Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಎಸ್.ಐ.ಆರ್ ನಲ್ಲಿ ಪಾರದರ್ಶಕತೆ...

‘ಎಸ್.ಐ.ಆರ್ ನಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಿ’ : ಮುಖ್ಯ ಚುನಾವಣಾಧಿಕಾರಿಗೆ ರಾಜಕೀಯ ಪಕ್ಷಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 May 2026 8:31 PM IST
share
‘ಎಸ್.ಐ.ಆರ್ ನಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಿ’ : ಮುಖ್ಯ ಚುನಾವಣಾಧಿಕಾರಿಗೆ ರಾಜಕೀಯ ಪಕ್ಷಗಳ ಆಗ್ರಹ

ಬೆಂಗಳೂರು : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್.ಐ.ಆರ್) ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಅವರಿಗೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಆಗ್ರಹಿಸಿದ್ದಾರೆ.

ಸೋಮವಾರ ನಗರದ ಶೇಷಾದ್ರಿ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಮಹತ್ವದ ಸಭೆ ನಡೆಸಿದ ವಿ.ಅನ್ಬುಕುಮಾರ್ ಅವರು, ಮತದಾರರ ಪಟ್ಟಿಯ ಶುದ್ಧೀಕರಣ ಮತ್ತು ಸಮಗ್ರ ಪರಿಷ್ಕರಣೆಯು ಪ್ರಜಾಪ್ರಭುತ್ವದ ಬಲವರ್ಧನೆಗೆ ಅತ್ಯಂತ ಅಗತ್ಯ ಎಂದು ತಿಳಿಸಿದರು.

ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಕೊಳ್ಳಬೇಕು ಹಾಗೂ ಅನರ್ಹ ಹೆಸರುಗಳನ್ನು ತೆರವುಗೊಳಿಸುವ ಕಾರ್ಯವನ್ನು ಕಟ್ಟುನಿಟ್ಟಾಗಿ ಕೈಗೊಳ್ಳಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಚುನಾವಣಾ ಸಿಬ್ಬಂದಿಗೆ ಅಗತ್ಯ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಅನ್ಬುಕುಮಾರ್ ತಿಳಿಸಿದರು.

ಮತದಾರರು ತಮ್ಮ ವಿವರಗಳನ್ನು ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಪರಿಶೀಲಿಸಿಕೊಳ್ಳಬೇಕು. ಎಸ್‍ಐಆರ್ ಪ್ರಕ್ರಿಯೆ ಅಂಗವಾಗಿ ಹೊಸ ಮತದಾರರ ಸೇರ್ಪಡೆ, ವಿಳಾಸ ಬದಲಾವಣೆ, ಮೃತ ಮತದಾರರ ಹೆಸರು ಕೈಬಿಡುವುದು, ನಕಲಿ ಹೆಸರುಗಳ ಪರಿಶೀಲನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿಶೇಷವಾಗಿ 18 ವರ್ಷ ಪೂರ್ಣಗೊಳಿಸಿರುವ ಯುವ ಮತದಾರರನ್ನು ನೋಂದಾಯಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಕೆಲವು ಪ್ರದೇಶಗಳಲ್ಲಿ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಕೈ ಬಿಡುತ್ತಿರುವ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಆತಂಕ ವ್ಯಕ್ತಪಡಿಸಿದರು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಕಾರ್ಯವೈಖರಿಯ ಕುರಿತು ಮುಖ್ಯ ಚುನಾವಣಾಧಿಕಾರಿಗೆ ಸಭೆಯಲ್ಲಿ ಕೆಲವು ದೂರುಗಳು ಸಲ್ಲಿಕೆಯಾದವು.

ಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು, ಬಿಜೆಪಿ ಪಕ್ಷದ ದತ್ತಾತ್ರೀ ಎಸ್., ಜೆಡಿಎಸ್ ಪಕ್ಷದ ಎಚ್.ಎನ್.ದೇವರಾಜ್, ಆಮ್ ಆದ್ಮಿ ಪಾರ್ಟಿಯ ದರ್ಶನ್ ಜೈನ್, ಬಿಎಸ್ಪಿ ಪಕ್ಷದ ಅರುಣ್ ಪ್ರಸಾದ್, ಸಿಪಿಐ(ಎ) ಪಕ್ಷದ ಮುನಿವೆಂಕಟಪ್ಪ ಎಂ.ಪಿ, ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಸರವಣನ್ .ಎಸ್ ಸೇರಿದಂತೆ ಇತರರು ಭಾಗವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X