ಎನ್.ಎಸ್.ಶಂಕರ್ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಲೇಖಕ, ಚಲನಚಿತ್ರ ನಿರ್ದೇಶಕ ಎನ್.ಎಸ್. ಶಂಕರ್ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಿರಿಯ ಪತ್ರಕರ್ತ ಮತ್ತು ಪ್ರತಿಭಾವಂತ ಚಿತ್ರ ನಿರ್ದೇಶಕ ಮತ್ತು ಪ್ರಗತಿಪರ ಚಳವಳಿಗಳ ಒಡನಾಡಿಯಾಗಿದ್ದ ಎನ್.ಎಸ್.ಶಂಕರ್ ಅವರ ಸಾವಿನ ಸುದ್ದಿ ಕೇಳಿ ದು:ಖವಾಯಿತು. ಪ್ರಜಾವಾಣಿ, ಮುಂಗಾರು, ಸುದ್ದಿಸಂಗಾತಿ ಮತ್ತು ಲಂಕೇಶ್ ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ಶಂಕರ್, ಹಲವು ಸಿನೆಮಾಗಳನ್ನು ನಿರ್ದೇಶನ ಮಾಡಿದ್ದರು. ಅವರೊಬ್ಬ ಕನ್ನಡದ ಬಹುಮುಖ ಪ್ರತಿಭೆ. ಇನ್ನಷ್ಟು ಕಾಲ ನಮ್ಮ ಜೊತೆ ಇದ್ದು, ನಮಗೆಲ್ಲ ಮಾರ್ಗದರ್ಶನ ನೀಡಬೇಕಾಗಿತ್ತು. ಅವರ ಕುಟುಂಬವರ್ಗಕ್ಕೆ ಸಂತಾಪಗಳು, ಅವರೆಲ್ಲರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್.ಎಸ್. ಶಂಕರ್ ರವಿವಾರ ಬೆಳಗ್ಗೆ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಿರಿಯ ಪತ್ರಕರ್ತ ಮತ್ತು ಪ್ರತಿಭಾವಂತ ಚಿತ್ರ ನಿರ್ದೇಶಕ ಮತ್ತು ಪ್ರಗತಿಪರ ಚಳವಳಿಗಳ ಒಡನಾಡಿಯಾಗಿದ್ದ ಎನ್.ಎಸ್.ಶಂಕರ್ ಅವರ ಸಾವಿನ ಸುದ್ದಿ ಕೇಳಿ ದು:ಖವಾಯಿತು..ಪ್ರಜಾವಾಣಿ, ಮುಂಗಾರು, ಸುದ್ದಿಸಂಗಾತಿ ಮತ್ತು ಲಂಕೇಶ್ ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ಶಂಕರ್, ಹಲವು ಸಿನೆಮಾಗಳನ್ನು ನಿರ್ದೇಶನ ಮಾಡಿದ್ದರು. ಅವರೊಬ್ಬ ಕನ್ನಡದ ಬಹುಮುಖ… pic.twitter.com/HdyzxinDhD
— Siddaramaiah (@siddaramaiah) June 28, 2026






