ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕಾತಿ

ಬೆಂಗಳೂರು : ರಾಜ್ಯ ಸರಕಾರದ ಅಭಿವೃದ್ಧಿ ಯೋಜನೆಗಳ ಜಾರಿ, ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆಗಾಗಿ ಹೊಸ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದೆ.
ಸ್ಥಳೀಯ ಆಡಳಿತದ ಮೇಲ್ವಿಚಾರಣೆಯನ್ನು ಬಲಪಡಿಸಲು ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ.
ನೇಮಕಾತಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಸುಬೋದ್ ಯಾದವ್ ಅವರನ್ನು ಕಲಬುರಗಿ ಜಿಲ್ಲೆಗೆ, ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಮ್ ಅವರನ್ನು ಕೋಲಾರ ಜಿಲ್ಲೆಗೆ, ತೋಟಗಾರಿಕೆ ಮತ್ತು ರೇಶ್ಮೆ ಇಲಾಖೆಯ ಕಾರ್ಯದರ್ಶಿ ಆರ್. ಗಿರೀಶ್-ಚಿಕ್ಕಮಗಳೂರು ಜಿಲ್ಲೆಗೆ ನೇಮಕ ಮಾಡಲಾಗಿದೆ.
ಎಲ್ಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಮ್ಮ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಿದ ಅಂಶಗಳ ವರದಿಯನ್ನು DIS portal ನಲ್ಲಿ ಅಪ್‍ಲೋಡ್ ಮಾಡುವಂತೆ ಆದೇಶದಲ್ಲಿ ಸೂಚನೆ ನೀಡಲಾಗಿದೆ.
Next Story




