ಕರಾವಳಿ-ಮಲೆನಾಡು ಪ್ರವಾಸೋದ್ಯಮ: ಸಿಎಂ ಭೇಟಿಯಾದ ನಟ ರಿಷಬ್ ಶೆಟ್ಟಿ

ಬೆಂಗಳೂರು : ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಚಿತ್ರನಟ ರಿಷಬ್ ಶೆಟ್ಟಿ ಭೇಟಿಯಾಗಿ ಚರ್ಚೆ ನಡೆಸಿದರು.
ರವಿವಾರ ಇಲ್ಲಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ಅವರು ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಬೆಳವಣಿಗೆ ಕುರಿತು ಸಮಾಲೋಚನೆ ನಡೆಸಿದರು.
ಇತ್ತೀಚೆಗಷ್ಟೇ ರಾಜ್ಯ ಸರಕಾರ ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮದ ಅಧಿಕೃತ ಪ್ರಚಾರ ರಾಯಭಾರಿಯಾಗಿ ನೇಮಕಗೊಂಡಿದ್ದ ರಿಷಬ್ ಶೆಟ್ಟಿ, ಆ ಭಾಗದ ಪ್ರವಾಸೋದ್ಯಮದ ಅಭಿವೃದ್ಧಿ ಹಾಗೂ ನೂತನ ನೀತಿಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದು, ಪ್ರಮುಖವಾಗಿ ಕರಾವಳಿ ಹಾಗೂ ಮಲೆನಾಡಿನ ಸಂಸ್ಕೃತಿ ಮತ್ತು ಉದ್ಯಮ, ಚಿತ್ರೀಕರಣಕ್ಕೆ ಹೆಚ್ಚಿನ ಸೌಲಭ್ಯ ಒದಗಿಸುವ ಬಗ್ಗೆ ಉಲ್ಲೇಖಿಸಿದರು ಎಂದು ಗೊತ್ತಾಗಿದೆ.
¸
Next Story




