Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಸ್‍ಐಆರ್‌ನಿಂದ ಕಾರ್ಮಿಕರ ಮತಗಳು...

ಎಸ್‍ಐಆರ್‌ನಿಂದ ಕಾರ್ಮಿಕರ ಮತಗಳು ಕೈಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಿ : ಮುಖ್ಯಮಂತ್ರಿ

ವಾರ್ತಾಭಾರತಿವಾರ್ತಾಭಾರತಿ28 Jun 2026 8:30 PM IST
share
ಎಸ್‍ಐಆರ್‌ನಿಂದ ಕಾರ್ಮಿಕರ ಮತಗಳು ಕೈಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಿ : ಮುಖ್ಯಮಂತ್ರಿ

ಬೆಂಗಳೂರು : ಕರ್ನಾಟಕದಲ್ಲಿ ಜೂ.30ರಿಂದ ಎಸ್‍ಐಆರ್ ಪ್ರಾರಂಭ ಆಗುತ್ತಿದೆ. ಬಿಜೆಪಿ ಮತಗಳನ್ನು ತೆಗೆಸುತ್ತಿದೆ. ಈ ದೇಶದ ಶ್ರಮಿಕರ, ಕಾರ್ಮಿಕರ ಮತಗಳನ್ನು ಕೈ ಬಿಡಲಾಗುತ್ತಿದೆ. ಕಾರ್ಮಿಕರಿಂದ ಹಿಡಿದು ಎಲ್ಲರೂ ಇದರ ಬಗ್ಗೆ ಎಚ್ಚರದಿಂದ ಇರಬೇಕು. ಮತಗಳು ಕೈ ಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ರವಿವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್ ಜೋಡೊ ಸಭಾಂಗಣದಲ್ಲಿ ನಡೆದ ಎಐಟಿಯುಸಿ (ಇಂಟೆಕ್) 316ನೆ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಇಂಟೆಕ್ ಮೂಲಕ ದೇಶದ ಶ್ರಮಿಕರ, ಕಾರ್ಮಿಕರ ಬಲ ಹೆಚ್ಚಾಗಿದೆ. ಯಾವುದೇ ರಾಜಕೀಯ ತೀರ್ಮಾನ ತೆಗೆದುಕೊಂಡರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಇಂಟೆಕ್ ಸದಸ್ಯರು ಮುಖ್ಯವಾಗುತ್ತಾರೆ. ಇಂದಿರಾಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಇಂಟೆಕ್, ಎನ್‍ಎಸ್‍ಯುಐ, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಅನ್ನು ಕಾಂಗ್ರೆಸ್ ಪಕ್ಷದ ನಾಲ್ಕು ಆಧಾರ ಸ್ಥಂಭಗಳು ಎಂದು ಹೇಳಿದ್ದರು. ನಾನು ವಿದ್ಯಾರ್ಥಿ ನಾಯಕನಾಗಿ ನಂತರ ಮುಖ್ಯವಾಹಿನಿ ರಾಜಕೀಯಕ್ಕೆ ಬಂದವನು. ನನಗೆ ಸಂಘಟನೆಯ ಶಕ್ತಿಯ ಬಗ್ಗೆ ಅರಿವಿದೆ ಎಂದು ಅವರು ಹೇಳಿದರು.

ಕಾರ್ಮಿಕರಿಲ್ಲದೇ ದೇಶದ ಆರ್ಥಿಕ ಪ್ರಗತಿ ಅಸಾಧ್ಯ: ಕೃಷಿಕ, ಶಿಕ್ಷಕ, ಸೈನಿಕ, ಕಾರ್ಮಿಕರು ಇಲ್ಲದೇ ಸಮಾಜ ಮುನ್ನಡೆಯದು. ಈ ದೇಶಕ್ಕೆ ಕಾರ್ಮಿಕರ ಶ್ರಮ, ಶಕ್ತಿ, ಬದ್ಧತೆ ಸಾಕಷ್ಟು ಕೊಡುಗೆಯನ್ನು ನೀಡಿದೆ. ಕಾರ್ಮಿಕ ಇಲ್ಲದೇ ಹೋದರೆ ಯಾವುದೇ ದೇಶದ ಆರ್ಥಿಕತೆ ಬೆಳೆಯುವುದಿಲ್ಲ. ಉದ್ದಿಮೆದಾರರು ಪ್ರಬಲರಾದರೆ ಕಾರ್ಮಿಕರೂ ಬಲವಾಗುತ್ತಾರೆ. ಜೊತೆಗೂಡಿದರೆ ಆರಂಭ, ನಂತರ ಪ್ರಗತಿ ಎಂದು ಶಿವಕುಮಾರ್ ತಿಳಿಸಿದರು.

ಸಂಜೀವ್ ರೆಡ್ಡಿ ಸಾಕಷ್ಟು ವರ್ಷದಿಂದ ಈ ಸಂಘಟನೆಯನ್ನು ಅಚ್ಚುಕಟ್ಟಾಗಿ ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಆಸ್ಕರ್ ಫರ್ನಾಂಡೀಸ್‌ ಹಾಗೂ ಮಲ್ಲಿಕಾರ್ಜುನ ಖರ್ಗೆ ಕಾರ್ಮಿಕ ಸಚಿವರಾಗಿದ್ದಾಗ ಕ್ರಾಂತಿಕಾರಿ ಬದಲಾವಣೆ ತಂದರು. ಕಾರ್ಮಿಕ ಚಳವಳಿಗೆ ಮಾನ್ಯತೆ ನೀಡಿದರು ಎಂದು ಮುಖ್ಯಮಂತ್ರಿ ಸ್ಮರಿಸಿದರು.

ಕಾರ್ಮಿಕರಿಗಾಗಿ ಇಎಸ್‍ಐ ಆಸ್ಪತ್ರೆ ತಂದರು. ಕಾರ್ಮಿಕರ ಮಕ್ಕಳಿಗಾಗಿ ಇಎಸ್‍ಐ ಆಸ್ಪತ್ರೆಗಳಲ್ಲಿ ಉಚಿತ ಮೆಡಿಕಲ್ ಸೀಟುಗಳನ್ನು ನೀಡಲಾಯಿತು. 10-15 ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಲಾಯಿತು. ಇಬ್ಬರ ನೇತೃತ್ವದಲ್ಲಿ ಕಾರ್ಮಿಕರ ಜೀವನದಲ್ಲಿ ಬದಲಾವಣೆ ಪ್ರಾರಂಭವಾಯಿತು. ಮಲ್ಲಿಕಾರ್ಜುನ ಖರ್ಗೆ ಈಗ ಎಐಸಿಸಿ ಅಧ್ಯಕ್ಷರಾಗಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

ಕಾರ್ಮಿಕರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳು ಜಾರಿ: ನಾನು ಸರಕಾರದ ಪ್ರತಿನಿಧಿಯಾಗಿದ್ದೇನೆ. ನಾನು ಎಂದಿಗೂ ನಿಮ್ಮ ಪರವಾಗಿ, ಕಾರ್ಮಿಕರ ಪರವಾಗಿ ಇರುತ್ತೇನೆ. ನಾವು ತಂದಿರುವ ಐದು ಗ್ಯಾರಂಟಿ ಯೋಜನೆಗಳು ಕಾರ್ಮಿಕರ, ಮಹಿಳೆಯರ ಹಾಗೂ ಜನಸಾಮಾನ್ಯರ ಪರವಾಗಿವೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿಯಿಂದ ಹಿಡಿದು ಎಲ್ಲರೂ ಟೀಕೆ ಮಾಡಿದರು ಎಂದು ಅವರು ಹೇಳಿದರು.

ದೇಶದಲ್ಲಿ ಬೆಲೆಏರಿಕೆ ಆಗಿದ್ದರಿಂದ ನಮ್ಮ ಗ್ಯಾರಂಟಿ ಯೋಜನೆಗಳು ಜನರ ಹಿತಕ್ಕಾಗಿ ಜಾರಿಗೆ ತರಲಾಯಿತು. 50 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಹಣ ಪ್ರತಿ ವರ್ಷ ಖರ್ಚು ಮಾಡಲಾಗುತ್ತಿದೆ. ಟೀಕೆ ಮಾಡಿದವರೇ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

2028ಕ್ಕೆ ಕರ್ನಾಟಕದಲ್ಲಿ ಹಾಗೂ 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಇದಕ್ಕೆ ದೇಶದ ಕಾರ್ಮಿಕರ, ಜನಸಾಮಾನ್ಯರ ಬೆಂಬಲ ಇರಬೇಕು. ನಾವೆಲ್ಲರೂ ಒಟ್ಟಾಗಿ ಸಾಗೋಣ, ಕೆಲಸ ಮಾಡೋಣ ಕಾಂಗ್ರೆಸ್ ಪಕ್ಷದ ಬಲವನ್ನು ಹೆಚ್ಚಿಸೋಣ.

-ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X