Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಡದಿ ಟೌನ್‍ಶಿಪ್ ಯೋಜನೆ ಭೂ ಸ್ವಾಧೀನ...

ಬಿಡದಿ ಟೌನ್‍ಶಿಪ್ ಯೋಜನೆ ಭೂ ಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ19 May 2026 12:22 AM IST
share
ಬಿಡದಿ ಟೌನ್‍ಶಿಪ್ ಯೋಜನೆ ಭೂ ಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಆಗ್ರಹ

ಬೆಂಗಳೂರು : ಫಲವತ್ತಾದ ಕೃಷಿ ಭೂಮಿಯಲ್ಲಿ ಉದ್ದೇಶಿತ ಬಿಡದಿ ಟೌನ್‍ಶಿಪ್ ಯೋಜನೆ ರೈತ ವಿರೋಧಿ ಹಾಗೂ ಪರಿಸರಕ್ಕೆ ವಿನಾಶಕಾರಿ. ಇಂತಹ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು ಸರಕಾರ ಹಿಂಪಡೆಯಬೇಕು ಮತ್ತು ಯೋಜನೆಗಾಗಿ ಸುಮಾರು 9,640ಎಕರೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹಿಸಿದೆ.

ಸೋಮವಾರ ಗಾಂಧಿ ಭವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಪದಾಧಿಕಾರಿಗಳಾದ ಬಡಗಲಪುರ ನಾಗೇಂದ್ರ, ಡಾ.ಸಿದ್ದನಗೌಡ ಪಾಟೀಲ್, ನೂರ್ ಶ್ರೀಧರ್, ಟಿ.ಯಶವಂತ, ಪಿ.ಪಿ.ಅಪ್ಪಣ್ಣ, ಪ್ರಕಾಶ್ ಸೇರಿದಂತೆ ರೈತರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಬಿಡದಿ ಹೋಬಳಿ ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ 25 ಗ್ರಾಮಗಳ ಸುಮಾರು 9,640 ಎಕರೆ ಕೃಷಿ ಭೂಮಿಯು ನೀರಾವರಿ ಹೊಂದಿರುವ ತೆಂಗು, ಅಡಿಕೆ, ಬಾಳೆ, ಮಾವು ಸೇರಿದಂತೆ ವಿವಿಧ ರೀತಿಯ ತೋಟಗಾರಿಕೆ ಬೆಳೆಗಳನ್ನು, ಬೆಳೆಯುತ್ತಿರುವ ಸಮೃದ್ಧ ಹಸಿರು ಪ್ರದೇಶವಾಗಿದೆ ಎಂದರು.

ಈ ಪ್ರದೇಶವು ಜಿಬಿಎ ಗಡಿಗೆ ಹೊಂದಿಕೊಂಡಂತೆ ಇದ್ದು ಬೆಂಗಳೂರು ಮಹಾನಗರಕ್ಕೆ ಹಾಲು, ಹಣ್ಣು, ತರಕಾರಿ ಮುಂತಾದ ದಿನನಿತ್ಯದ ಅಗತ್ಯಗಳನ್ನು ಪೂರೈಸುವ ಅಮೂಲ್ಯ ಆಹಾರದ ಕಣಜವಾಗಿದೆ. ಇಲ್ಲಿನ ಎಲ್ಲ ಕೃಷಿ ಕುಟುಂಬಗಳು ತಮ್ಮ ಸಣ್ಣ ಹಿಡುವಳಿಯಲ್ಲೇ ಮಿಶ್ರ ಬೆಳೆ ಪದ್ದತಿಯನ್ನು ಅಳವಡಿಸಿಕೊಂಡು ಅಡಿಕೆ ತಟ್ಟೆ ತಯಾರಿಕೆ ಮುಂತಾದ ಕೃಷಿ ಆಧಾರಿತ ಸಣ್ಣ ಉದ್ದಿಮೆಗಳನ್ನು ಕಟ್ಟಿಕೊಂಡು ಉತ್ತಮ ಮಾರುಕಟ್ಟೆಯನ್ನು ಕಂಡುಕೊಂಡಿದ್ದಾರೆ. ಇಂತಹ ಸುಸ್ಥಿರ ಬದುಕಿನ ಮೇಲೆ ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಹೋರಾಟಗಾರರು ತಿಳಿಸಿದರು.

ಜಿಬಿಎ ಅನುಷ್ಠಾ ನಗೊಳಿಸುತ್ತಿರುವ ಬಿಡದಿ ಸಮಗ್ರ ಉಪ ನಗರ ಯೋಜನೆಗಾಗಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ 1987ರ ಕಲಂ 17(1)ರ ಅಡಿಯಲ್ಲಿ 2025ರ ಮಾ.13 ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ತಕ್ಷಣವೇ ಸುಮಾರು 3,500ಕ್ಕೂ ಹೆಚ್ಚು ಸಣ್ಣ ಮತ್ತು ಅತಿ ಸಣ್ಣ ರೈತರು ಈ ಭೂ ಸ್ವಾಧೀನಕ್ಕೆ ಒಪ್ಪಿಗೆ ಇಲ್ಲ ಎಂದು ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರೆ. ಇದುವರೆಗೂ ಈ ಯಾವ ರೈತರ ಆಕ್ಷೇಪಣೆಗಳನ್ನು ಸರಕಾರ ಆಲಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಒಂದೂವರೆ ವರ್ಷದಿಂದ ವಿವಿಧ ಮಾದರಿಯಲ್ಲಿ ತಮ್ಮ ಬಲವಾದ ವಿರೋಧವನ್ನು ಇಲ್ಲಿನ ರೈತರು ದಾಖಲಿಸಿದ್ದು, 428ಕ್ಕೂ ಹೆಚ್ಚು ದಿನಗಳಿಂದ ಅನಿರ್ದಿಷ್ಟಾ ವಧಿ ಧರಣಿ ನಡೆಸುತ್ತಾ ಬಂದಿದ್ದರೂ ಭಾದಿತ ರೈತರ ಜೊತೆ ಯಾವುದೇ ಸಮಾಲೋಚನೆ ನಡೆಸದೇ ಸಂಪುಟ ಅನುಮೋದನೆ ನೀಡಿರುವುದು ರೈತರ ಪ್ರಜಾಪ್ರಭುತ್ವ ಹಕ್ಕುಗಳ ನಗ್ನ ಉಲ್ಲಂಘನೆ ಹಾಗೂ ಸರ್ವಾಧಿಕಾರಿ ಕ್ರಮ. ಕೂಡಲೇ ಸಿದ್ದರಾಮಯ್ಯ ಸರಕಾರ ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

‘ಸರಕಾರದ ರೈತ ವಿರೋಧಿ ನಡೆಯಿಂದಾಗಿ ಬಿಡದಿ ಮತ್ತೊಂದು ದೇವನಹಳ್ಳಿ ಹೋರಾಟ ಆಗಲಿದೆ. ಇದೇ ವೇಳೆ ಸಿದ್ದರಾಮಯ್ಯ ಸರಕಾರಕ್ಕೆ ಮೂರು ವರ್ಷ ತುಂಬಲಿದೆ. ಬಿಡದಿ ಟೌನ್‍ಶಿಪ್ ಯೋಜನೆಗೆ ರೈತರು ಯಾವುದೇ ಕಾರಣಕ್ಕೂ ಭೂಮಿ ಕೊಡುವುದಿಲ್ಲ. ಸರಕಾರ, ರಾಜಧಾನಿಯನ್ನು ಬಂಡವಾಳಿಗರ ಬೆಂಗಳೂರು ಮಾಡಲಿಕ್ಕೆ ಹೊರಟಿದೆ. ಇದರ ವಿರುದ್ಧ ಹೋರಾಟ ನಡೆಯಬೇಕಾಗುತ್ತದೆ. ಬಂಡವಾಳಿಗರ ಪರ ಆಡಳಿತ ನಡೆಸಿದ್ದೇ ಆದಲ್ಲಿ, ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರ ಕಳೆದುಕೊಳ್ಳುತ್ತದೆ. ಬಿಡದಿ ಟೌನ್‍ಶಿಪ್ ಯೋಜನೆಯನ್ನು ಕೂಡಲೇ ಕೈಬಿಡಬೇಕು’

-ನೂರ್ ಶ್ರೀಧರ್ ಸಂಯುಕ್ತ ಹೋರಾಟ ಕರ್ನಾಟಕ

‘ಕೃಷಿ ಪ್ರದೇಶವನ್ನು ನಾಶ ಮಾಡಿ ನಿರ್ಮಾಣಗೊಂಡ ಬಡಾವಣೆಗಳು ಅಗತ್ಯ ಮೂಲಭೂತ ಸೌಕರ್ಯಗಳು ಇಲ್ಲದೇ ಬೆಂಗಳೂರು ಮಹಾನಗರದ ಭೂತಾಪಮಾನವನ್ನು ಗಣನೀಯವಾಗಿ ಹೆಚ್ಚಿಸಿ ರಿಯಲ್ ಎಸ್ಟೇಟ್ ಕಾಂಕ್ರಿಟ್ ಕಾಡಾನ್ನಾಗಿಸಿದೆ. ಲಕ್ಷಾಂತರ ನಿವೇಶನಗಳು, ನೂರಾರು ಅಪಾರ್ಟ್‍ಮೆಂಟ್‍ಗಳು ಖಾಲಿ ಬಿದ್ದಿವೆ. ಇಂತಹ ದುಸ್ಥಿತಿಯನ್ನು ವಿಸ್ತರಿಸಿ ಮಹಾನಗರದ ಜನ ಜೀವನವನ್ನು ಮತ್ತಷ್ಟು ಕಷ್ಟಕ್ಕೆ ಸಿಲುಕಿಸುವ ಬಿಡದಿ ಟೌನ್‍ಶಿಪ್ ನಂತಹ ಪರಿಸರ ವಿರೋಧಿ ಂಜನೆಗಳನ್ನು ಪರಿಸರವಾದಿಗಳು, ಸಾಹಿತಿಗಳು, ನೀತಿ-ನಿರೂಪಕರು ಸೇರಿದಂತೆ ಎಲ್ಲ ಕಾಳಜಿಯುಳ್ಳ ನಾಗರಿಕರು ವಿರೋಧಿಸಬೇಕು’

-ಬಡಗಲಪುರ ನಾಗೇಂದ್ರ ಸಂಯುಕ್ತ ಹೋರಾಟ ಕರ್ನಾಟಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X