‘ಲಿಂಗತ್ವ ಅಲ್ಪಸಂಖ್ಯಾತರ ಕಲ್ಯಾಣ ಮಂಡಳಿ' ರಚಿಸಲು ಕೋರಿ ಸಿಎಂಗೆ ಮನವಿ

ಬೆಂಗಳೂರು : ರಾಜ್ಯದಲ್ಲಿನ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರ ಅಭಿವೃದ್ಧಿಗೆ ಪ್ರತ್ಯೇಕವಾದ ‘ಲಿಂಗತ್ವ ಅಲ್ಪಸಂಖ್ಯಾತರ ಕಲ್ಯಾಣ ಮಂಡಳಿ' ರಚಿಸಿ, ಮಂಡಳಿಗೆ ಸಮುದಾಯದವರನ್ನೇ ಅಧ್ಯಕ್ಷರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿದೆ.
ಗುರುವಾರ ‘ಒಂದೆಡೆ’ ಸಂಸ್ಥೆ ಸಂಸ್ಥಾಪಕಿ, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಡಾ. ಅಕ್ಕೈ ಪದ್ಮಶಾಲಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
Next Story




