Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮದ್ಯ ಮಾರಾಟ ಸನ್ನದುಗಳು ಇ-ಹರಾಜು...

ಮದ್ಯ ಮಾರಾಟ ಸನ್ನದುಗಳು ಇ-ಹರಾಜು ಅಧಿಸೂಚನೆ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ2 July 2026 6:50 PM IST
share
ಮದ್ಯ ಮಾರಾಟ ಸನ್ನದುಗಳು ಇ-ಹರಾಜು ಅಧಿಸೂಚನೆ ಪ್ರಕಟ

ಬೆಂಗಳೂರು : ಸ್ಥಗಿತಗೊಂಡಿರುವ ಮತ್ತು ಹಂಚಿಕೆಯಾಗದೆ ಉಳಿದಿರುವ ಒಟ್ಟು 579 ಮದ್ಯ ಮಾರಾಟದ ಸನ್ನದುಗಳನ್ನು ಪಾರದರ್ಶಕ ಇ-ಹರಾಜಿನ ಮೂಲಕ ಹಂಚಿಕೆ ಮಾಡಲು ಅಬಕಾರಿ ಇಲಾಖೆ ಆಯುಕ್ತ ಆರ್.ವೆಂಕಟೇಶ್‍ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ.

ಸ್ಥಗಿತಗೊಂಡಿರುವ ಮತ್ತು ಹಂಚಿಕೆಯಾಗದೆ ಇರುವ ಸಿಎಲ್-2 ಮತ್ತು ಸಿಎಲ್-11 ‘ಸಿ’ ಸನ್ನದುಗಳನ್ನು ಸಿಎಲ್-2 ಎ ಮತ್ತು ಸ್ಥಗಿತಗೊಂಡಿರುವ ಸಿಎಲ್-9 ಸನ್ನದ್ದುಗಳನ್ನು ಸಿಎಲ್-9 ‘ಎ’ ಎಂದು ವರ್ಗೀಕರಿಸಿ 569 ಸನ್ನದುಗಳ ಪೈಕಿ ಹರಾಜು ಪ್ರಕ್ರಿಯೆಗೆ 483 ಸಿಎಲ್(2-ಎ) ಮತ್ತು 96 ಸಿಎಲ್(9-ಎ) ಸನ್ನದುಗಳನ್ನು ಇ-ಹರಾಜಿ ಮಾಡಲಾಗುತ್ತಿದೆ.

ಈ ಹರಾಜು ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿ-ಎ ವರ್ಗದ ವರಿಗೆ ಶೇ.5.25ರಷ್ಟು, ಪರಿಶಿಷ್ಟ ಜಾತಿ-ಬಿ ವರ್ಗದ ವರಿಗೆ ಶೇ. 5.25ರಷ್ಟು, ಪರಿಶಿಷ್ಟ ಜಾತಿ-ಸಿ ವರ್ಗದ ವರಿಗೆ ಶೇ.4.50ರಷ್ಟು ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ ಶೇ.3ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗಿದೆ.

ಇ-ಹರಾಜನ್ನು ಕೇಂದ್ರ ಸರಕಾರದ ಸ್ವಾಮ್ಯದ ಸಂಸ್ಥೆಯಾದ ಎಂಎಸ್‍ಟಿಸಿ ಲಿಮಿಟೆಡ್‍ನ ಇ-ಪೋರ್ಟಲ್‍ನಲ್ಲಿ ನಡೆಸಲಾಗುತ್ತದೆ. ಇ-ಹರಾಜಿನ ವೇಳಾಪಟ್ಟಿಯ ವಿವರಗಳು ಕರ್ನಾಟಕ ರಾಜ್ಯ ಅಬಕಾರಿ ಇಲಾಖೆಯ ಪೋರ್ಟಲ್ https://stateexcise.karnataka.gov.in ಮತ್ತು ಇ-ಹರಾಜು ವೇದಿಕೆ MSTC ಯ ಪೋರ್ಟಲ್ https://www.mstcecommerce.com ನಲ್ಲಿ ಲಭ್ಯವಿರುತ್ತದೆ.

ಇ-ಹರಾಜಿನ ವೇಳಾಪಟ್ಟಿ ಬಿಡ್‍ದಾರರ ನೋಂದಣಿಯು ಜು.3ರಿಂದ ಪ್ರಾರಂಭವಾಗಲಿದೆ. ಸಂಭಾವ್ಯ ಬಿಡ್‍ದಾರರಿಗೆ ಹಾಗೂ ಜಿಲ್ಲಾ ಇ-ಹರಾಜು ನೋಡಲ್ ಅಧಿಕಾರಿಗಳಿಗೆ ಜು.6ರಿಂದ 14ರ ವರೆಗೆ ತರಬೇತಿ ಆಯೋಜಿಸಲಾಗಿದೆ. ನೇರ ಹರಾಜು (Live Bidding )ಜು.24ರಿಂದ 31ರ ವರೆಗೆ ಜರುಗಲಿದೆ.

ಇ-ಹರಾಜು ಅಧಿಸೂಚನೆ ಮತ್ತು ಬಿಡ್ಡಿಂಗ್‍ಗಾಗಿ ನೋಂದಾಯಿಸಿಕೊಳ್ಳುವ ವಿಧಾನವು ಅಬಕಾರಿ ಇಲಾಖೆಯ https://stateexcise.karnataka.gov.in ರಲ್ಲಿ ಮತ್ತು MSTC ಇ-ಹರಾಜು ಪೋರ್ಟಲ್ https://www.mstcecommerce.com. ನಲ್ಲಿ ಲಭ್ಯವಿರುತ್ತದೆ ಎಂದು ಅಬಕಾರಿ ಆಯುಕ್ತ ಆರ್.ವೆಂಕಟೇಶಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X