. ಇದು ವರ್ಷದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದ ಮೋದಿ ಮಾಡಿರುವ ದ್ರೋಹ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

56,435 ಭರ್ತಿಗೆ ಕಾಂಗ್ರೆಸ್ ಸರಕಾರ ಕ್ರಮ

ರಾಜ್ಯದಲ್ಲಿ ಇದೀಗ ಒಳ ಮೀಸಲಾತಿ ಗೊಂದಲ ಬಗೆಹರಿಸಿ ರೋಸ್ಟರ್ ಅಂತಿಮಗೊಳಿಸಿ, ಒಂದೇ ಬಾರಿಗೆ 56,435 ಸರಕಾರಿ ಹುದ್ದೆಗಳನ್ನು ತುಂಬಲು ಕಾಂಗ್ರೆಸ್ ಸರಕಾರ ಮುಂದಾಗಿದೆ. ಪ್ರತೀ ವರ್ಷ ಆದ್ಯತೆಯಾಗಿ ಖಾಲಿ ಹುದ್ದೆಗಳ ಭರ್ತಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯ ಪ್ರಕಾರ, ದೇಶದಲ್ಲಿ ಪದವಿ ಪಡೆದವರಲ್ಲಿ ನಿರುದ್ಯೋಗ ದರವು ಶೇ.18.9ರಷ್ಟಿದ್ದು, ಡಿಪ್ಲೊಮಾ ಪಡೆದವರಲ್ಲಿ ಶೇ.17.1 ರಷ್ಟಿದೆ. ಕರ್ನಾಟಕದಲ್ಲಿ ನಿರುದ್ಯೋಗ ದರವು ಶೇ.2.5 ರಷ್ಟಿದೆ. ಇದು ಇತರ ರಾಜ್ಯಗಳಿಗಿಂತ ತುಲನಾತ್ಮಕವಾಗಿ ಕಡಿಮೆಯಾಗಿದೆ.

-ಎಚ್.ಎಸ್.ಮಂಜುನಾಥ್ ಗೌಡ, ರಾಜ್ಯಾಧ್ಯಕ್ಷ, ಯುವ ಕಾಂಗ್ರೆಸ್ ಸಮಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X