ʼಶಿಸ್ತು ಉಲ್ಲಂಘನೆʼ ಕೆ.ಸುಧಾಕರ್ , ವಿಶ್ವನಾಥ್, ರೇಣುಕಾಚಾರ್ಯಗೆ ನೋಟಿಸ್

ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ
ಬೆಂಗಳೂರು : ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರಿಗೆ ನೋಟಿಸ್ ಜಾರಿ ಮಾಡಲು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಗೊತ್ತಾಗಿದೆ.
ರವಿವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿಯಲ್ಲಿನ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಲಾಯಿತು. ಪಕ್ಷದ ಆಂತರಿಕ ವಿಷಯದ ಕುರಿತು ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ತಂದಿದ್ದಕ್ಕಾಗಿ ಮೂವರಿಗೆ ನೋಟಿಸ್ ಜಾರಿ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
Next Story




