Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಸೂಪರ್ ಎಲ್ ನೀನೋ’ ಎದುರಿಸಲು ಸಜ್ಜಾಗಿ :...

‘ಸೂಪರ್ ಎಲ್ ನೀನೋ’ ಎದುರಿಸಲು ಸಜ್ಜಾಗಿ : ಡಿಸಿಎಂ ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ25 Jun 2026 6:34 PM IST
share
‘ಸೂಪರ್ ಎಲ್ ನೀನೋ’ ಎದುರಿಸಲು ಸಜ್ಜಾಗಿ : ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ಸೂಪರ್ ಎಲ್ ನೀನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿಯೂ ಆದ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.

ಗುರುವಾರ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಾಗತಿಕ ಹವಾಮಾನ ವೈಪರೀತ್ಯದ ಭಾಗವಾಗಿ ಸೂಪರ್ ಎಲ್ ನೀನೋ ಪರಿಣಾಮದಿಂದ ರಾಜ್ಯದಲ್ಲಿ ಉಂಟಾಗಬಹುದಾದ ಸಂಭವನೀಯ ಪರಿಣಾಮಗಳು, ಮಳೆಯ ಕೊರತೆಯಿಂದ ಜನರು ಎದುರಿಸಬಹುದಾದ ಸಮಸ್ಯೆಗಳು ಹಾಗೂ ರಾಜ್ಯದ ಕೆಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳ ಕುರಿತು ಚರ್ಚಿಸಿದರು.

ಪ್ರಮುಖವಾಗಿ ಸಂಭವನೀಯ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು, ಕೃಷಿ ಚಟುವಟಿಕೆಗಳ ನಿರ್ವಹಣೆ ಹಾಗೂ ನೀರಿನ ಸಂರಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾವಾರು ಕಾರ್ಯಯೋಜನೆಗಳನ್ನು ಸಿದ್ಧಪಡಿಸಬೇಕು. ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯತ್ ಸಿಇಒಗಳಿಗೆ ಅಗತ್ಯ ಸೂಚನೆಗಳನ್ನು ನೀಡಬೇಕು ಎಂದು ಅವರು ಸೂಚಿಸಿದರು.

ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲು ಅನುಮತಿಯನ್ನು ತ್ವರಿತಗತಿಯಲ್ಲಿ ನೀಡಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ವಿಳಂಬವಾಗಬಾರದು. ಅಗತ್ಯವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದ ಅವರು, ಜಲಾಶಯಗಳ ನೀರಿನ ಮಟ್ಟ, ಅಂತರ್ಜಲ ಪರಿಸ್ಥಿತಿ ಹಾಗೂ ನೀರಿನ ಬಳಕೆಯ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುವ ಜತೆಗೆ, ಯಾವುದೇ ರೀತಿಯ ಪ್ರಕೃತಿ ವಿಕೋಪ ಅಥವಾ ಬರ ಪರಿಸ್ಥಿತಿ ಎದುರಾದರೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಬಂಧಿತ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X